ಕರ್ನಾಟಕ ಬಜೆಟ್ 2021: ಪೆಟ್ರೋಲ್, ಡೀಸೆಲ್ ಹಾಗೂ ಅಬಕಾರಿ ತೆರಿಗೆ ಹೆಚ್ಚಳ ಇಲ್ಲ
45 ಲಕ್ಷ ರೂಪಾಯಿವರೆಗಿನ ಫ್ಲ್ಯಾಟ್ ಖರೀದಿಗೆ ಮುದ್ರಾಂಕ ಶುಲ್ಕ ಇಲ್ಲ ಎಂದು ಬಜೆಟ್ ನಲ್ಲಿ ತಿಳಿಸಿದ್ದಾರೆ.
Team Udayavani, Mar 8, 2021, 1:12 PM IST
ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ(ಮಾರ್ಚ್ 08) ಮಂಡಿಸಿದ್ದು, ನಿರೀಕ್ಷೆಯಂತೆ ಕೋವಿಡ್ ಸಂಕಷ್ಟದ ಹಿನ್ನೆಯಲ್ಲಿ ಈ ವರ್ಷ ಯಾವುದೇ ಹೊಸ ತೆರಿಗೆಯನ್ನು ವಿಧಿಸುವುದಿಲ್ಲ ಎಂದು ಘೊಷಿಸಿದ್ದಾರೆ.
ಇದನ್ನೂ ಓದಿ: ಬಜೆಟ್ ಮಂಡಿಸಲು ಯಡಿಯೂರಪ್ಪಗೆ ನೈತಿಕತೆಯಿಲ್ಲ: ಸಿದ್ದರಾಮಯ್ಯ ಆಕ್ರೋಶ
ಈ ಬಾರಿ ಯಾವುದೇ ತೆರಿಗೆ ಕಡಿತ ಮಾಡದೇ, ಹೊಸ ತೆರಿಗೆಯನ್ನು ವಿಧಿಸದೇ ಸಾರ್ವಜನಿಕರಿಗೆ ಆರ್ಥಿಕ ಹೊರೆಯಾಗದ ರೀತಿಯಲ್ಲಿ ಬಜೆಟ್ ಮಂಡಿಸಿರುವುದಾಗಿ ಬಿಎಸ್ ವೈ ತಿಳಿಸಿದ್ದಾರೆ.
ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ ಎಂದು ಬಿಎಸ್ ಯಡಿಯೂರಪ್ಪ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ.
ಈ ಬಾರಿಯ ಬಜೆಟ್ ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ ಇಲ್ಲ ಎಂದು ಬಿಎಸ್ ವೈ ತಿಳಿಸಿದ್ದು, ನೋಂದಣಿ,ಮುದ್ರಾಂಕ ಶುಲ್ಕವನ್ನು ಶೇ.5ರಿಂದ 3ಕ್ಕೆ ಇಳಿಕೆ ಮಾಡಿರುವುದಾಗಿ ಘೋಷಿಸಿದರು. 45 ಲಕ್ಷ ರೂಪಾಯಿವರೆಗಿನ ಫ್ಲ್ಯಾಟ್ ಖರೀದಿಗೆ ಮುದ್ರಾಂಕ ಶುಲ್ಕ ಇಲ್ಲ ಎಂದು ಬಜೆಟ್ ನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.