ರಾಜ್ಯದಲ್ಲಿ 65 ಸಾವಿರ ಕೋಟಿ ರೂ. ಹೂಡಿಕೆ; ದಾವೋಸ್‌ನ 25 ಕಂಪೆನಿ ಜತೆ ಸಿಎಂ ಮಾತುಕತೆ
Team Udayavani, May 27, 2022, 10:38 PM IST
ಬೆಂಗಳೂರು: ರಾಜ್ಯದಲ್ಲಿ ಅಂದಾಜು 65 ಸಾವಿರ ಕೋಟಿ ರೂ. ಬಂಡವಾಳ ಹೂಡಲು ಕಂಪೆನಿಗಳು ಮುಂದೆ ಬಂದಿವೆ. ಕೈಗಾರಿಕೆ ಸ್ಥಾಪನೆಗೆ ರಾಜ್ಯ ನೀಡುತ್ತಿರುವ ಪ್ರೋತ್ಸಾಹ ಹಾಗೂ ನೀತಿ ಇದಕ್ಕೆ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶುಕ್ರವಾರ ದಾವೋಸ್‌ನಿಂದ ಬೆಂಗಳೂರಿಗೆ ಆಗಮಿಸಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ -2022ಕ್ಕೆ ಸಂಬಂಧಿಸಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು. ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿರುವ ಪೂರಕ ಪರಿಸರ, ನೀತಿ ನಿಯಮಗಳು, ತಂತ್ರಜ್ಞಾನ ಆಧಾರ, ಕೌಶಲದ ಮಾನವ ಸಂಪನ್ಮೂಲ, ಆರ್‌ಎಂಡ್‌ಡಿ ಕೇಂದ್ರಗಳು, ಉದ್ದಿಮೆಗಳಿಗೆ ನೀಡಲಾಗುವ ಪ್ರೋತ್ಸಾಹಕಗಳು, ಭೂಮಿಯ ಲಭ್ಯತೆಗಳಿಂದಾಗಿ ಬಂಡವಾಳ ಹೂಡಿಕೆ ಸಂಸ್ಥೆಗಳಿಗೆ ರಾಜ್ಯದ ಮೇಲೆ ವಿಶ್ವಾಸ ಮೂಡಿಸಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಹಲವು ಜಾಗತಿಕ ಉದ್ದಿಮೆದಾರರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಸುಮಾರು 25 ಕಂಪೆನಿಗಳೊಂದಿಗೆ ಚರ್ಚಿಸಲಾಗಿದೆ. ಭಾರತವನ್ನು ಹೊಸ ಆರ್ಥಿಕ ಶಕ್ತಿಯಾಗಿ ವಿಶ್ವ ಎದುರು ನೋಡುತ್ತಿದೆ. ಕರ್ನಾಟಕ ರಾಜ್ಯದ ಎಲ್ಲ ರಂಗಗಳಲ್ಲಿ ಹೂಡಿಕೆದಾರರು ಆಸಕ್ತಿ ತೋರಿದರು ಎಂದರು.
ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು 50 ಸಾವಿರ ಕೋಟಿ ರೂ.ಗಳ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದ್ದು, ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. 30 ಸಾವಿರಕ್ಕೂ ಹೆಚ್ಚು ಉದ್ಯೋಗವನ್ನು ನೀಡಲಿದೆ ಎಂದರು.
ಲುಲು ಗ್ರೂಪ್, ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ ಎನರ್ಜಿ, ಸೀಮೆನ್ಸ್ , ಅಬ್ ಇನ್ಬೇವ್, ದಸ್ಸಾಲ್ಟಸಿಸ್ಟಂ, ಆರ್ಸೆಲಾರ್ ಮಿತ್ತಲ್ ಸಂಸ್ಥೆ ಭಾರ್ತಿ ಎಂಟರ್ ಪ್ರೈಸಸ್ ಮುಂತಾದವು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡುವ ಭರವಸೆ ನೀಡಿವೆ ಎಂದರು.
ಇದಲ್ಲದೆ ಅದಾನಿ ಗ್ರೂಪ್, ದಾಲಿ¾ಯಾ ಸಿಮೆಂಟ್, ಜಾನ್ಸನ್ ಕಂಟ್ರೋಲ್ಸ್, ಹನಿವೆಲ್ ಐಬಿಎಂ, ಐಕಿಯ ಸ್ಟೋರ್ಸ್, ಪೇಪಾಲ್ , ಆಕ್ಸಿಸ್ ಬ್ಯಾಂಕ್ ಸಂಸ್ಥೆಗಳು ರಾಜ್ಯದ ವಿವಿಧ ವಲಯಗಳಲ್ಲಿ ಹೂಡಿಕೆ ಅವಕಾಶ ಬಗ್ಗೆ ಆಸಕ್ತಿ ತೋರಿರುವುದಾಗಿ ತಿಳಿಸಿದರು.
ಸ್ಥಿರ ಸರಕಾರ ಗೊಂದಲವಿಲ್ಲ
ರಾಜ್ಯದಲ್ಲಿ ಸ್ಥಿರ ಸರಕಾರವಿದ್ದು ಲಕ್ಷ್ಮೀ ಮಿತ್ತಲ್ ಅವರು ಸ್ವಾಭಾವಿಕವಾಗಿ ಕೇಳಿದ ಪ್ರಶ್ನೆಗೆ ರಾಜ್ಯದಲ್ಲಿ ಹೆಚ್ಚು ಪ್ರಚಾರ ನೀಡಲಾಗಿದೆ. ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಈ ಪ್ರಶ್ನೆ ಕೇಳಿದ್ದಾರೆ. ರಾಜ್ಯದಲ್ಲಿ ಸ್ಥಿರ ಸರಕಾರ ಇರುವ ಬಗ್ಗೆ ಅವರಿಗೆ ಮನವರಿಕೆ ಮಾಡಿದ್ದೇವೆ. ಕಾನೂನು ಸರಳಗೊಳಿಸಿರುವ ಬಗ್ಗೆಯೂ ಅವರಿಗೆ ತಿಳಿಸಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು.
ಬೆಂಗಳೂರಿನಲ್ಲಿ ಅಕಾಲಿಕ ಮಳೆಯಿಂದ ಉಂಟಾದ ಪ್ರವಾಹದಿಂದ ಬಂಡವಾಳ ಹೂಡಿಕೆದಾರರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹಿಂದಿನ ಸರಕಾರಗಳು ಸರಿಯಾಗಿ ಕೆಲಸ ಮಾಡದೇ ಇರುವುದರಿಂದ ಈಗ ನಾವು ವ್ಯವಸ್ಥೆ ಸರಿಪಡಿಸಬೇಕಿದೆ. ನವೆಂಬರ್ ವೇಳೆಗೆ ನಗರದ ಮೂಲಸೌಲಭ್ಯವನ್ನು ಸರಿಪಡಿಸಲಾಗುವುದು. ಇದಕ್ಕಾಗಿ ಕಾರ್ಯಪಡೆ ರಚಿಸಲಾಗಿದೆ.
-ಬಸವರಾಜ ಬೊಮ್ಮಾಯಿ, ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.