15ರ ಅನಂತರ ಸಂಪುಟ ವಿಸ್ತರಣೆ? ಕುತೂಹಲ ಹೆಚ್ಚಿಸಿದ ಬಿಎಸ್‌ವೈ-ಸಿಎಂ ಭೇಟಿ
Team Udayavani, Aug 13, 2022, 7:10 AM IST
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು ರಾಜಕೀಯ ವಲಯಗಳಲ್ಲಿ ಕುತೂ ಹಲ ಮೂಡಿಸಿದೆ.
ಇದೇ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ಆಯೋ ಜಿಸಲಾಗಿದ್ದು, ಬಿಎಸ್‌ವೈ ಅವರನ್ನು ಸಿಎಂ ಆಹ್ವಾನಿಸಿದ್ದಾರೆ.
ಜತೆಗೆ, ಪ್ರಸಕ್ತ ರಾಜಕೀಯ ಬೆಳವಣಿಗೆ ಗಳು ಹಾಗೂ ಆ.15ರ ಬಳಿಕ ಸಂಪುಟ ವಿಸ್ತರಣೆ ಕುರಿತು ಚರ್ಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಳೆದ ತಿಂಗಳು ಜನೋತ್ಸವ ನಡೆಸಲು ತೀರ್ಮಾನಿಸಲಾಗಿತ್ತು.
ಆದರೆ ಕಡೇ ಕ್ಷಣದಲ್ಲಿ ರದ್ದಾಗಿತ್ತು. ಸಿದ್ಧತೆ ವೇಳೆಯಲ್ಲಿ ಕೇವಲ ಬೊಮ್ಮಾಯಿ ಆಡಳಿ ತಾವಧಿಯ ಸಾಧನೆಗಳಿಗೆ ಮಾತ್ರ ಮಹತ್ವ ನೀಡಿ, ಬಿಜೆಪಿ ಸರಕಾರದ 3 ವರ್ಷಗಳ ಸಾಧನೆಯನ್ನು ಪರಿಗಣಿಸಿರಲಿಲ್ಲ ಎಂಬ ಅಸಮಾಧಾನವೂ ಎದ್ದಿತ್ತು. ಈ ಬಗ್ಗೆ ಯಡಿಯೂರಪ್ಪ ಅವರು ವರಿಷ್ಠರ ಮುಂದೆ ಬೇಸರ ವ್ಯಕ್ತಪಡಿಸಿದ್ದರು ಎನ್ನಲಾಗಿತ್ತು.
ಇದಾದ ಬಳಿಕ ಬೆಂಗಳೂರಿಗೆ ಬಂದಿದ್ದ ಕೇಂದ್ರ ಸಚಿವ ಅಮಿತ್ ಶಾ ಅವರು, ಬಿಎಸ್‌ವೈ ಜತೆಗೆ ಪ್ರತ್ಯೇಕ ಮಾತುಕತೆ ನಡೆಸಿದ್ದರು. ರಾಜ್ಯದ ನಾಯಕರಿಗೆ ಯಡಿಯೂರಪ್ಪ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವಂತೆ ಸೂಚಿಸಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಬೊಮ್ಮಾಯಿ ಇತರ ಸಚಿವರೊಂದಿಗೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಜನೋತ್ಸವಕ್ಕೆ ಅಧಿಕೃತ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.
ಸಂಪುಟ ಚರ್ಚೆ: ಆ.15ರ ಬಳಿಕ ಸಚಿವ ಸಂಪುಟದಲ್ಲಿ ಕೆಲವು ಬದಲಾವಣೆ ಮಾಡಲಾಗುತ್ತದೆ ಎಂಬ ಮಾತು ಬಲವಾಗಿ ಕೇಳಿ ಬರುತ್ತಿದ್ದು, ಕೆಲವರನ್ನು ಕೈ ಬಿಡುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.
ಸಿಎಂ ಬದಲಿಲ್ಲ
ಬೊಮ್ಮಾಯಿ ಅವರ ನೇತೃತ್ವ ದಲ್ಲೇ ಮುಂದಿನ ವಿಧಾನ ಸಭೆ ಚುನಾವಣೆ ಎದುರಿಸುವುದಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೊಸದಿಲ್ಲಿಯಲ್ಲಿ ಹೇಳಿ ದ್ದಾರೆ. ರೈತರ, ಯುವ ಸಮೂಹದ ಪರವಾಗಿ ಜನಸಾಮಾನ್ಯರ ಸಿಎಂ ಎಂಬಂತೆ ಕೆಲಸ ಮಾಡುತ್ತಿರುವ ಬೊಮ್ಮಾಯಿಯವರನ್ನು ಬದಲಿ ಸುವ ಪ್ರಶ್ನೆಯೇ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.