ನ.23 ರಂದು ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ರೈಲಿನ ಎರಡನೇ ಟ್ರಿಪ್: ಶಶಿಕಲಾ ಜೊಲ್ಲೆ
Team Udayavani, Nov 3, 2022, 5:35 PM IST
ಬೆಂಗಳೂರು: ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ರೈಲ್ವೇ ಪ್ಯಾಕೇಜ್ ನ ಎರಡನೇ ಟ್ರಿಪ್ ಗೆ ನವೆಂಬರ್ 23 ಕ್ಕೆ ಸಿದ್ದತೆ ನಡೆಸಿಕೊಳ್ಳುವಂತೆ ಅಧಿಕಾರಿಗಳಿಗೆ ಮುಜರಾಯಿ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದರು.
ಇಂದು ಬೆಂಗಳೂರು ನಗರದ ಸರ್ ಎಂ ವಿಶ್ವೇಶ್ವರಯ್ಯ ರೈಲ್ವೇ ನಿಲ್ದಾಣದಲ್ಲಿ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ಕಾಶಿ ದರ್ಶನಕ್ಕೆ ಸಿದ್ದಪಡಿಸಲಾಗುತ್ತಿರುವ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ಯೋಜನೆಯ ಅಡಿಯಲ್ಲಿ ಸಿದ್ದವಾಗುತ್ತಿರುವ ರೈಲಿನ ಸಿದ್ದತೆಗಳನ್ನು ಪರಿಶೀಲಿಸಿ, ರೈಲ್ವೇ ಅಧಿಕಾರಿಗಳು, ಐಆರ್‌ಸಿಟಿಸಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ರಾಜ್ಯದ ಜನರನ್ನ ಕಾಶಿ ದರ್ಶನಕ್ಕೆ ಕಳುಹಿಸಬೇಕು ಎನ್ನುವುದು ನನ್ನ ಆಶಯವಾಗಿತ್ತು. ಇದಕ್ಕೆ ಬೆನ್ನುಲಾಗಿ ನಿಂತಿದ್ದು ಮುಖ್ಯಮಂತ್ರಿಗಳು. ಮೊದಲ ಟ್ರಿಪ್ ನವೆಂಬರ್ 11 ರಂದು ಹೊರಡಲಿದೆ. 8 ದಿನಗಳ ಈ ಯಾತ್ರೆಯಲ್ಲಿ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗರಾಜ್ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ಬೆಂಗಳೂರಿಗೆ ಹಿಂದಿರುಗಲಿದೆ ಎಂದು ಹೇಳಿದರು.
ಮೊದಲ ಟ್ರಿಪ್‌ನ ಟಿಕೆಟ್‌ಗಳು ಕೇವಲ 3 ದಿನದಲ್ಲಿಯೇ ಸಂಪೂರ್ಣ ಬುಕ್ಕಿಂಗ್ ಆಗಿದೆ. ಎರಡನೇ ಟ್ರಿಪ್‌ಗೂ ಈಗಾಗಲೇ 100 ಕ್ಕೂ ಹೆಚ್ಚು ಬುಕ್ಕಿಂಗ್ ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ನವೆಂಬರ್ 23, 2022 ರಂದು ಎರಡನೇ ಟ್ರಿಪ್ ಗೆ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದಕ್ಷಿಣ ಭಾರತದಲ್ಲೇ ಪ್ರಥಮ ಬಾರಿಗೆ ಭಾರತ್ ಗೌರ್ ರೈಲನ್ನು ಪ್ರಾರಂಭಿಸುತ್ತಿರುವ ಹೆಗ್ಗಳಿಕೆ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಪಾತ್ರವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ 3 ಟಯರ್ ಎಸಿಯ ವ್ಯವಸ್ಥೆಯನ್ನು ಮಾಡಲಾಗಿದ್ದು, 14 ಬೋಗಿಗಳ ಮೇಲೂ ರಾಜ್ಯದ 28 ದೇವಸ್ಥಾನಗಳ ಛಾಯಾಚಿತ್ರಗಳ ಬ್ರಾಂಡಿಂಗ್ ಮಾಡಲಾಗಿದೆ. ನಮ್ಮ ರಾಜ್ಯದ ದೇವಸ್ಥಾನಗಳನ್ನು ಭಾರತದ ಉದ್ದಗಲಕ್ಕೂ ಸಂಚರಿಸಲಿರುವ ಟ್ರೈನ್ ಮೂಲಕ ಪ್ರಚಾರ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ಆರ್ ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರಿಗೆ ಬಂದ ಎಬಿ ಡಿವಿಲಿಯರ್ಸ್
ಪ್ರಧಾನಿ ನರೇಂದ್ರ ಮೋದಿಯವರು ನ. 11 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆ ಕಾರ್ಯಕ್ರಮಗಳ ಜೊತೆಯಲ್ಲಿಯೇ ನಮ್ಮ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ರೈಲಿಗೂ ಚಾಲನೆ ನೀಡಲಿ ಎನ್ನುವುದು ನಮ್ಮ ಆಶಯವಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದು ಸದ್ಯದಲ್ಲೇ ಪ್ರಧಾನಿ ಕಾರ್ಯಾಲಯದಿಂದ ಒಪ್ಪಿಗೆ ಬರುವ ಸಾಧ್ಯತೆಯಿದೆ ಎಂದು ಹೇಳಿದರು.
ಐಆರ್‌ಸಿಟಿಸಿ ಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು ಊಟ, ಉಪಹಾರ, ಯಾತ್ರಾ ಸ್ಥಳದಲ್ಲಿ ತಂಗುವ ವ್ಯವಸ್ಥೆ ಹಾಗೂ ಯಾತ್ರಾ ಸ್ಥಳಗಳಿಗೆ ಪ್ರಯಾಣಿಸಲು ಸ್ಥಳೀಯ ಸಾರಿಗೆ ವ್ಯವಸ್ಥೆ ಹಾಗೂ ತುರ್ತು ವೈದ್ಯಕೀಯ ಸೇವೆ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.
ಸಭೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ, ಐಆರ್‌ಸಿಟಿಸಿ ಹಾಗೂ ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.