ಬಸವತತ್ವ, ವಚನಗಳನ್ನು ಒಪ್ಪುವವರಿಗೆ ಮಾತ್ರ ಮಾನ್ಯತೆ: ಟಿಬಿಜೆ
Team Udayavani, Mar 19, 2018, 4:37 PM IST
ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತ ಕಾಯ್ದೆಯ ಸೆಕ್ಷನ್ 2(ಡಿ), ಕೇಂದ್ರ ಅಲ್ಪಸಂಖ್ಯಾತ ಕಾಯ್ದೆ 2(ಸಿ) ಪ್ರಕಾರ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಶಿಫಾರಸು ಮಾಡಲಾಗಿದೆ. ಬಸವ ತತ್ವ, ವಚನಗಳನ್ನು ಒಪ್ಪುವವರಿಗೆ ಅಲ್ಪಸಂಖ್ಯಾತ ಧರ್ಮಕ್ಕೆ ಮಾನ್ಯತೆ ಎಂದು ಸಚಿವ ಟಿಬಿ ಜಯಚಂದ್ರ ಅವರು ತಿಳಿಸಿದರು.
ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ನಡೆದಿದ್ದು, ಸಭೆಯಲ್ಲಿ ನ್ಯಾ.ನಾಗಮೋಹನ್ ದಾಸ್ ಸಮಿತಿ ನೀಡಿದ್ದ ವರದಿಯನ್ನು ಅಂಗೀಕರಿಸಿತ್ತು. ಅಲ್ಲದೇ ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗಾಗಿ ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಸಭೆ ಒಮ್ಮತದ ನಿರ್ಧಾರ ಕೈಗೊಂಡಿತ್ತು.
ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜಯಚಂದ್ರ ಅವರು, ಬಸವಣ್ಣನೇ ಧರ್ಮಗುರು, ವಚನಗಳೇ ಧರ್ಮಗ್ರಂಥ ಎಂದು ಶಿಫಾರಸು ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಶಿಫಾರಸನ್ನು ಓದಿದರು. ವೀರಶೈವ ಲಿಂಗಾಯತರು ಅಲ್ಪಸಂಖ್ಯಾತ ಲಿಂಗಾಯತರ ಭಾಗ. ವೀರಶೈವ ಪರಂಪರೆ ಪ್ರತಿಪಾದಕರಿಗೆ ಇಲ್ಲಿ ಅವಕಾಶವಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.