Karnataka ನಾಳೆಯಿಂದ ವಿಧಾನ ಕಲಾಪ: ಹಲವು ಮಸೂದೆಗಳಿಗೆ ಅಂಗೀಕಾರ ಪಡೆಯುವ ಸಾಧ್ಯತೆ
ಹೊರಗುತ್ತಿಗೆ ಮೀಸಲಾತಿ, ಕನ್ನಡ ಭಾಷಾ ತಿದ್ದುಪಡಿ ಮಸೂದೆ ಮಂಡನೆ?
Team Udayavani, Jul 14, 2024, 6:55 AM IST
ಬೆಂಗಳೂರು: ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ, ಮುಡಾ ಹಗರಣಗಳನ್ನು ಮುಂದಿರಿಸಿ ಸರಕಾರದ ವಿರುದ್ಧ ಮುಗಿಬೀಳಲು ಬಿಜೆಪಿ-ಜೆಡಿಎಸ್ ಸಜ್ಜಾಗಿವೆ. ಇದರ ನಡುವೆ ಹಲವು ಮಸೂದೆಗಳಿಗೆ ಸದನದಲ್ಲಿ ಸರಕಾರ ಅಂಗೀಕಾರ ಪಡೆಯುವ ಸಾಧ್ಯತೆಯಿದೆ.
ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿ ಅಧಿವೇಶನ ನಡೆಯುತ್ತಿದ್ದು, ಬಿಜೆಪಿ, ಜೆಡಿಎಸ್ ವಿಪಕ್ಷ ಸ್ಥಾನದಲ್ಲಿದ್ದರೂ ಲೋಕಸಭೆ ಚುನಾವಣ ಫಲಿತಾಂಶದಿಂದ ಹೊಸ ಹುರುಪು ಪಡೆದಿವೆ. ಇದರೊಂದಿಗೆ ಮುಖ್ಯಮಂತ್ರಿ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಒಳಗೆ ನಡೆಯುತ್ತಿರುವ ಪೈಪೋಟಿ ಸರಕಾರಕ್ಕೆ ಚಿಂತೆ ಹುಟ್ಟಿಸಿದ್ದರೂ ವಿಪಕ್ಷಗಳ ಏಟಿಗೆ ಸೂಕ್ತ ಎದಿರೇಟು ನೀಡಲು ಸರಕಾರ ಸಜ್ಜಾಗಿದೆ.
ವಿಧಾನಪರಿಷತ್‌ನಲ್ಲಿ ವಿಪಕ್ಷ ನಾಯಕರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿರು ವುದರಿಂದ ಅವರ ಸ್ಥಾನ ತುಂಬುವ ಕಸರತ್ತು ಬಿಜೆಪಿಯಲ್ಲಿ ನಡೆದಿದೆ.
ವಿಧಾನಸಭೆಯಲ್ಲಿ ಜೆಡಿಎಸ್ ನಾಯಕರಾಗಿದ್ದ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗಿರುವುದರಿಂದ ಅವರ ಸ್ಥಾನ ಭರ್ತಿ ಮಾಡುವ ತಾಲೀಮನ್ನು ಜೆಡಿಎಸ್ ನಡೆಸಿದೆ. ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಈಗ ಸಂಸದರಾಗಿದ್ದಾರೆ.
ಗ್ರೇಟರ್ ಬೆಂಗಳೂರು ಮಸೂದೆ?
ಸೊಸೈಟಿಗಳ ಸದಸ್ಯರಿಗೆ ಮತ ಹಾಕುವ ಅಧಿಕಾರ ನೀಡಲು ಅನುಕೂಲ ಮಾಡಿಕೊಡಬಲ್ಲ ಕರ್ನಾಟಕ ಸಹಕಾರ ಸೊಸೈಟಿಗಳ (ತಿದ್ದುಪಡಿ) ಮಸೂದೆ ಮತ್ತು ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆಗಳಿಗೆ ಕಳೆದ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿತ್ತು. ಆದರೆ ವಿಧಾನಪರಿಷತ್‌ನಲ್ಲಿ ಅನುಮೋದನೆಯಾಗದೆ ಪರಿಶೀಲನ ಸಮಿತಿಯ ಮುಂದಿದೆ. ಈ ಬಗ್ಗೆ ಸಮಿತಿಯ ಅಭಿಪ್ರಾಯವು ಮೇಲ್ಮನೆಯಲ್ಲಿ ಮಂಡನೆಯಾಗಬಹುದು. ಅಲ್ಲದೆ ಬಿಬಿಎಂಪಿಯನ್ನು ವಿಸ್ತರಣೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2024 ಮಂಡನೆಯಾಗುವ ಸಾಧ್ಯತೆಗಳಿವೆ.
ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಮಸೂದೆ?
