ಸಂಪುಟದಲ್ಲಿ ಸಿಎಂ ಬೊಮ್ಮಾಯಿ ಬ್ಯಾಲೆನ್ಸ್: ಬಿಎಸ್ ವೈ- ಹೈಕಮಾಂಡ್ ಕೊಂಡಿ
Team Udayavani, Aug 5, 2021, 10:26 AM IST
ಬೆಂಗಳೂರು: ಬಿಜೆಪಿ ಹೈಕಮಾಂಡ್ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ನಡುವಿನ ಪೈಪೋಟಿಯಿಂದ ಬಸವರಾಜ ಬೊಮ್ಮಾಯಿಅವರ ಸಂಪುಟ ರಚನೆಯಾದಂತೆ ಕಾಣಿಸುತ್ತಿದೆ. ಇಬ್ಬರ ನಡುವೆ ಕೊಂಡಿಯಾಗಿ ಸಿಎಂ ಬೊಮ್ಮಾಯಿ ಸಮತೋಲನ ಕಾಯುವಕೆಲಸ ಮಾಡಿದಂತೆಕಾಣಿಸುತ್ತದೆ.
ಇನ್ನು ಒಂದು ವರ್ಷ 9 ತಿಂಗಳು ವಿಧಾನಸಭೆಗೆ ಚುನಾವಣೆ ಇದ್ದರೂ, ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಪ್ರಾದೇಶಿಕತೆ ಮತ್ತು ಜಾತಿ ಲೆಕ್ಕಾಚಾರಕ್ಕೆ ಹೆಚ್ಚಿನ ಆದ್ಯತೆ ನೀಡದೇ, ಯಡಿಯೂರಪ್ಪ ಹಾಗೂ ಹೈಕಮಾಂಡ್ ನಡುವಿನ ಪ್ರತಿಷ್ಠೆಗೆ ನೂತನ ಸಚಿವರ ಆಯ್ಕೆಯಾಗಿರುವುದು ಎದ್ದು ಕಾಣಿಸುತ್ತದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂರು ದಿನಗಳ ಕಾಲ ಸಂಪುಟದಲ್ಲಿ ಯಾರಿರಬೇಕು ಎನ್ನುವ ವಿಚಾರದಲ್ಲಿ ಹೈಕಮಾಂಡ್ ಮತ್ತು ಯಡಿಯೂರಪ್ಪ ನಡುವೆ ಉಂಟಾಗುತ್ತಿದ್ದ ಭಿನ್ನಾಭಿಪ್ರಾಯ ಸರಿ ಪಡಿಸುವುದಕ್ಕೆ ಹೆಚ್ಚಿನ ಶ್ರಮ ವಹಿಸಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.
ಇದನ್ನೂ ಓದಿ:ಕರಾವಳಿಗೆ ಕಮಲ ಕಟಾಕ್ಷ ಸಂಪುಟದಲ್ಲಿ ಮೂವರಿಗೆ ಪ್ರಾತಿನಿಧ್ಯ
ಜಿಪಂ, ತಾಪಂ ಚುನಾವಣೆ, ಸ್ಥಳೀಯ ಸಂಸ್ಥೆಗಳ 25 ಕ್ಷೇತ್ರಗಳ ಚುನಾವಣೆ, 2 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಗಳಿದ್ದರೂ ಸಂಪುಟ ರಚನೆಯ ಲೆಕ್ಕಾಚಾರದಲ್ಲಿ ಅದ್ಯಾವುದನ್ನೂ ಪರಿಗಣನೆಗೆ ತೆಗೆದುಕೊಂಡಂತೆ ಕಾಣಿಸುತ್ತಿಲ್ಲ.
ಸಂಪುಟದಲ್ಲಿ ಯಡಿಯೂರಪ್ಪ ಅವರ ನೆರಳು ಇರದಂತೆ ನೋಡಿಕೊಳ್ಳಲು ಬಿಜೆಪಿ ಹೈಕಮಾಂಡ್ ಸಾಕಷ್ಟು ಕಸರತ್ತು ನಡೆಸಿದ್ದರೂ, ಸಾಧ್ಯವಾಗಿಲ್ಲ. ಆದರೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಸಂಪುಟದಿಂದ ಹೊರಗಿಡುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿಯಾಗಿದೆ. ಅದೂ ಕೂಡ ಯಡಿಯೂರಪ್ಪ ತಮ್ಮ ವಿರೋಧಿಗಳಿಗೆ ಅವಕಾಶ ನೀಡಬಾರದು ಎಂದು ಹಠ ಹಿಡಿದಿದ್ದರಿಂದ ತಮ್ಮ ಪುತ್ರನಿಗೆ ಅವಕಾಶ ಕೊಡಿಸುವಲ್ಲಿ ವಿಫಲರಾಗಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.
