Karnataka Bandh; ದಕ್ಷಿಣ ಕನ್ನಡ, ಉಡುಪಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ
Team Udayavani, Sep 28, 2023, 7:44 PM IST
ಉಡುಪಿ/ಮಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಯ ಬಿಡುವುದನ್ನು ವಿರೋಧಿಸಿ ನೂರಾರು ಕನ್ನಡ ಪರ, ರೈತಪರ ಸಂಘಟನೆಗಳು ಕರೆ ನೀಡಿರುವ ಶುಕ್ರವಾರದ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೈತಿಕ ಬೆಂಬಲ ಮಾತ್ರ ವ್ಯಕ್ತವಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.
ಖಾಸಗಿ ಬಸ್ ಮಾಲಕರ ಸಂಘಟನೆ ಬಂದ್ ಗೆ ನೈತಿಕ ಬೆಂಬಲ ಮಾತ್ರ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದೆ.
ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗುವ ಕಾರಣ ನಾವು ನೈತಿಕ ಬೆಂಬಲ ಸೂಚಿಸುತ್ತೇವೆ. ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ. ಉಭಯ ಜಿಲ್ಲೆಗಳಲ್ಲಿ ಜನಜೀವನ ಎಂದಿನಂತೆ ಇರುವ ಎಲ್ಲ ಸಾಧ್ಯತೆಗಳಿವೆ.
ಸರಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗಳಿಗೆ ನೀಡಿದೆ. ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ ಘೋಷಣೆ ನೀಡಿಲ್ಲ. ಪರಿಸ್ಥಿತಿಯನ್ನು ಗಮನಿಸಿ ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
Contracter Case: ಸಚಿನ್ ಪಾಂಚಾಳ್ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ
ಪೊಲೀಸ್ ಅಧಿಕಾರಿಗಳ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.