Karnataka Budget: ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹಲವು ಯೋಜನೆಗಳು

ಮೆಟ್ರಿಕ್‌ ಪೂರ್ವ ವಿದ್ಯಾರ್ಥಿವೇತನವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದೆ ಎಂದ ಸಿಎಂ

Team Udayavani, Jul 7, 2023, 3:55 PM IST

1-sadsad

ವಿಧಾನಸಭೆ: ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳ ಏಳಿಗೆಗಾಗಿ ಶ್ರಮಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಈ ಸಮುದಾಯಗಳ ಜನರಿಗೆ ಶಿಕ್ಷಣ ಹಾಗೂ ಉದ್ಯೋಗದ ಅವಕಾಶಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕಲ್ಪಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿವೇತನವನ್ನು (1 ರಿಂದ 8ನೇ ತರಗತಿಯವರೆಗೆ) ಕೇಂದ್ರ ಸರ್ಕಾರವು ಸ್ಥಗಿತಗೊಳಿಸಿರುತ್ತದೆ. ಇದರಿಂದ ಅಲ್ಪಸಂಖ್ಯಾತ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವುದನ್ನು ಮನಗಂಡು ನಮ್ಮ ಸರ್ಕಾರವು ಈ ಯೋಜನೆಯನ್ನು ಮುಂದುವರೆಸಲು 60 ಕೋಟಿ ರೂ. ಅನುದಾನವನ್ನು ಒದಗಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್ ನಲ್ಲಿ ಹೇಳಿದ್ದಾರೆ.

ರಾಜ್ಯದ 62 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು 6ನೇ ತರಗತಿಯಿಂದ 12ನೇ ತರಗತಿಯವರೆಗೆ Integrated ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದರಿಂದ 13,000 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಈ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ 30 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಇದಲ್ಲದೇ, 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳ ದಾಖಲಾತಿಯನ್ನು ದ್ವಿಗುಣಗೊಳಿಸುವ ಮೂಲಕ ಹೆಚ್ಚುವರಿಯಾಗಿ 12,500 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು 23 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 10 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದರು

ರಾಜ್ಯದಲ್ಲಿ 200 ಮೌಲಾನಾ ಆಜಾದ್ ಶಾಲೆಗಳಿದ್ದು, ಈ ಶಾಲೆಗಳಲ್ಲಿ ಶೇ.75 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಪೈಕಿ 22 ಶಾಲೆಗಳಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿರುತ್ತದೆ. ಮೌಲಾನಾ ಆಜಾದ್ ಶಾಲೆಗಳ ಉತ್ತಮ ಕಾರ್ಯನಿರ್ವಹಣೆಯನ್ನು ಗುರುತಿಸಿ, ಇವುಗಳ ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ಹಾಗೂ ಸ್ವಂತ ಕಟ್ಟಡ ಇಲ್ಲದೇ ಇರುವ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಅರಿವು ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ ಸಿ.ಇ.ಟಿ ಮೂಲಕ ಪ್ರವೇಶ ಪಡೆದ ಇಂಜಿನಿಯರಿಂಗ್‌, ವೈದ್ಯಕೀಯ ಮುಂತಾದ 28 ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡಲು ಶೇ.2 ರ ಬಡ್ಡಿ ದರದಲ್ಲಿ ವಾರ್ಷಿಕ ಒಂದು ಲಕ್ಷ ರೂ.ಗಳವರೆಗೆ ಸಾಲ ಮಂಜೂರು ಮಾಡಲಾಗುವುದು. ಪ್ರಸಕ್ತ ಸಾಲಿನಲ್ಲಿ 75 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು ಎಂದರು.

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಕನ್ನಡ ಮತ್ತು ಆಂಗ್ಲ ಭಾಷಾ ಜ್ಞಾನವನ್ನು ಉತ್ತಮಪಡಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯಗಳನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿಯನ್ನು ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ NEET, JEE, CET ಹಾಗೂ ಇತರೆ ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ ಎರಡು ವರ್ಷಗಳ ತರಬೇತಿಯನ್ನು ನೀಡಲು ಎಂಟು ಕೋಟಿ ರೂ.ಗಳ ಅನುದಾನ ನೀಡಲಾಗುವುದು.

ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ಼್ ಭವನದಲ್ಲಿ ಅಲ್ಪಸಂಖ್ಯಾತರ ಯುವ ಜನರಿಗೆ 10 ತಿಂಗಳ ವಸತಿಸಹಿತ IAS/KAS ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಪ್ರಾರಂಭಿಸಲಾಗುವುದು.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವದಲ್ಲಿ 250 ರೊಳಗೆ University Ranking ಹೊಂದಿರುವ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಲು ಅನುಕೂಲವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಪ್ರತಿ ವಿದ್ಯಾರ್ಥಿಗೆ 20 ಲಕ್ಷ ರೂ. ಸಾಲ ಸೌಲಭ್ಯ ಒದಗಿಸಲಾಗುವುದು.ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ 10,000 ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಅವಕಾಶವನ್ನು ಕಲ್ಪಿಸುವ ಸಲುವಾಗಿ ಇವರುಗಳಿಗೆ ಬ್ಯಾಂಕ್‌ಗಳಿಂದ ಪಡೆಯುವ ಸಾಲ ಮೊತ್ತದ ಶೇ. 20 ರಷ್ಟು ಅಥವಾ ಗರಿಷ್ಠ ಒಂದು ಲಕ್ಷ ರೂ.ವರೆಗೆ ಸಹಾಯಧನವನ್ನು ನೀಡಲಾಗುವುದು.

