ದೇಶದ ಗ್ರೀನರ್‌ ಎಕಾನಮಿಯ ಸಂಶೋಧನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿ: ನಿತಿನ್‌ ಗಡ್ಕರಿ


Team Udayavani, Nov 16, 2021, 5:51 PM IST

ದೇಶದ ಗ್ರೀನರ್‌ ಎಕಾನಮಿಯ ಸಂಶೋಧನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿ: ನಿತಿನ್‌ ಗಡ್ಕರಿ

ಬೆಂಗಳೂರು: ಇವಿ ಹಾಗೂ ಗ್ರೀನ್‌ ಹೈಡ್ರೋಜನ್‌ ನಂತಹ ಹಲವಾರು ಕ್ರಾಂತಿಕಾರಿ ಆವಿಷ್ಕಾರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯ ಅದರಲ್ಲೂ ಬೆಂಗಳೂರು ನಗರ ದೇಶದ ಗ್ರೀನ್‌ ಎಕಾನಮಿಗೆ ಅಪಾರ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದರು.

ನಗರದ ಆರ್‌ ವಿ ಶಿಕ್ಷಕರ ಕಾಲೇಜಿನ ಸಭಾಂಗಣದಲ್ಲಿ ದಿವಂಗತ ಅನಂತಕುಮಾರ್‌ ಅವರ 3 ನೇ ಪುಣ್ಯತಿಥಿಯ ಸ್ಮರಣಾರ್ಥ ಆಯೋಜಿಸಲಾಗಿದ್ದ ಅನಂತಕುಮಾರ್‌ ಸ್ಮಾರಕ ಉಪನ್ಯಾಸದಲ್ಲಿ ವರ್ಚುಯಲ್‌ ಆಗಿ ಭಾಗವಹಿಸಿ ಅವರು ಮಾತನಾಡಿದರು. ದಿವಂಗತ ಅನಂತಕುಮಾರ್‌ ಅವರೊಂದಿಗೆ ತಮಗಿದ್ದ ಆತ್ಮೀಯ ಕ್ಷಣಗಳನ್ನು ಹಂಚಿಕೊಂಡ ಅವರು, ದೇಶದ ಪ್ರಸಕ್ತ ರಾಜಕಾರಣದಲ್ಲಿ ಅನಂತಕುಮಾರ್‌ ಅವರ ಕೊರತೆ ಎದ್ದು ಕಾಣುತ್ತಿದೆ. ದೇಶ ಅದರಲ್ಲೂ ದಕ್ಷಿಣ ಭಾರತದಲ್ಲಿ ಭಾರತೀಯ ಜನತಾ ಪಕ್ಷದ ಬೆಳವಣಿಗೆಯಲ್ಲಿ ಅನಂತಕುಮಾರ್‌ ಅವರ ಕೊಡುಗೆ ಅಪಾರ. ಅವರು ಕರ್ನಾಟಕ ರಾಜ್ಯದ ಬಿಜೆಪಿ ಅಧ್ಯಕ್ಷರಾಗಿದ್ದ ಸಂಧರ್ಭದಲ್ಲಿ ನಾವು ಹಲವು ಲೋಕಸಭಾ ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆವು. ಈ ಮೂಲಕ ಭಾರತೀಯ ಜನತಾ ಪಕ್ಷ ದಕ್ಷೀಣ ಭಾರತದಲ್ಲಿ ತನ್ನ ಖಾತೆಯನ್ನು ತೆರೆಯಲು ಸಾಧ್ಯವಾಯಿತು ಎಂದು ಹೇಳಿದರು.

