Karnataka; ವಿಧಾನಸೌಧದಲ್ಲೇ ಪಾಕಿಸ್ಥಾನ ಜಿಂದಾಬಾದ್ ಘೋಷಣೆ?
ನಾಸಿರ್ ಹುಸೇನ್ ಗೆಲುವಿನ ಸಂಭ್ರಮ ವೇಳೆ ಕೂಗಿದ ಬೆಂಬಲಿಗರು?
Team Udayavani, Feb 28, 2024, 7:05 AM IST
ಬೆಂಗಳೂರು: ರಾಜ್ಯಸಭೆ ಚುನಾವಣೆಯ ವಿಜೇತ ಅಭ್ಯರ್ಥಿ ನಾಸಿರ್ ಹುಸೇನ್‌ಗೆ ಜೈಕಾರ ಕೂಗುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಪೈಕಿ ಕೆಲವರು “ಪಾಕಿಸ್ಥಾನ ಜಿಂದಾಬಾದ್’ ಎಂದು ಧ್ವನಿಸುವ ಘೋಷಣೆ ಕೂಗಿರುವುದಾಗಿ ವರದಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಬಿಜೆಪಿ ಕಿಡಿ ಕಾರಿದ್ದು, ಪೊಲೀಸರಿಗೆ ದೂರು ನೀಡಿದೆ.
ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡು ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ರಾಜ್ಯಾ ಡಳಿತದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಗೆದ್ದ ನಾಸಿರ್ ಹುಸೇನ್ ಪರ ಘೋಷಣೆಗಳನ್ನು ಕೂಗಿದರು. ಮತ ಎಣಿಕೆ ಕೇಂದ್ರದ ಬಳಿಯೇ ನಾಸಿರ್ ಹುಸೇನ್ ಅವರನ್ನು ಎತ್ತಿಕೊಂಡು ಸಂಭ್ರಮಿಸಿದ ಕಾರ್ಯಕರ್ತರು ಜೈಕಾರ ಕೂಗುತ್ತಿರುವ ಮಧ್ಯೆಯೇ ಕಾರ್ಯಕರ್ತನೊಬ್ಬ ಪಾಕಿಸ್ಥಾನ ಜಿಂದಾಬಾದ್ ಎಂದು ಎರಡು ಸಲ ಕೂಗಿರುವ ವೀಡಿಯೋ ವೈರಲ್‌ಆಗಿದೆ. ಅಲ್ಲಿಯೇ ಇದ್ದ ಪತ್ರಕರ್ತರು ನಾಸಿರ್ ಅವರನ್ನು ಈ ಬಗ್ಗೆ ಪ್ರಶ್ನಿಸಿದರು. ಆಗ ಅವರು ಪ್ರಶ್ನಿಸಿದ ಪತ್ರಕರ್ತರ ವಿರುದ್ಧವೇ ಕೂಗಾಡಿದ ಘಟನೆಯೂ ನಡೆದಿದೆ.
ಬಿಜೆಪಿಯಿಂದ ದೂರು ದಾಖಲು
ಸಂಭ್ರಮಾಚರಣೆಯಲ್ಲಿ ತೇಲುತ್ತಿದ್ದ ನಾಸಿರ್ ಹುಸೇನ್ ತಮ್ಮನ್ನು ಈ ಬಗ್ಗೆ ಪ್ರಶ್ನಿಸಿದ ಮಾಧ್ಯಮ ಪ್ರತಿನಿಧಿಗಳನ್ನು ತಳ್ಳಿಕೊಂಡು ಹೊರನಡೆದರು. ಕಾಂಗ್ರೆಸ್‌ನ ಒಟ್ಟಾರೆ ನಡೆಗೆ ಬಿಜೆಪಿ ಕೆಂಡಾಮಂಡಲವಾಗಿದ್ದು, ನಾಸಿರ್ ಹುಸೇನ್ ಹಾಗೂ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ. ಅಲ್ಲದೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.
ಅಧಿವೇಶನದಲ್ಲೂ ಅನುರಣನ?
ಬುಧವಾರ ವಿಧಾನಮಂಡಲ ಅಧಿವೇಶನದಲ್ಲೂ ಈ ವಿಷಯವನ್ನು ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಪ್ರಸ್ತಾವಿಸುವ ಸಾಧ್ಯತೆಗಳಿದ್ದು, ಇದೇ ವಿಚಾರವನ್ನು ಇಟ್ಟುಕೊಂಡು ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ರಾಜಕೀಯ ದಾಳ ಉರುಳಿಸಲಿದೆ. ಅದರಲ್ಲೂ ವಿಧಾನಸೌಧದಲ್ಲಿ ಚುನಾವಣೆ ಹಾಗೂ ಮತ ಎಣಿಕೆ ನಡೆಯುತ್ತಿದ್ದ ಕೊಠಡಿಯ ಬಳಿಯೇ ಈ ಪ್ರಕರಣ ನಡೆದಿದ್ದು, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರೇ ವಿಧಾನಸೌಧ ಕಟ್ಟಡದ ಮುಖ್ಯಸ್ಥರೂ ಆಗಿರುವುದರಿಂದ ಗಂಭೀರವಾಗಿ ಪರಿಗಣಿಸುವಂತೆ ಒತ್ತಡ ಹೇರಲು ಬಿಜೆಪಿ ತಯಾರಿ ನಡೆಸಿದೆ.
ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್
ಪ್ರಕರಣದಿಂದ ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕಿದೆ. ಮೂವರು ಅಭ್ಯರ್ಥಿಗಳು ಗೆದ್ದಿದ್ದರೂ ಸಂಭ್ರಮಪಡದ ಸ್ಥಿತಿ ಸೃಷ್ಟಿಯಾಗಿದೆ. ವಿವಾದದಿಂದ ಹೇಗೆ ತಪ್ಪಿಸಿ ಕೊಳ್ಳಬೇಕೆಂದು ಚಿಂತಿಸುವಂತಾಗಿದೆ. ವಿಧಾನ ಮಂಡಲ ದಲ್ಲಿ ಸರಕಾರಕ್ಕೆ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳಬೇಕಿದ್ದು, ಸ್ಪೀಕರ್ ಅವರಿಗೂ ಇರುಸುಮುರುಸು ಸೃಷ್ಟಿಸುವ ಸಾಧ್ಯತೆಗಳು ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.