68.15 ಲಕ್ಷ ಜಾಹೀರಾತು ಶುಲ್ಕ ವಂಚನೆ; ಸಿಎಂ ವಿರುದ್ಧ ಲೋಕಾದಲ್ಲಿ ದೂರು
Team Udayavani, Jun 20, 2017, 1:28 PM IST
ಬೆಂಗಳೂರು: ಆಡಳಿತಾರೂಢ ರಾಜ್ಯ ಸರ್ಕಾರದ 3ನೇ ಮತ್ತು 4ನೇ ವರ್ಷದ ಸಾಧನೆಯ ಪ್ರಚಾರಕ್ಕಾಗಿ ಬಿಬಿಎಂಪಿ ಒಡೆತನದ ಬಸ್ ಶೆಲ್ಟರ್ ಅನ್ನು ಜಾಹೀರಾತಿಗೆ ಬಳಸಿಕೊಂಡಿತ್ತು. ಆದರೆ ಕಳೆದ 2 ವರ್ಷಗಳ ಜಾಹೀರಾತು ಶುಲ್ಕ 68.15 ಕೋಟಿ ರೂಪಾಯಿಯಷ್ಟು ಹಣವನ್ನು ವಂಚಿಸಿರುವುದಾಗಿ ಆರೋಪಿಸಿ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ಸಿಎಂ ಹಾಗೂ ಸರ್ಕಾರದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
439 ಬಸ್ ನಿಲ್ದಾಣಗಳ ಜಾಹೀರಾತು ಅಳವಡಿಕೆಯಲ್ಲಿ ಅಕ್ರಮ ಮಾಡಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡುವ ನಿಟ್ಟಿನಲ್ಲಿ ಪಾಲಿಕೆಗೆ ನೀಡಬೇಕಾಗಿದ್ದ ಶುಲ್ಕವನ್ನೇ ನೀಡಿಲ್ಲ ಎಂದು ಆರೋಪಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್, 2ವರ್ಷಗಳಿಂದ 68.15 ಕೋಟಿ ರೂಪಾಯಿ ಜಾಹೀರಾತು ಶುಲ್ಕವನ್ನು ರಾಜ್ಯ ಸರ್ಕಾರ ವಂಚಿಸಿದೆ. ಈ ಬಗ್ಗೆ ಐಎಎಸ್ ಅಧಿಕಾರಿ ರಶ್ಮಿ ಅವರು ರಾಜ್ಯ ಸರ್ಕಾರಕ್ಕೆ ಡಿಮ್ಯಾಂಡ್ ನೋಟಿಸ್ ನೀಡಲು ಮುಂದಾಗಿದ್ದರು ಎಂದು ತಿಳಿಸಿದರು.
ಪ್ರತಿವರ್ಷ 34.07 ಲಕ್ಷ ರೂಪಾಯಿ ಜಾಹೀರಾತು ಶುಲ್ಕ ವಂಚಿಸಲಾಗಿದೆ. 2 ವರ್ಷದ 68.15 ಲಕ್ಷ ಜಾಹೀರಾತು ಶುಲ್ಕ ವಂಚಿಸಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನ ಕಾರ್ಯದರ್ಶಿ , ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ವಿರುದ್ಧ ಲೋಕಾಯುಕ್ತ ಹಾಗೂ ಎಸಿಬಿಯಲ್ಲಿ ದೂರು ದಾಖಲಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.