ವಿಶ್ವದಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷವಾಗಿ ಬೆಳೆಯುವಲ್ಲಿ ಅನಂತಕುಮಾರ್‌ ಅವರಂತಹ ಸದಸ್ಯರ ಕೊಡುಗೆ ಬಹಳ ಅಪಾರವಾಗಿದೆ. ಕಳೆದ ಎರಡು ವರ್ಷಗಳಲ್ಲಿ ಅನಂತಕುಮಾರ್‌, ಅರುಣ್‌ ಜೇಟ್ಲೀ ಹಾಗೂ ಸುಷ್ಮಾ ಸ್ವರಾಜ್‌ ನಂತಹ ಪ್ರಮುಖರನ್ನು ಕಳೆದುಕೊಂಡು ಪಕ್ಷ ಬಡವಾಗಿದೆ. ಅನಂತಕುಮಾರ್‌ ಅವರಿಗೆ ಇನ್ನು ರಾಜಕಾರಣದಲ್ಲಿ ಬಹಳಷ್ಟು ಅವಕಾಶವಿತ್ತು. ಅವರ ಅನಾರೋಗ್ಯದ ಬಗ್ಗೆ ತಿಳಿದುಕೊಳ್ಳುವಲ್ಲಿ ಆದ ತಡದಿಂದಾಗಿ ಅವರನ್ನು ಅಕಾಲಿಕವಾಗಿ ಕಳೆದುಕೊಳ್ಳಬೇಕಾಯಿತು ಎಂದು ದುಖಃವ್ಯಕ್ತಪಡಿಸಿದರು.

ಅನಂತಕುಮಾರ್‌ ಅವರ ಸಾಮಾಜಿಕ ಕಳಕಳಿ ಅಪಾರ: ಸಾಮಾನ್ಯ ಕಾರ್ಯಕರ್ತರೇ ಪಕ್ಷದ ಶಕ್ತಿ ಎಂದು ನಂಬಿದ್ದ ಅನಂತಕುಮಾರ್‌ ಅವರು ಅಪಾರ ಸಾಮಾಜಿಕ ಕಾಳಜಿಯನ್ನು ಹೊಂದಿದ್ದರು. ಅವರು ತಮ್ಮ ಪತ್ನಿ ಡಾ ತೇಜಸ್ವಿನಿ ಅನಂತಕುಮಾರ್‌ ಅವರೊಂದಿಗೆ ಸೇರಿ ಪ್ರಾರಂಭಿಸಿದ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ದೇಶದ ಲಕ್ಷಾಂತರ ಮಕ್ಕಳ ಹಸಿವನ್ನು ಇಂದಿಗೂ ನೀಗಿಸುತ್ತಿದೆ ಎಂದರು.

ದೇಶದ ಗ್ರೀನ್‌ ಎಕಾನಮಿಯಲ್ಲಿ ರಾಜ್ಯ ಬೆಂಗಳೂರು ನಗರದ ಕೊಡುಗೆ ಅಪಾರ: ದೇಶದಲ್ಲಿ ಗ್ರೀನ್‌ ಎಕಾನಮಿ ಬಹಳ ವೇಗವಾಗಿ ಅಭಿವೃದ್ದಿಗೊಳ್ಳುತ್ತಿದೆ. ಇವಿ ಹಾಗೂ ಗ್ರೀನ್‌ ಹೈಡ್ರೋಜನ್‌ ನಂತಹ ಕ್ಷೇತ್ರಗಳಲ್ಲಿ ಬೆಂಗಳೂರು ನಗರದ ಸ್ಟಾರ್ಟ್‌ ಅಪ್‌ ಗಳು ಪ್ರಮುಖ ಸಂಶೋಧನೆಯನ್ನು ಕೈಗೊಂಡಿವೆ. ಕರ್ನಾಟಕ ರಾಜ್ಯದಲ್ಲಿ ಇಥೆನಾಲ್‌ ಉತ್ಪಾದನೆ ಹೆಚ್ಚಾಗಿದೆ. ಫ್ಲೇಕ್ಸ್‌ ಇಂಜಿನ್‌ ಹಾಗೂ ಎಲೆಕ್ಟ್ರಿಕ್‌ ವಾಹನಗಳ ಅಭಿವೃದ್ದಿಯಲ್ಲಿ ಹಲವಾರು ಸಂಶೋಧನೆಗಳು ನಡೆಯುತ್ತಿವೆ. ಈ ಸಂಶೋಧನೆಗಳಲ್ಲಿ ಬೆಂಗಳೂರು ನಗರದ ಕೊಡುಗೆ ಬಹಳಷ್ಟಿದೆ. ಮುಂಬರುವ ದಿನಗಳಲ್ಲಿ ದೇಶದಲ್ಲಿ ಹಸಿರು ಆರ್ಥಿಕತೆ ಅಭಿವೃದ್ದಿಯಾಗಲಿದ್ದು, ಅದರಲ್ಲಿ ಬೆಂಗಳೂರು ನಗರದ ಸ್ಟಾರ್ಟ್‌ ಅಪ್‌ಗಳು ನೇತೃತ್ವ ವಹಿಸಲಿದೆ ಎಂದರು.

