ಮೂಲ-ವಲಸಿಗ ಫೈಟ್ ಜೋರು; ಸಂಪುಟ ಸರ್ಜರಿ ಮಾತುಗಳ ಬೆನ್ನಲ್ಲೇ ಹೊಸ ಬೆಳವಣಿಗೆ
Team Udayavani, Nov 26, 2020, 6:20 AM IST
ಬೆಂಗಳೂರು: ಇನ್ನು ಎರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂಬುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿಶ್ವಾಸ. ಇದರ ನಡುವೆಯೇ ಮೂಲ ಮತ್ತು ವಲಸಿಗ ನಾಯಕರ ನಡುವೆ ವಾಕ್ಸಮರವೂ ಜೋರಾಗಿದೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಳಂಬವಾಗುತ್ತಿರುವ ನಡುವೆಯೇ ಒಡಕಿನ ಮಾತುಗಳು ಕೇಳಿಬಂದಿವೆ.
ವಿವಾದಕ್ಕೆ ಎಂ.ಪಿ. ರೇಣುಕಾಚಾರ್ಯ, ಎಂಟಿಬಿ ನಾಗರಾಜ್ ನಾಂದಿ ಹಾಡಿದ್ದಾರೆ. ಬಿಜೆಪಿ ಸರಕಾರ ರಚನೆಗೆ 17 ಮಂದಿ ಕಾರಣ ಎಂಬುದು ಸುಳ್ಳು ಎನ್ನುವುದು ರೇಣುಕಾಚಾರ್ಯ ಹೇಳಿಕೆ. ಆದರೆ 105 ಶಾಸಕರೇ ಮುಖ್ಯವಾಗಿದ್ದರೆ, ಆಗ ಏಕೆ ಸರ ಕಾರ ರಚನೆಯಾಗಲಿಲ್ಲ ಎಂಬುದು ಎಂಟಿಬಿ ನಾಗರಾಜ್ ಪ್ರಶ್ನೆ.
ಈ ಮಧ್ಯೆ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಬಾರದು ಎಂಬುದಾಗಿ ಮೂಲ ಬಿಜೆಪಿಯ ಹಲವರು ಆಕ್ಷೇಪಿಸುತ್ತಿರುವುದನ್ನು ರಮೇಶ್ ಜಾರಕಿಹೊಳಿ ಒಪ್ಪಿ ಕೊಂಡರೂ ಯೋಗೇಶ್ವರ್‌ಗೆ ಸಚಿವ ಸ್ಥಾನ ಕೊಡಿಸಲು ಹೋರಾಟ ಮಾಡುವುದು ನನ್ನ ಧರ್ಮ ಎಂದಿದ್ದಾರೆ. ಇದು ಮೂಲ ಬಿಜೆಪಿಯ ಕೆಲವರನ್ನು ಇನ್ನಷ್ಟು ಕೆರಳಿಸಿದೆ.
ಇದರ ನಡುವೆಯೇ ರೇಣುಕಾಚಾರ್ಯ ನಿವಾಸದಲ್ಲಿ ಕೆಲವು ಶಾಸಕರು ಸಭೆ ನಡೆಸಿದರು. ಅತ್ತ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಚಿವ ಬಿ. ಶ್ರೀರಾಮುಲು, ಮಾಜಿ ಸಂಸದ ಪ್ರಭಾಕರ ಕೋರೆ, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಮಹಾಂತೇಶ್ ಕವಟಗಿಮಠ ಪಾಲ್ಗೊಂಡಿದ್ದರು. ಬಳಿಕ ಜಾರಕಿಹೊಳಿ ಅವರು ದಿಲ್ಲಿಗೆ ಪ್ರಯಾಣ ಬೆಳೆಸಿದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಜತೆ ಚರ್ಚಿಸುವ ಸಾಧ್ಯತೆಗಳಿವೆ ಎಂದು ದಿಲ್ಲಿ ಮೂಲಗಳು ತಿಳಿಸಿವೆ.
ದಿಲ್ಲಿಗೆ ಗಣ್ಯರ ದಂಡು
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಸಿ.ಟಿ. ರವಿ ಅವರು ಶುಕ್ರವಾರ ದಿಲ್ಲಿಯಲ್ಲಿ ಕಚೇರಿ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಆರ್. ಅಶೋಕ್ ಗುರುವಾರ ಸಂಜೆ ಪ್ರಯಾಣ ಬೆಳೆಸಲಿದ್ದಾರೆ. ಇದೇ ನೆಪದಲ್ಲಿ ಹಲವರು ದಿಲ್ಲಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ. ಅವಕಾಶ ಸಿಕ್ಕರೆ ವರಿಷ್ಠರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ಹಾಗೂ ಸಚಿವರು ತಮ್ಮ ಸ್ಥಾನಮಾನ ಭದ್ರಪಡಿಸಿಕೊಳ್ಳಲು ಲಾಬಿ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಹಿರಿಯ ನಾಯಕರು ಗರಂ
ಪಕ್ಷದ ಶಾಸಕರೇ ವ್ಯತಿರಿಕ್ತ ಹೇಳಿಕೆ ನೀಡುತ್ತಿರುವ ಬಗ್ಗೆ ಪಕ್ಷದ ಹಿರಿಯ ನಾಯಕರು ಗರಂ ಆಗಿದ್ದಾರೆ. ಮುಂದೆ ಈ ರೀತಿಯ ಹೇಳಿಕೆ ನೀಡದಂತೆ ಹಿರಿಯ ನಾಯಕರು ಪಕ್ಷದ ಶಾಸಕರಿಗೆ ಖಡಕ್ ಸೂಚನೆ ನೀಡುವ ಸಾಧ್ಯತೆ ಇದೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಗೆ ಅನ್ಯ ಪಕ್ಷಗಳ 17 ಶಾಸಕರು ಹೇಗೆ ಕಾರಣವೋ ಹಾಗೆಯೇ ಬಿಜೆಪಿಯ 105 ಶಾಸಕರೂ ಕಾರಣರಾಗಿದ್ದಾರೆ ಎಂಬ ಬಿಜೆಪಿ ನಾಯಕರ ಅಭಿಪ್ರಾಯ ನಿಜ. ಅವರ ಮಾತು ಸತ್ಯ.
– ರಮೇಶ್ ಜಾರಕಿಹೊಳಿ, ಸಚಿವ
ಮೂಲ-ವಲಸಿಗ ಎಂಬ ಪ್ರಶ್ನೆಯೇ ಇಲ್ಲ. 105 ಶಾಸಕರು ಮೂಲ ಬಿಜೆಪಿಗರು ಹಾಗೂ 17 ಮಂದಿ ವಲಸಿಗರು ಎಂಬ ಯಾವುದೇ ವರ್ಗೀಕರಣವೂ ಅಗತ್ಯವಿಲ್ಲ.
– ಎಸ್.ಟಿ. ಸೋಮಶೇಖರ್, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.