ಸಚಿವ ಸಂಪುಟ ಸರ್ಕಸ್ ನಲ್ಲಿ ‘ಏಳರಾಟ’: ಯಾರಿಗೆಲ್ಲಾ ಸಿಗಬಹುದು ಸಚಿವಗಿರಿ?
Team Udayavani, Jan 11, 2021, 10:13 AM IST
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ದಿಲ್ಲಿ ಭೇಟಿ ಫಲಪ್ರದವಾಗಿದ್ದು, ಕೊನೆಗೂ ಸಂಪುಟ ವಿಸ್ತರಣೆಗೆ ವರಿಷ್ಠರಿಂದ ಸಮ್ಮತಿ ಪಡೆದಿದ್ದಾರೆ. ಇದೀಗ ರಾಜ್ಯದಲ್ಲಿ ಹೊಸ ಲೆಕ್ಕಾಚಾರಗಳು ಆರಂಭವಾಗಿದ್ದು, ಆಕಾಂಕ್ಷಿಗಳ ಲಾಬಿ ಆರಂಭವಾಗಿದೆ.
ಸಂಕ್ರಾಂತಿ ಹಿಂದಿನ ದಿನ ಅಂದರೆ ಬುಧವಾರ ಮಧ್ಯಾಹ್ನ ನೂತನ ಸಚಿವ ಪ್ರಮಾಣ ವಚನ ನಡೆಯಲಿದೆ ಎಂದು ಬಿಎಸ್ ವೈ ಹೇಳಿದ್ದಾರೆ. ಇದೇ ವೇಳೆ ಏಳು ಮಂದಿ ಸಚಿವರಾಗಿಲಿದ್ದಾರೆ ಎಂದಿದ್ದಾರೆ. ಆದರೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆಯೋ ಎನ್ನುವ ಬಗ್ಗೆ ಬಿಎಸ್ ವೈ ಇನ್ನೂ ಸಸ್ಪನ್ಸ್ ಬಿಟ್ಟುಕೊಟ್ಟಿಲ್ಲ.
ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬರಲು ನೆರವಾದವರಿಗೆ ಮೊದಲ ಆದ್ಯತೆ ಸಿಗವುದು ಬಹುತೇಕ ಖಚಿತವಾಗಿದೆ. ಸಚಿವ ಸ್ಥಾನಕ್ಕಾಗಿ ಕೆಲವು ತಿಂಗಳಿನಿಂದ ಕಾಯುತ್ತಿರುವ ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಅವರೊಂದಿಗೆ ಇತ್ತೀಚೆಗೆ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮುನಿರತ್ನ ಅವರಿಗೂ ಸಚಿವ ಸ್ಥಾನ ಬಹುತೇಕ ಪಕ್ಕಾ ಆಗಿದೆ.
ಇದನ್ನೂ ಓದಿ:ಜೆ.ಪಿ.ನಡ್ಡಾ, ಅರುಣ್ ಸಿಂಗ್ ಸಮ್ಮುಖದಲ್ಲಿ ನೂತನ ಸಚಿವರ ಪ್ರಮಾಣ ವಚನ: ಬಿಎಸ್ ವೈ
ಇವರೊಂದಿಗೆ ‘ಆಪರೇಷನ್’ ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಅವರಿಗೂ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ಸಚಿವ ರಮೇಶ್ ಜಾರಕಿಹೊಳಿ ಈ ಹಿಂದೆ ಇವರಿಗಾಗಿ ಲಾಭಿ ನಡೆಸಿದ್ದನ್ನು ಮರೆಯುವಂತಿಲ್ಲ.
ಉಳಿದಂತೆ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಹಿರಿಯ ಶಾಸಕ ಉಮೇಶ್ ಕತ್ತಿ ಅವರ ಹೆಸರು ಮುಂಚೂಣಿಯಲ್ಲಿದೆ. ಈ ಬಾರಿ ಅವರಿಗೆ ಸ್ಥಾನ ನೀಡಿ ಸಮಾಧಾನ ಪಡಿಸುವ ಯೋಜನೆಯಲ್ಲಿ ಬಿಎಸ್ ವೈ ಇದ್ದಾರೆ ಎನ್ನಲಾಗಿದೆ.
ಕರಾವಳಿಗೆ ಸ್ಥಾನ: ಕರಾವಳಿಯ ಉಡುಪಿ – ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯು.ಟಿ. ಖಾದರ್ ಹೊರತುಪಡಿಸಿ ಉಳಿದೆಲ್ಲಾ ಬಿಜೆಪಿ ಶಾಸಕರಿದ್ದಾರೆ, ಆದರೆ ಸಚಿವ ಸ್ಥಾನ ನೀಡಿರುವುದು ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಗೆ. ಆದರೆ ಈ ಬಾರಿ ಒಬ್ಬರಿಗಾದರೂ ಸಚಿವ ಸ್ಥಾನ ನೀಡಬೇಕೆಂಬ ಕೂಗಿದೆ. ರೇಸ್ ನಲ್ಲಿ ಮುಂಚೂಣಿಯಲ್ಲಿರುವುದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೆಸರು. ಸುಳ್ಯ ಶಾಸಕ ಎಸ್.ಅಂಗಾರ ಹೆಸರು ಈ ಹಿಂದೆ ಕೇಳಿ ಬಂದಿತ್ತಾದರೂ ಈ ಬಾರಿ ಅಂಥಹ ಲಾಬಿ ಕಾಣಿಸಿಲ್ಲ.
ಇದನ್ನೂ ಓದಿ: ಕಾರಿನಲ್ಲೇ ಕುಳಿತು ಹೈಕಮಾಂಡ್ ಜತೆ ಸಿಎಂ ಚರ್ಚೆ: ರಾಘವೇಂದ್ರಗೆ ಮಂತ್ರಿಗಿರಿ?
ಉಳಿದಂತೆ ಅರವಿಂದ ಲಿಂಬಾವಳಿ, ಹಾಲಪ್ಪ ಆಚಾರ್, ರೇಣುಕಾಚಾರ್ಯ, ರಾಮದಾಸ್, ಪೂರ್ಣಿಮಾ ಶ್ರೀನಿವಾಸ್ ಮುಂತಾದವರ ಹೆಸರುಗಳು ಕೇಳಿ ಬರುತ್ತಿದೆ. ಅರವಿಂದ ಬೆಲ್ಲದ್, ಪರಣ್ಣ ಮುನವಳ್ಳಿ ಸೇರಿದಂತೆ ಅಚ್ಚರಿಯ ಹೆಸರುಗಳು ಸಂಪುಟ ಪಟ್ಟಿಯಲ್ಲಿ ಸ್ಥಾನ ಪಡೆಯಲೂ ಬಹುದು. ಎಲ್ಲಾ ಪ್ರಶ್ನೆಗಳಿಗೂ, ಲೆಕ್ಕಾಚಾರಗಳಿಗೂ ಇನ್ನೆರಡು ದಿನಗಳಲ್ಲಿ ತೆರೆ ಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.