5 ವರ್ಷಗಳಲ್ಲಿ ಆಟೊಮೊಬೈಲ್‌ ಕ್ಷೇತ್ರದಲ್ಲಿ ನಂ೧ ಸ್ಥಾನ ಹೊಂದುವ ಗುರಿ: ಎಲೆಕ್ಟ್ರಿಕ್‌ ವಾಹನಗಳ ಕ್ಷೇತ್ರದಲ್ಲಿ ಆಗುತ್ತಿರುವ ಸಂಶೋಧನೆಗಳನ್ನು ನೋಡಿದಲ್ಲಿ ಮುಂದಿನ 5 ವರ್ಷಗಳಲ್ಲಿ ಭಾರತ ದೇಶ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವುದರಲ್ಲಿ ಸಂಶಯವಿಲ್ಲ. ಈ ಕ್ಷೇತ್ರದಲ್ಲೂ ಬೆಂಗಳೂರು ನಗರ ಪ್ರಮುಖ ಪಾತ್ರವಹಿಸಲಿದೆ ಎಂದರು.

ಒಳನಾಡು ಜಲಸಾರಿಗೆಗೆ ಹೆಚ್ಚಿನ ಮಹತ್ವ: ದೇಶದಲ್ಲಿ ಸಾಗಾಣಿಕೆ ವೆಚ್ಚ ಹೆಚ್ಚಿದೆ. ಇದನ್ನ ಕಡಿಮೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಅಂತರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ಅದೇ ರೀತಿಯಲ್ಲಿ ಒಳನಾಡು ಜಲಸಾರಿಗೆಗೆ ಮಾರ್ಗಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.

ಬೆಂಗಳೂರು ರಿಂಗ್‌ ರಸ್ತೆ: ಅನಂತಕುಮಾರ್‌ ಅವರ ಬಹುದಿನಗಳ ಕನಸಾಗಿದ್ದ ಬೆಂಗಳೂರು ರಿಂಗ್‌ ರಸ್ತೆಯ ನಿರ್ಮಾಣದ ಬಗ್ಗೆ ಈಗಾಗಲೇ ಚರ್ಚೆಯನ್ನು ನಡೆಸಲಾಗಿದೆ. ಚುನಾವಣೆಯ ನೀತಿ ಸಂಹಿತೆಯ ನಂತರ ಕರ್ನಾಟಕ ರಾಜ್ಯಕ್ಕೆ ಆಗಮಿಸಲಿದ್ದು ರಿಂಗ್‌ ರಸ್ತೆಯ ಕಾಮಗಾರಿ ಪ್ರಾರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಮುಖ್ಯಸ್ಥೆ ಡಾ ತೇಜಸ್ವಿನಿ ಅನಂತಕುಮಾರ್‌, ಅನಂತಕುಮಾರ್ ಪ್ರತಿಷ್ಠಾನದ ಅಧ್ಯಕ್ಷ ಪಿ ವಿ ಕೃಷ್ಣ ಭಟ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ ಗಂಗಾಧರ, ಪ್ರೊ ಹೆಚ್ ಎಸ್ ನಾಗರಾಜ್, ಪುತ್ರಿಯರಾದ ಐಶ್ವರ್ಯ ಮತ್ತು ವಿಜೇತ ಅನಂತಕುಮಾರ್, ಅದಮ್ಯ ಚೇತನ ಸಂಸ್ಥೆಯ ಟ್ರಸ್ಟಿಗಳಾದ ಹೆಚ್‌ ಎನ್ ನಂದಕುಮಾರ್‌ ಮತ್ತು ಪ್ರದೀಪ್‌ ಓಕ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.