ಸಾರ್ವಜನಿಕ ವಲಯದ ಸಂಸ್ಥೆಗಳು ಹಾಗೂ ಸರಕಾರಿ ಸೇವೆಯ ಯಾವುದೇ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಬದಲು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ವೇಳೆ ಮೀಸಲಾತಿ ನಿಗದಿಪಡಿಸುವ ಸಂಬಂಧ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿಯಲ್ಲಿ ಮೀಸಲಾತಿ) (ತಿದ್ದುಪಡಿ) ಮಸೂದೆಯೂ ಮಂಡನೆಯಾಗಬಹುದು ಎನ್ನಲಾಗಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ, ವೈದ್ಯಕೀಯ ಸೇವೆಯಲ್ಲಿರುವವರ ಮೇಲಿನ ದೌರ್ಜನ್ಯ ಪ್ರಕರಣ, ಆಸ್ಪತ್ರೆಗಳ ಆಸ್ತಿ-ಪಾಸ್ತಿ ಹಾನಿಯನ್ನು ತಡೆಗಟ್ಟುವ ಸಲುವಾಗಿ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕಾನೂನು (ತಿದ್ದುಪಡಿ) ಮಸೂದೆ, ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಸಂಸದರನ್ನು ಸೇರಿಸಲು ಕರ್ನಾಟಕ ನರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ 2022ಕ್ಕೆ ತಿದ್ದುಪಡಿ ಸೇರಿ ಒಟ್ಟು 8 ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ.
ಮಿತ್ರಕೂಟಕ್ಕೆ ಅಶೋಕ್ ಒಬ್ಬರೇ ಬಲ
ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಆರ್. ಅಶೋಕ್ ಮಾತ್ರ ಅನು ಭವಿ ನಾಯಕರಾಗಿದ್ದಾರೆ. ಸದ್ಯ ಅವರ ನೇತೃತ್ವ ದಲ್ಲೇ ಅಧಿವೇಶನದಲ್ಲಿ ರಾಜ್ಯ ಸರಕಾರದ ವಿರುದ್ಧ ಸೆಣಸಾಟಕ್ಕೆ ವಿಪಕ್ಷಗಳು ಸಜ್ಜಾಗಿವೆ.
ಎರಡೂ ಸದನಗಳಲ್ಲಿ ಜೆಡಿಎಸ್‌ಗೆ ನಾಯಕರಿಲ್ಲ
ವಿಧಾನಸಭೆ ಮತ್ತು ವಿಧಾನಪರಿಷತ್ ಎರಡರಲ್ಲೂ ಜೆಡಿಎಸ್‌ಗೆ ಇನ್ನೂ ನಾಯಕರ ಆಯ್ಕೆಯಾಗಿಲ್ಲ. ವಿಧಾನಸಭೆಯಲ್ಲಿ ಪಕ್ಷವನ್ನು ಮುನ್ನಡೆಸುತ್ತಿದ್ದ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವ ರಾಗಿರುವುದರಿಂದ ಅಲ್ಲಿ ಹೊಸ ನಾಯಕ ರೊಬ್ಬರ ಹುಡುಕಾಟ ನಡೆಸುವುದು ಅನಿವಾರ್ಯವಾಗಿದೆ. ವಿಧಾನಪರಿಷತ್‌ನಲ್ಲಿ ಜೆಡಿಎಸ್ ಶಾಸಕರ ಸಂಖ್ಯೆ ಕಡಿಮೆಯಿದೆ. ಹೀಗಾಗಿ ಇಲ್ಲೂ ಪ್ರಬಲ ನಾಯಕತ್ವಕ್ಕೆ ಶೋಧ ನಡೆದಿದೆ.
ಕಲಾಪ ವಿಸ್ತರಣೆ?
ಸೋಮವಾರ ಬೆಳಗ್ಗೆ 10.30ಕ್ಕೆ ಅಧಿ ವೇಶನ ಸಮಾವೇಶಗೊಳ್ಳಲಿದ್ದು, ಇತ್ತೀಚೆಗೆ ಅಗಲಿದ ಗಣ್ಯರಿಗೆ ಮೊದಲ ದಿನ ಸಂತಾಪ ಸೂಚಿಸಲಾಗುತ್ತದೆ. ಮೊದಲ ದಿನ ಸಂತಾಪ ಸಲ್ಲಿಕೆಗೆ ಸೀಮಿತವಾಗುವ ಸಾಧ್ಯತೆಗಳಿವೆ. ಜು. 16ರಂದು ಕಲಾಪ ನಡೆಯಲಿದ್ದು, ಜು. 17ರಂದು ಸರಕಾರಿ ರಜೆ ಇರುವುದರಿಂದ ಕಲಾಪ ಇರುವುದಿಲ್ಲ. ಜು. 18 ಮತ್ತು 19 ರಂದು ಕಲಾಪ ನಡೆಯಲಿದ್ದು, ಶನಿವಾರ ಹಾಗೂ ರವಿವಾರ ರಜೆ ಇರಲಿದೆ. ಮತ್ತೆ ಜು. 22ರಿಂದ 26ರ ವರೆಗೆ ಅಧಿವೇಶನ ನಡೆಯ ಲಿದ್ದು, ಇನ್ನೂ ಒಂದು ವಾರ ಕಲಾಪ ವಿಸ್ತರಣೆ ಮಾಡಲು ಬಿಜೆಪಿ, ಜೆಡಿಎಸ್ ಆಗ್ರಹಿಸಿವೆ. ಈ ಬಗ್ಗೆ ಕಲಾಪ ಸಲಹಾ ಸಮಿತಿಯಲ್ಲಿ ಚರ್ಚೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.