ʻಸ್ವಾವಲಂಬಿ ಸಾರಥಿʼ ಯೋಜನೆಯಡಿ, ಅಲ್ಪಸಂಖ್ಯಾತ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಠ 3 ಲಕ್ಷ ರೂ.ಗಳ ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಿಸಲಾಗುವುದು.  ಸರ್ಕಾರದ ಹಿಂದಿನ ಅವಧಿಯಲ್ಲಿ ರಾಜ್ಯಾದ್ಯಂತ ನೂರಾರು ಶಾದಿ ಮಹಲ್‌ ಮತ್ತು ಸಮುದಾಯ ಭವನಗಳನ್ನು ನಿರ್ಮಿಸಲು ಅನುಮೋದನೆ ನೀಡಲಾಗಿತ್ತು. ಆದರೆ, ನಂತರದ ದಿನಗಳಲ್ಲಿ ಈ ಭವನಗಳನ್ನು ಪೂರ್ಣಗೊಳಿಸಿರುವುದಿಲ್ಲ. ಅಂತಹ 126 ಶಾದಿ ಮಹಲ್‌ ಮತ್ತು ಸಮುದಾಯ ಭವನಗಳ ನಿರ್ಮಾಣ ಕಾರ್ಯಗಳನ್ನು 54 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು.

ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ಕರ್ನಾಟಕ ಇನಾಮ್‌ ರದ್ದಿಯಾತಿ ಅಧಿನಿಯಮದನ್ವಯ ನೀಡಲಾಗುತ್ತಿರುವ ತಸ್ತಿಕ್‌ ಮೊತ್ತವನ್ನು 48,000 ರೂ.ಗಳಿಂದ 60,000 ರೂ.ಗಳಿಗೆ ಹೆಚ್ಚಿಸಲಾಗುವುದು. ಇದರಿಂದ ತಸ್ತಿಕ್‌ ಪಡೆಯುತ್ತಿರುವ 868 ಸಂಸ್ಥೆಗಳಿಗೆ ಅನುಕೂಲವಾಗಲಿದೆ. ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಮತ್ತು ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲು ಪ್ರಸಕ್ತ ಸಾಲಿನಲ್ಲಿ 36೦ ಕೋಟಿ ರೂ.ಗಳನ್ನು ಮೀಸಲಿಡಲಾಗುವುದು.

ಜೈನರ ಪ್ರಮುಖ ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ 25 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು. ನಾಡಿನ ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ಕ್ರಿಶ್ಚಿಯನ್‌ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ ನೀಡಲಾಗುವುದು.

ರಾಜ್ಯದಲ್ಲಿ 40,000 ಕ್ಕಿಂತಲೂ ಅಧಿಕ ವಕ್ಛ್‌ ಆಸ್ತಿಗಳಿದ್ದು, ಇವುಗಳ ಸಂರಕ್ಷಣೆ ಮತ್ತು ಅಭಿವೃದ್ದಿಗಾಗಿ 2023-24ನೇ ಸಾಲಿನಲ್ಲಿ 50 ಕೋಟಿ ರೂ. ಒದಗಿಸಲಾಗುವುದು. ಹಲಸೂರಿನಲ್ಲಿರುವ ಗುರುದ್ವಾರದ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ ನೀಡಲಾಗಿದೆ. ಅದೇ ಮಾದರಿಯಲ್ಲಿ ಮೈಸೂರು, ಕಲಬುರಗಿ ಮತ್ತು ಹುಬ್ಬಳ್ಳಿಯಲ್ಲಿರುವ ಗುರುದ್ವಾರಗಳ ಅಭಿವೃದ್ಧಿಗೆ ಐದು ಕೋಟಿ ರೂ.ಗಳನ್ನು ಒದಗಿಸಲಾಗುವುದು. ಗುರುದ್ವಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಂಥಿಗಳಿಗೆ ಅವರ ದೈನಂದಿನ ಜೀವನ ನಿರ್ವಹಣೆಗೆ ಅನುಕೂಲವಾಗುವಂತೆ ಮಾಸಿಕ ಗೌರವ ಧನ ನೀಡಲಾಗುತ್ತಿದೆ ಎಂದು ಬಜೆಟ್ ನಲ್ಲಿ ಸಿಎಂ ಘೋಷಿಸಿದ್ದಾರೆ.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.