Hookah; ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ನಿಷೇಧಕ್ಕೆ ಆದೇಶ
ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ
Team Udayavani, Feb 8, 2024, 10:46 AM IST
ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು. ಸಂಗ್ರಹಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆರೋಗ್ಯ ಇಲಾಖೆ ಆಧೀನ ಕಾರ್ಯದರ್ಶಿ ವಿ.ಪದ್ಮಾ ಆದೇಶ ಹೊರಡಿಸಿದ್ದು, ಸಾರ್ವಜನಿಕರ ಆರೋಗ್ಯ ಕಾಪಾಡುವುದಕ್ಕೆ ಸಂವಿಧಾನದ 47ನೇ ವಿಧಿ ಪ್ರಕಾರ ಈ ಆದೇಶ ಹೊರಡಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹುಕ್ಕಾ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾದಭರಿತ, ಸ್ವಾದರಹಿತ ಹುಕ್ಕಾ ಮೊಲಾಸಸ್, ಶಿಶಾ ಹಾಗೂ ಇತರೆ ಸೇರಿ ಎಲ್ಲಾ ಮಾದರಿಯ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಪ್ರಚೋದನೆ, ಸಂಗ್ರಹಣೆಯನ್ನು ತಕ್ಷಣ ದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ಉಲ್ಲಂಘಿಸಿದರೆ ಅವರ ವಿರುದ್ಧ ಕೋಟ್ಟಾ ಕಾಯ್ದೆ-2033 ಮತ್ತು ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯ್ದೆ 2015, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ಕರ್ನಾಟಕ ವಿಷ (ಸ್ವಾಧೀನ ಮತ್ತು ಮಾರಾಟ)ನಿಯಮ 2015 ಮತ್ತು ಭಾರತೀಯ ದಂಡ ಸಂಹಿತೆ ಮತ್ತು ಅಗ್ನಿ ನಿಯಂತ್ರಣ ಹಾಗೂ ಅಗ್ನಿ ಸುರಕ್ಷತೆ ಕಾಯ್ದೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶದಲ್ಲಿ ಉಲ್ಲೇಖೀಸಲಾಗಿದೆ.
ವಿಶ್ವ ಆರೋಗ್ಯ ಸಂಸ್ಥೆ 2016-17 ಅಧ್ಯಯನ ಪ್ರಕಾರ ಕರ್ನಾಟಕದಲ್ಲಿ ಶೇ.22.8 15ಕ್ಕಿಂತ ಹೆಚ್ಚಿನ ವಯಸ್ಸಿನವರು ತಂಬಾಕು ಉತ್ಪನ್ನಗಳ ವ್ಯಸನಿಗಳಾಗಿದ್ದಾರೆ. ಈ ಪೈಕಿ ಶೇ.8.8 ಮಂದಿ ಧೂಮಪಾನಿಗಳಾಗಿದ್ದಾರೆ. ಶೇ.23.9 ವಯಸ್ಕರು ಪರೋಕ್ಷ ಧೂಮಪಾನಕ್ಕೆ ಒಳಗಾಗುತ್ತಿದ್ದಾರೆ. ಅಲ್ಲದೆ, 45 ನಿಮಿಷಗಳ ಹುಕ್ಕಾ ಸೇನೆ 100 ಸಿಗರೇಟ್ ಸೇದುವುದಕ್ಕೆ ಸಮಾನಾಗಿದೆ. ಅದರಲ್ಲಿರುವ ನಿಕೋಟಿನ್ ಅಥವಾ ತಂಬಾಕು ಹಾಗೂ ಮೊಲಾಸಸ್‌ರಾಸಾಯನಿಕ ವಸ್ತು ಒಳಗೊಂಡಿದೆ ಎಂದು ವರದಿಯಲ್ಲಿ ಹೇಳಿದೆ. ಅದರಿಂದ ಹರ್ಪಿಸ್, ಕ್ಷಯರೋಗ, ಹೈಪಟೈಟಿಸ್, ರೋಗ ಹರಡಬಹುದು. ಈ ಹಿನ್ನೆಲೆಯಲ್ಲಿ ನಿಷೇಧವನ್ನು ಆದೇಶದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.