ಬೀಸೋ ದೊಣ್ಣೆಯಿಂದ ಪಾರಾಗುವ ಲೆಕ್ಕ: ನೂತನ ಸಂಪುಟ ದಲ್ಲಿ ಹೊಸಬರು, ಯುವಕರು ಹಾಗೂ ಪ್ರಾದೇಶಿಕವಾರು ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂದು ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದರು. ಆದರೆ, ಹೊಸಬರ ಸೇರ್ಪಡೆ ಹಾಗೂ ಹಳಬರನ್ನು ಕೈ ಬಿಟ್ಟಿರುವುದಕ್ಕೆ ನಿರ್ದಿಷ್ಟ ಕಾರಣ ಕಾಣಿಸುತ್ತಿಲ್ಲ. ಹೊಸಬರಲ್ಲಿ ಸುನಿಲ್ ಕುಮಾರ್ ಹಾಗೂ ಬಿ.ಸಿ. ನಾಗೇಶ್ ಅವರನ್ನು ಸಂಘಟನೆಯ ಹಿನ್ನೆಲೆಯ ಲೆಕ್ಕಾಚಾರದಲ್ಲಿ ಸಂಪುಟಕ್ಕೆ ತೆಗೆದು ಕೊಂಡರೂ, ಅದೇ ಸಂಘಟನೆಯ ಹಿನ್ನೆಲೆಯುಳ್ಳ ಅರವಿಂದ ಲಿಂಬಾವಳಿ ಹಾಗೂ ಸುರೇಶ್ ಕುಮಾರ್ ಅವರನ್ನು ಕೈ ಬಿಡಲಾಗಿದೆ.
ಯಡಿಯೂರಪ್ಪ ಸಂಪುಟದಲ್ಲಿ ಅನೇಕ ಸಚಿವರ ವಿರುದ್ಧ ಭ್ರಷ್ಟಾಚಾರ ಹಾಗೂ ಸಿಡಿ ಪ್ರಕರಣಗಳ ಆರೋಪಗಳು ಕೇಳಿಬಂದಿತ್ತು.ಆ ಹಿನ್ನೆಲೆಯಲ್ಲಿ ಅವರನ್ನು ಸಂಪುಟದಿಂದ ಹೊರಗಿಡಬೇಕೆಂಬ ಆರ್‌ಎಸ್‌ಎಸ್‌ನ ಸೂಚನೆಯೂ ಇಲ್ಲಿ ವರ್ಕೌಟ್ ಆದಂತೆ ಕಾಣಿಸುತ್ತಿಲ್ಲ.
ಸಮತೋಲನ ಸಿಎಂ ಪಾತ್ರ: ನೂತನ ಸಂಪುಟದಲ್ಲಿ ಬೊಮ್ಮಾಯಿ ಪಾತ್ರ ಕೇವಲ ಹೈಕಮಾಂಡ್ ಮತ್ತು ಯಡಿಯೂರಪ್ಪ ಅವರ ನಡುವಿನ ಕೊಂಡಿಯಂತೆ ಕೆಲಸ ಮಾಡಿದಂತೆ ಕಾಣಿಸುತ್ತದೆ. ಬೊಮ್ಮಾಯಿ ಸಂಪುಟದಲ್ಲಿ ಅವರ ಆಯ್ಕೆಯ ಯಾವ ಮುಖಗಳೂ ಕಾಣಿಸುತ್ತಿಲ್ಲ. ಈ ಮೂಲಕ ಹೈಕಮಾಂಡ್ ಮತ್ತು ಯಡಿಯೂರಪ್ಪ ಇಬ್ಬರ ವಿಶ್ವಾಸವನ್ನು ಗಳಿಸಿಕೊಂಡು ಗೊಂದಲ ಗಳಿಲ್ಲದೆ ಸಂಪುಟ ರಚನೆಗೆ ದಾರಿ ಮಾಡಿಕೊಂಡಿದ್ದಾರೆಂದು ವಿಶ್ಲೇಷಿಸಲಾಗುತ್ತಿದೆ.
ನೂತನ ಸಂಪುಟದಲ್ಲಿ ಯಡಿಯೂರಪ್ಪ ಬೆನ್ನಿಗೆ ನಿಂತ ರೇಣುಕಾಚಾರ್ಯ, ರಾಜುಗೌಡ, ಎಸ್.ಆರ್. ವಿಶ್ವನಾಥ, ಮಾಡಾಳು ವಿರೂಪಾಕ್ಷಪ್ಪ ಹಾಗೂ ಬಿಎಸ್ ವೈ ವಿರುದ್ಧವಾಗಿ ಬಂಡಾಯ ಸಾರಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ ಹಾಗೂ ಸಿ.ಪಿ. ಯೋಗೇಶ್ವರ್ ಅವರನ್ನು ಸಂಪುಟದಿಂದ ಹೊರಗಿಡುವ ಮೂಲಕ ಬಿಜೆಪಿ ಹೈಕಮಾಂಡ್ ಪಕ್ಷ ಮತ್ತು ಸರ್ಕಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವವರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ.
ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.