ಬಂದ್ ಆಗುತ್ತಾ? ಚಿತ್ರರಂಗದ ಬೆಂಬಲ;ಹಲವು ಸಂಘಟನೆಗಳ ವಿರೋಧ
Team Udayavani, Jun 11, 2017, 1:21 PM IST
ಬೆಂಗಳೂರು : ನಾಳೆ ಬಂದ್ ಮಾಡಿಯೇ ಮಾಡುತ್ತೇವೆ. ಬಂದ್‌ಗೆ 2000 ಕನ್ನಡ ಸಂಘಟನೆಗಳು ಬೆಂಬಲ ನೀಡಿವೆ ಎಂದು ಕನ್ನಡ ಚಳುವಳಿಯ ವಾಟಾಳ್ ನಾಗರಾಜ್ ಭಾನುವಾರ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಾಟಾಳ್ ನಾಗರಾಜ್ ಮತ್ತು ಕನ್ನಡ ಪರ ಸಂಘಟನೆಗಳ ಮುಖಂಡರು ಸೋಮವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ರ ವರೆಗೆ ಕರ್ನಾಟಕ ಬಂದ್ ನಡೆಯುತ್ತದೆ. ಬಯಲುಸೀಮೆಯಲ್ಲಿ ನೀರಿನ ಅಭಾವ ಎಷ್ಟಿದೆ ಎಂದು ಎಲ್ಲರಿಗೂ ಗೊತ್ತಿದೆ. ಬಂದ್ ನಾವು ನಮ್ಮ ಸ್ವಹಿತಾಸಕ್ತಿಗೆ ಮಾಡುತ್ತಿಲ್ಲ ಎಂದು ಕಿಡಿ ಕಾರಿದರು.
ಚಿತ್ರರಂಗದ ಬೆಂಬಲ
ಬಂದ್‌ಗೆ ಕನ್ನಡ ಚಿತ್ರರಂಗ ಬೆಂಬಲ ನೀಡಿದ್ದು, ನಾಳೆ ಯಾವುದೇ ಕನ್ನಡ ಚಿತ್ರ ಪ್ರದರ್ಶನ ಇರುವುದಿಲ್ಲ ಮತ್ತು ಚಲಚಿತ್ರಗಳ ಚಿತ್ರೀಕರಣ ಇರುವುದಿಲ್ಲ ಎಂದು ವಾಣಿಜ್ಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡ ಒಕ್ಕೂಟ ಹಾಗೂ ರೈತರ ಸಾಲ ಮನ್ನಾಗೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜೂನ್ 12ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ಕೆಲ ಸಂಘಟನೆಗಳು ಬಂದ್‌ಗೆ ಬೆಂಬಲವಿಲ್ಲ ಎಂದು ಪ್ರಕಟಿಸಿರುವುದರಿಂದ ಗೊಂದಲ ಸೃಷ್ಟಿಯಾಗಿದೆ.
ಬೆಂಗಳೂರಿನಲ್ಲಿ ಬಿಎಂಟಿಸಿ ಹಾಗೂ ನಮ್ಮ ಮೆಟ್ರೋ ಸೇವೆ ಸದ್ಯದ ಮಟ್ಟಿಗೆ ಎಂದಿನಂತೆ ಇರಲಿವೆ ಎಂದು ಸಂಬಂಧಪಟ್ಟ ಇಲಾಖೆಗಳು ಸ್ಪಷ್ಟಪಡಿಸಿವೆ. ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಓಲಾ ಉಬರ್ ಕ್ಯಾಬ್ ಚಾಲಕರ ಸಂಘ ಬಂದ್ ಬೆಂಬಲಿಸಿ ಕ್ಯಾಬ್ ರಸ್ತೆಗಿಳಿಸದಿರುವುದಾಗಿ ಪ್ರಕಟಿಸಿವೆ. ಬೆಂಗಳೂರು ಪ್ರವಾಸಿ ವಾಹನ ಮಾಲೀಕರ ಸಂಘ ಹೋರಾಟಕ್ಕೆ ನೈತಿಕ ಬೆಂಬಲ ನೀಡಿದ್ದರೂ ವಾಹನ ಸೇವೆ ಎಂದಿನಂತೆ ಇರಲಿದೆ ಎಂದು ತಿಳಿಸಿದೆ. ಆಟೋ ಚಾಲಕರ ಸಂಘ ಬಂದ್‌ನಿಂದ ದೂರ ಉಳಿದಿದೆ. ಹೋಟೆಲ್ ಮಾಲೀಕರ ಸಂಘ ಪ್ರತಿಕ್ರಿಯೆ ನೀಡಿಲ್ಲ.
