![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 2, 2021, 7:46 AM IST
ಬೆಂಗಳೂರು : ಭಾರೀ ಕುತೂಹಲ ಕೆರಳಿಸಿರುವ ಕರ್ನಾಟಕ ಚುನಾವಣೆಯ ಫಲಿತಾಂಶ ಇಂದು (ಭಾನುವಾರ ಮೇ 2) ಮಧ್ಯಾಹ್ನದ ಹೊತ್ತಿಗೆ ಹೊರ ಬೀಳುವ ಸಾಧ್ಯತೆ ಇದೆ. ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಯಾರ ಕೊರಳಿಗೆ ವಿಜಯ ಮಾಲೆ ಬೀಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಬಿಜೆಪಿ ಸಂಸದರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆದಿತ್ತು. ಇನ್ನು ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಕೋವಿಡ್ ಗೆ ಬಲಿಯಾಗಿದ್ದರಿಂದ ಆ ಕ್ಷೇತ್ರ ಕೂಡ ತೆರವಾಗಿತ್ತು. ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಬಿಜೆಪಿ ತೆಕ್ಕೆಗೆ ಸೇರಿಕೊಂಡ ಕಾರಣ ಶಾಸಕ ಸ್ಥಾನಕ್ಕೆ ಅನರ್ಹಗೊಂಡಿದ್ದರು. ಹೀಗಾಗಿ ಆ ಕ್ಷೇತ್ರ ಕೂಡ ತೆರವಾಗಿತ್ತು.
ಈ ಮೂರು ಕ್ಷೇತ್ರಗಳಲ್ಲಿ ವಿವಿಧ ಪಕ್ಷಗಳಿಂದ 30 ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದರು. ಉಪಚುನಾವಣೆಯು ಮಾರ್ಚ್ 17ರಂದು ನಡೆದಿತ್ತು. ಈ ಮೂವತ್ತರಲ್ಲಿ ಯಾರು ಜಯಗಳಿಸಲಿದ್ದಾರೆ ಕಾದು ನೋಡಬೇಕು.
ಬೆಳಗಾವಿ ಲೋಕಸಭೆ ಕ್ಷೇತ್ರ : ಈ ಕ್ಷೇತ್ರದಲ್ಲಿ ಒಟ್ಟು 10 ಅಭ್ಯರ್ಥಿಗಳು ಸ್ಪರ್ಥಿಸಿದ್ದರು. ಸದ್ಯ ಕಾಂಗ್ರೆಸ್ ಮತ್ತು ಬಿಜೆಪಿಗೆ ಇಲ್ಲಿ ಫೈಟ್ ಇದ್ದು, ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿ ಇಂದ ಮಂಗಳಾ ಸುರೇಶ್ ಕಣಕ್ಕಿಳಿದಿದ್ದರು.
ಮಸ್ಕಿ ಉಪಚುನಾವಣೆ : ಇಲ್ಲಿ 8 ಅಭ್ಯರ್ಥಿಗಳು ಚುನಾವಣೆಯನ್ನು ಹೆದರಿಸಿದ್ದಾರೆ. ಬಿಜೆಪಿಯಿಂದ ಪ್ರತಾಪ್ ಗೌಡ ಪಾಟೀಲ್ ಹಾಗೂ ಕಾಂಗ್ರೆಸ್ ಪಕ್ಷದಿಂದ ಬಸನಗೌಡ ಪಾಟೀಲ ತುರ್ವಿಹಾಳ ಅವರು ಇಲ್ಲಿ ಪ್ರಧಾನ ಸ್ಪರ್ಧಾಳುಗಳು.
ಬಸವಕಲ್ಯಾಣ ಉಪಚುವಣೆ : ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ 12 ಅಭ್ಯರ್ಥಿಗಳಿದ್ದಾರೆ. ಬಿಜೆಪಿಯಿಂದ ಶರಣು ಸಲಗರ ಹಾಗೂ ಕಾಂಗ್ರೆಸ್ ನಿಂದ ಮಾಲಾ ಬಿ ಅವರು ಸ್ಪರ್ಧಿಸಿದ್ದಾರೆ. ಜೆಡಿಎಸ್ನಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ ಕಣದಲ್ಲಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.