ನ.11ರಂದು ಪ್ರಧಾನಿ ಮೋದಿಯಿಂದ ಕರ್ನಾಟಕ– ಭಾರತ್ ಗೌರವ್ ಕಾಶಿ ದರ್ಶನ ರೈಲು ಯಾತ್ರೆಗೆ ಚಾಲನೆ
Team Udayavani, Nov 9, 2022, 4:08 PM IST
ಬೆಂಗಳೂರು: ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ರೈಲು ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಚಾಲನೆ ನೀಡಲಿದ್ದಾರೆ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕಾಶಿ ದರ್ಶನ ರೈಲು ಪ್ಯಾಕೇಜ್ ಟೂರ್ ಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ಚಾಲನೆ ದೊರೆಯುತ್ತಿರುವುದು ಬಹಳ ಸಂತಸದ ಸಂಗತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ಪುನರ್ ನಿರ್ಮಾಣಗೊಳಿಸಲಾಗಿರುವ ಭವ್ಯ ಕಾಶಿ – ದಿವ್ಯ ಕಾಶಿಯನ್ನು ರಾಜ್ಯದ ಜನರು ಕಡಿಮೆ ವೆಚ್ಚದಲ್ಲಿ ಕಣ್ತುಂಬಿಕೊಳ್ಳಲಿ ಎನ್ನುವ ಪ್ರಮುಖ ಉದ್ದೇಶದಿಂದ ಈ ರೈಲು ಪ್ರವಾಸವನ್ನು ಆಯೋಜಿಸಲಾಗಿದೆ. ನನ್ನ ಆಶಯಕ್ಕೆ ಬೆನ್ನುಲಾಗಿ ನಿಂತ ಮುಖ್ಯಮಂತ್ರಿಗಳಿಗೆ ವಿಶೇಷ ಅಭಿನಂದನೆಗಳನ್ನ ಸಲ್ಲಿಸಿದ್ದೇನೆ ಎಂದಿದ್ದಾರೆ.
ಕಾಶಿ ದರ್ಶನ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ಎರಡನೇ ಟ್ರಿಪ್ ಕೂಡಾ ಸೋಲ್ಡ್ ಔಟ್:
ನವೆಂಬರ್ 23, 2022 ರಂದು ಎರಡನೇ ಟ್ರಿಪ್ ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ರೈಲು ಯಾತ್ರೆಯ ಟ್ರಿಪ್‌ನ ದಿನಾಂಕವನ್ನು ಘೋಷಣೆ ಮಾಡಲಾಗಿತ್ತು. ಟಿಕೆಟ್ ಬುಕ್ಕಿಂಗ್ ಪ್ರಾರಂಭ ಮಾಡಿದ ಎರಡೇ ದಿನಗಳಲ್ಲಿ ಎರಡನೇ ಟ್ರಿಪ್ ನ ಎಲ್ಲಾ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ. ಕಾಶಿ ದರ್ಶನ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ದೊರೆಯುತ್ತಿರುವುದು ಬಹಳ ಸಂತಸದ ಸಂಗತಿಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಮುಂದಿನ ಟ್ರಿಪ್‌ಗಳ ದಿನಾಂಕವನ್ನು ಘೋಷಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.