ಕರ್ನಾಟಕ ಬಂದ್‌ಗೆ ಬೆಂಬಲ ನೀಡುವಂತೆ ಯಾವ ಸಂಘಟನೆಯೂ ಮನವಿ ಮಾಡಿಲ್ಲ. ಹಾಗಾಗಿ ಜೂನ್ 12ರಂದು ಆಟೋ ಸಂಚಾರ ಎಂದಿನಂತೆ ಇರಲಿದೆ ಎಂದು ಆಟೋ ಚಾಲಕರ ಸಂಘದ ಅಧ್ಯಕ್ಷ ಮೀನಾಕ್ಷಿ ಸುಂದರಂ ತಿಳಿಸಿದರು.
ಕರ್ನಾಟಕ ಬಂದ್‌ಗೆ ಸಂಪೂರ್ಣ ಬೆಂಬಲವಿದ್ದು, ಸೋಮವಾರ ಎಲ್ಲಿಯೂ ಕ್ಯಾಬ್‌ಗಳನ್ನು ರಸ್ತೆಗಿಳಿಸದಂತೆ ಮನವಿ ಮಾಡಲಾಗಿದೆ ಎಂದು ಓಲಾ ಉಬರ್ ಚಾಲಕರ ಸಂಘದ ಪದಾಧಿಕಾರಿ ಪಾಷ ಹೇಳಿದರು.
ಈ ನಡುವೆ ಪದೇ ಪದೇ ಬಂದ್‌ಗೆ ಕರೆ ನೀಡುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕ ಬಂದ್‌ಗೆ ಬೆಂಬಲವಿಲ್ಲ ಎಂದು ಕೆಲ ಕನ್ನಡ ಪರ ಸಂಘಟನೆಗಳು ಬಹಿರಂಗವಾಗಿ ಘೋಷಿಸಿವೆ. ಹಾಗಾಗಿ ಸೋಮವಾರ ಬಂದ್ ಬಗ್ಗೆ ಜನಸಾಮಾನ್ಯರಲ್ಲಿ ಗೊಂದಲ ಉಂಟಾಗಿದೆ.
ಇದುವರೆಗೆ ಶಾಲಾ ಕಾಲೇಜುಗಳು ಸೇರಿದಂತೆ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿಲ್ಲ.
ಉಪವಾಸ ಸತ್ಯಾಗ್ರಹ
ಬೇಡಿಕೆಗಳ ಈಡೇರಿಕೆಗೆ ಬಂದ್ ಅಗತ್ಯವಿಲ್ಲ ಎಂದು ಕನ್ನಡ ಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಟೌನ್ ಹಾಲ್ ಮುಂದೆ ಭಾನುವಾರ ಪ್ರತಿಭಟನೆ ನಡೆಸಿದ್ದಾರೆ.
ಬಲವಂತ ಮಾಡಬೇಡಿ : ಪ್ರವೀಣ್ ಸೂದ್ ಎಚ್ಚರಿಕೆ
ಎಲ್ಲಿಯಾದರು ಬಲವಂತವಾಗಿ ಬಂದ್ ಮಾಡಿಸುವುದು ಕಂಡು ಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ನಗರ ಪೊಲೀಸ್‌ಆಯುಕ್ತ ಪ್ರವೀಣ್ ಸೂದ್ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.