ಜನವರಿ 27ಕ್ಕಲ್ಲ, 25ರಂದು ಕರ್ನಾಟಕ ಬಂದ್: ವಾಟಾಳ್ ನಾಗರಾಜ್
Team Udayavani, Jan 11, 2018, 6:06 PM IST
ಬೆಂಗಳೂರು: ಮಹದಾಯಿ ನದಿ ನೀರಿನ ಹಂಚಿಕೆ ವಿವಾದ ಬಗೆಹರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಜ.27 ರ ಬದಲು 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ನಡೆಸುವುದಾಗಿ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ವಾಟಾಳ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದ್ದವು. ಜ.28 ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವುದರಿಂದ ಅವರ ಮೇಲೆ ಒತ್ತಡ ಹೇರಲು ರಾಜ್ಯ ಬಂದ್‌ಗೆ ಕರೆ ನೀಡಿರುವುದಾಗಿ ವಾಟಾಳ್ ನಾಗರಾಜ್ ಹೇಳಿದ್ದರು.
ಮಹದಾಯಿ ವಿವಾದ ಮಾತುಕತೆಯ ಮೂಲಕ ಬಗೆ ಹರಿಸಲು ಪ್ರಧಾನಿ ಮಧ್ಯಪ್ರವೇಶ ಮಾಡಬೇಕು. ಕುಡಿಯುವ ನೀರಿನ ವಿಷಯದಲ್ಲಿ ಅನಗತ್ಯ ರಾಜಕೀಯ
ಮಾಡುವುದರಿಂದ ಉತ್ತರ ಕರ್ನಾಟಕ ಭಾಗದ ಜನತೆಗೆ ನಿರಂತರ ಅನ್ಯಾಯವಾಗುತ್ತಿದೆ ಎಂದರು.ಇದೀಗ ಜ. 25 ರ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೂ ಸಂಪೂರ್ಣ ಕರ್ನಾಟಕ ಬಂದ್ ಇರಲಿದೆ. ರಾಜ್ಯದ ಹಿತದೃಷ್ಠಿಯಿಂದ ಸಾರ್ವಜನಿಕರು ಬಂದ್‌ಗೆ ಬೆಂಬಲಿಸಬೇಕು ಎಂದು ವಾಟಾಳ್ ಮನವಿ ಮಾಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಕೂಡ ಕರ್ನಾಟಕ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.