ಶಾಸಕ ಮಾಡಾಳು ವಿರೂಪಾಕ್ಷಪ್ಪ ಜೈಲು ಪಾಲು
Team Udayavani, Apr 2, 2023, 6:42 AM IST
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಗಮ (ಕೆಎಸ್ಎಡಿಎಲ್)ದ ಟೆಂಡರ್ ನೀಡಲು 40 ಲಕ್ಷ ರೂ. ಲಂಚ ಪಡೆದ ಪ್ರಕರಣದ ಪ್ರಮುಖ ಆರೋಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಆರೋಪಿಯನ್ನು ಬಂಧಿಸಿದ್ದ ಲೋಕಾಯುಕ್ತ ಪೊಲೀಸರು ಐದು ದಿನ ಕಸ್ಟಡಿಗೆ ಪಡೆದುಕೊಂಡಿದ್ದರು. ಶನಿವಾರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಯನ್ನು ವಿಶೇಷ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ.
ವಿಚಾರಣೆ ವೇಳೆ ಆರೋಪಿ ಪರ ವಕೀಲರು, ತಮ್ಮ ಕಕ್ಷಿದಾರರಿಗೆ ಮನೆ ಊಟ ಒದಗಿಸಲು ಅವಕಾಶ ಕೊಡುವಂತೆ ಕೋರಿದರು. ಅದಕ್ಕೆ ನಿರಾಕರಿಸಿದ ಕೋರ್ಟ್ ಜೈಲಿನ ಪದ್ದತಿಯಂತೆಯೇ ಊಟ ನೀಡಬೇಕು ಎಂದು ಆದೇಶ ನೀಡಿದೆ. ಲಂಚ ಪಡೆದ ಪ್ರಕರಣದಲ್ಲಿ ಆರೋಪಿ ಸಲ್ಲಿಸಿದ್ದ ನೀರಿಕ್ಷಣ ಜಾಮೀನು ಅರ್ಜಿಯನ್ನು ಹೈಕೋರ್ಟ್ ಮಾ. 27ರಂದು ವಜಾಗೊಳಿಸಿತ್ತು. ಈ ಲೋಕಾಯುಕ್ತ ಪೊಲೀಸರು ಮಾ. 27ರಂದು ರಾತ್ರಿ ತುಮಕೂರಿನ ಕ್ಯಾತ್ಸಂದ ಟೋಲ್ ಬಳಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಬಂಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.