BJP ಕಾರ್ಯಕರ್ತರು ರಣೋತ್ಸಾಹದಲ್ಲಿದ್ದಾರೆ : ಬಿ.ವೈ.ವಿಜಯೇಂದ್ರ
ಗ್ಯಾರಂಟಿ ಬಂದ್...ಮುಖ್ಯಮಂತ್ರಿಗಳೇ ಧಮ್ಕಿ ಹಾಕುವ ಕೆಲಸ ಮಾಡುತ್ತಿದ್ದಾರೆ....
Team Udayavani, Feb 1, 2024, 4:21 PM IST
ಹಾವೇರಿ : ಪಂಚ ರಾಜ್ಯದ ಫಲಿತಾಂಶ ಬಳಿಕ ದೇಶದಲ್ಲಿ ಬಿಜೆಪಿ ಅಲೆ ಎದ್ದಿದ್ದು, ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ರಣೋತ್ಸಾಹದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನ ಸಭಾ ಚುನಾವಣೆಯಲ್ಲಿ ಅನಿರೀಕ್ಷಿತವಾದ ಸೋಲಾಯಿತು. ಗ್ಯಾರಂಟಿ ಮೂಲಕ ಜನರ ಕಣ್ಣಿಗೆ ಮಣ್ಣೆರಚಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ 500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಬಡವರ, ರೈತ ವಿರೋಧಿ ಸರಕಾರ ಯುವಕರನ್ನ ಭಿಕ್ಷುಕರ ತರ ಕಾಣುತ್ತಿದೆ. ಯಾವುದೇ ಹೊಸ ಯೋಜನೆ ಕೊಟ್ಟಿಲ್ಲ ಎಂದು ಕಿಡಿ ಕಾರಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಗ್ಯಾರಂಟಿ ಬಂದ್ ಮಾಡುತ್ತೇವೆ ಎಂದು ಕಾಂಗ್ರೆಸ್ ಶಾಸಕ ಹೇಳುತ್ತಾರೆ. ಇದು ಮಾಗಡಿ ಶಾಸಕರ ಮಾತಲ್ಲ ಮುಖ್ಯಮಂತ್ರಿಗಳೇ ಧಮ್ಕಿ ಹಾಕುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, 28 ಲೋಕಸಭಾ ಕ್ಷೇತ್ರಗಳನ್ನೂ ಬಿಜೆಪಿ-ಜೆಡಿಎಸ್ ಗೆಲ್ಲಿಸಲು ಜನ ನಿರ್ಧಾರ ಮಾಡಿದ್ದಾರೆ ಎಂದರು.
ನಿರ್ಮಲಾ ಸೀತಾರಾಮನ್ ಅವರು ಚುನಾವಣ ಗಿಮಿಕ್ ಮಾಡದೆ ದೂರದೃಷ್ಟಿ ಇರುವ ಬಜೆಟ್ ಮಂಡಿಸಿದ್ದಾರೆ. ಕಾಂಗ್ರೆಸ್ ನವರು ಮತ್ತೊಮ್ಮೆ ಮಕ್ಮಲ್ ಟೋಪಿ ಹಾಕುವ ಕೆಲಸ ಮಾಡುತ್ತಾರೆ. ಬಿಜೆಪಿ ಮತ್ತೆ 130, 140 ಸ್ಥಾನದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಕೊಕೇನ್, ಚರಸ್ ಸೇವನೆ; ಮೂವರ ಬಂಧನ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Brahmavar: ಕಂಟೈನರ್ ಢಿಕ್ಕಿ; ಬೈಕ್ ಸಹಸವಾರೆ ಸಾವು
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.