Karnataka: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸುರಕ್ಷಿತ?
ವಿದೇಶ ಪ್ರವಾಸ ಮೊಟಕುಗೊಳಿಸಿ ಅಮಿತ್ ಶಾರನ್ನು ಭೇಟಿಯಾದ ಬಿವೈವಿ; ಅಮಿತ್ ಶಾ ಅವರಿಂದ "ಡೋಂಟ್ ವರಿ' ಸಂದೇಶ?
Team Udayavani, Jan 2, 2025, 7:15 AM IST
ಬೆಂಗಳೂರು: ಧಿಡೀರ್ ಬೆಳವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿದೇಶ ಪ್ರವಾಸ ಮೊಟಕುಗೊಳಿಸಿ ದಿಲ್ಲಿಗೆ ಆಗಮಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ತಾರಕಕ್ಕೇರುವ ಹೊಸ್ತಿಲಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದ್ದು, ವಿಜಯೇಂದ್ರಗೆ ಶಾ ಅಭಯ ಲಭಿಸಿದೆ ಎನ್ನಲಾಗಿದೆ. ಅವರ ಸ್ಥಾನ ಬಹುತೇಕ ಗಟ್ಟಿ ಎಂದೇ ವಿಶ್ಲೇಷಿಸಲಾಗುತ್ತಿದೆ.
ಮಧ್ಯಾಹ್ನ 2.30ಕ್ಕೆ ದಿಲ್ಲಿಗೆ ಆಗಮಿಸಿರುವ ಅವರು ಸಂಜೆ ಶಾ ಅವರನ್ನು ಭೇಟಿ ಮಾಡಿ “ವಚನ’ ಪುಸ್ತಕವನ್ನು ಕೊಡುಗೆಯಾಗಿ ನೀಡಿದ್ದಾರೆ. ಇಬ್ಬರ ನಡುವೆ ಅರ್ಧ ಗಂಟೆ ಕಾಲ ಚರ್ಚೆ ನಡೆದಿದ್ದು, ಅಧ್ಯಕ್ಷ ಸ್ಥಾನ ಮುಂದುವರಿಕೆ ವಿಚಾರದಲ್ಲಿ “ಡೋಂಟ್ ವರಿ’ ಎಂಬ ಸಂದೇಶವನ್ನು ಶಾ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸರಕಾರದ ವಿರುದ್ಧ ಉಗ್ರ ಹೋರಾಟ?
ಇದರ ಜತೆಗೆ ಶಾಸಕ ಬಸವರಾಜ ಮತ್ತಿಮಡು ಹಾಗೂ ಆಂದೋಲನ ಶ್ರೀಗಳ ಕೊಲೆಗೆ ಸುಪಾರಿ ಪ್ರಕರಣವನ್ನು ವಿಜಯೇಂದ್ರ ಪ್ರಸ್ತಾವಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಸರಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಬಿಜೆಪಿ ಯೋಜನೆ ರೂಪಿಸುವ ಸಾಧ್ಯತೆ ಇದೆ. ಅವರು ಗುರುವಾರ ರಾತ್ರಿ ದಿಲ್ಲಿಯಿಂದ ವಾಪಸ್ ಆಗಲಿದ್ದಾರೆ.
ಅಮಿತ್ ಶಾ ಆಶೀರ್ವಾದ ಪಡೆದೆ
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭ ಭಾç ಪಟೇಲರ ಅನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ 2025ರ ನೂತನ ಕ್ಯಾಲೆಂಡರ್ ವರ್ಷದ ಶುಭಾಶಯ ಕೋರಿ ಆಶೀರ್ವಾದ ಪಡೆದೆ. ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಳೆದ ವರ್ಷದಿಂದೀಚೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಕಾಂಗ್ರೆಸ್ ಆಡಳಿತದ ಪರಿಣಾಮವಾಗಿ ಪ್ರಸ್ತುತ ರಾಜ್ಯದಲ್ಲಿ ಉದ್ಭವಿಸಿರುವ ಅನೇಕ ಸಮಸ್ಯೆಗಳು, ಕಾಂಗ್ರೆಸ್ ಸರಕಾರದ ಸಚಿವರ ವಿರುದ್ಧದ ಆರೋಪಗಳ ಕುರಿತು ಹಾಗೂ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲ ವೃದ್ಧಿಗೊಳಿಸಲು ಯೋಜಿಸಿರುವ ಕಾರ್ಯಕ್ರಮಗಳ ಕುರಿತು ವಿವರಿಸಿ ಸೂಕ್ತ ಮಾರ್ಗದರ್ಶನ ಕೋರಲಾಯಿತು ಎಂದು ಹೇಳಿದ್ದಾರೆ.
ಅಮಿತ್ ಶಾ ಸಂಘಟನಾ ಸಾಮರ್ಥ್ಯದ ಚತುರತೆ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ. ಇಂದಿನ ಅವರ ಭೇಟಿಯ ಕ್ಷಣಗಳು ಎಂದಿನಂತೆ ಇನ್ನಷ್ಟು ಉತ್ಸಾಹತುಂಬಿ ಸಂಘಟನೆಯನ್ನು ನಿರೀಕ್ಷೆಯ ಗುರಿ ತಲುಪಿಸಲು ಆತ್ಮವಿಶ್ವಾಸ ತುಂಬಿತು.
-ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ticket Price Hike: ನಾಲ್ಕು ನಿಗಮಗಳ ಬಸ್ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ
Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು
Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.