Karnataka Budget: ರೇಷ್ಮೆಗೆ ಬೆಂಬಲ ; ರಾಮನಗರ, ಶಿಡ್ಲಘಟ್ಟದಲ್ಲಿ ಹೈಟೆಕ್ ಮಾರುಕಟ್ಟೆ
ತಲಾ 75 ಕೋಟಿ ರೂ. ವೆಚ್ಚ.... ಶೂನ್ಯ ಬಡ್ಡಿದರದಲ್ಲಿ ಸಾಲ
Team Udayavani, Jul 7, 2023, 3:04 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್ ನಲ್ಲಿ ರೇಷ್ಮೆ ಇಲಾಖೆಗೆ ಪ್ರೋತ್ಸಾಹ ನೀಡಲಾಗಿದೆ.
ರಾಮನಗರ ಮತ್ತು ಶಿಡ್ಲಘಟ್ಟದ ರೇಷ್ಮೆಗೂಡಿನ ಮಾರುಕಟ್ಟೆಗಳಲ್ಲಿ ಏಶಿಯಾದಲ್ಲಿಯೇ ಅತಿ ಹೆಚ್ಚಿನ ವಹಿವಾಟು ನಡೆಯುತ್ತಿದ್ದು, ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಅತಿದೊಡ್ಡ ಹೈಟೆಕ್ ಮಾರುಕಟ್ಟೆಯನ್ನು ನಿರ್ಮಿಸಲಾಗುತ್ತಿದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿ.
ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯವನ್ನು ಬಲಪಡಿಸಲಾಗುತ್ತಿದೆ. ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ.
ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಸುಲಭವಾಗಿ ದುಡಿಯುವ ಬಂಡವಾಳವನ್ನು ಒದಗಿಸಲು ಮತ್ತು ರೇಷ್ಮೆಗೂಡಿನ ಖರೀದಿಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.