ಕಾಂಗ್ರೆಸ್‌ನಲ್ಲೀಗ ಸಿಎಂ ಯುದ್ಧ; ಸಿದ್ದರಾಮಯ್ಯ ಪರವಾಗಿ ಒಂದು ವರ್ಗದ ಪಟ್ಟು

ಮತ್ತೊಂದೆಡೆ ಸಾಮೂಹಿಕ ನಾಯಕತ್ವ ಮಂತ್ರ

Team Udayavani, Apr 21, 2022, 7:30 AM IST

ಕಾಂಗ್ರೆಸ್‌ನಲ್ಲೀಗ ಸಿಎಂ ಯುದ್ಧ; ಸಿದ್ದರಾಮಯ್ಯ ಪರವಾಗಿ ಒಂದು ವರ್ಗದ ಪಟ್ಟು

ಬೆಂಗಳೂರು: “ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಿದ್ದರೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿ’ ಎಂಬ ಬೇಡಿಕೆಯನ್ನು ರಾಜ್ಯ ಕಾಂಗ್ರೆಸ್‌ನ ತಂಡವೊಂದು ಮುಂದಿಟ್ಟಿದೆ. ರಾಜ್ಯ ಕಾಂಗ್ರೆಸ್‌ನ ನೇತೃತ್ವ ಯಾರಿಗೆ ಎಂಬ ಬಗ್ಗೆ ಆಂತರಿಕ ಗೊಂದಲ ಮುಂದುವರಿದಿರುವ ನಡುವೆಯೇ ಈ ಹೊಸ ಬೆಳವಣಿಗೆ ನಡೆದಿದೆ.

ಪಂಜಾಬ್‌ನಲ್ಲಿ ನಡೆದಿದ್ದ ಚುನಾವಣೆ ವೇಳೆ ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿತ್ತು. ಅದೇ ರೀತಿ 2023ರ ವಿಧಾನಸಭೆ ಚುನಾ ವಣೆಯಲ್ಲಿ ರಾಜ್ಯದಲ್ಲೂ ಸಿಎಂ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ರಾಹುಲ್‌ ಗಾಂಧಿಯವರ ಗಮನ ಸೆಳೆಯಲು ಈ ತಂಡ ಮುಂದಾಗಿದೆ.

ಅಲ್ಪಸಂಖ್ಯಾಕ ಸಮುದಾಯದ ಮತ ಪೂರ್ಣ ಪ್ರಮಾಣದಲ್ಲಿ ಕಾಂಗ್ರೆಸ್‌ಗೆ ಬರಬೇಕಾದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಅಭ್ಯರ್ಥಿಯಾಗಬೇಕು ಎನ್ನುವುದು ಅವರ ಬೆಂಬಲಿಗರ ವಾದ. ಆದರೆ ಇಂಥ ಕ್ರಮದಿಂದ ಒಕ್ಕಲಿಗ, ಲಿಂಗಾಯತ ಹಾಗೂ ದಲಿತ ಸಮುದಾಯ ದೂರವಾಗಬಹುದು ಎಂಬುದು ಇತರ ನಾಯಕರ ಎನ್ನಲಾಗಿದೆ.

ಇಕ್ಕಟ್ಟಿನಲ್ಲಿ ವರಿಷ್ಠರು
ಹೈಕಮಾಂಡ್‌ ಕೂಡ ಈ ವಿಚಾರದಲ್ಲಿ ಇಕ್ಕಟ್ಟಿಗೆ ಸಿಲುಕಿದಂತಿದೆ. ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಲುವಾಗಿಯೇ ಮಾಸಾಂತ್ಯಕ್ಕೆ ಸಿದ್ದರಾಮಯ್ಯ ಹಾಗೂ ಇತರ ಕೆಲವು ಪ್ರಮುಖ ನಾಯಕರನ್ನು ದಿಲ್ಲಿಗೆ ಕರೆಸಿಕೊಳ್ಳುವ ಸಾಧ್ಯತೆಯೂ ಇದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಸಮುದಾಯ ಸಿಟ್ಟು
ಇತ್ತೀಚೆಗಿನ ಹಿಜಾಬ್‌, ಹಲಾಲ್‌, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಮುಂತಾದ ಕೆಲವು ವಿಷಯಗಳಲ್ಲಿ ಮುಸ್ಲಿಮರ ಪರವಾಗಿ ಕಾಂಗ್ರೆಸ್‌ ಗಟ್ಟಿ ಧ್ವನಿ ಎತ್ತಿಲ್ಲ ಹಾಗೂ ಅವರ ಬೆಂಬಲಕ್ಕೆ ನಿಂತಿಲ್ಲ ಎಂಬ ಸಿಟ್ಟು ಪಕ್ಷದ ಮುಸ್ಲಿಂ ನಾಯಕರಲ್ಲಿದೆ. ಜತೆಗೆ ಮುಸ್ಲಿಂ ಧಾರ್ಮಿಕ ನಾಯಕರೂ ಅಸಮಾಧಾನ ಹೊಂದಿದ್ದಾರೆ. ಅದನ್ನು ಸರಿಪಡಿಸಿ ಮುಸ್ಲಿಮರ ಬೆಂಬಲವನ್ನು ಮತ್ತೆ ಪಡೆದುಕೊಳ್ಳಲು ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವುದು ಸೂಕ್ತ ಎಂದು ಮಾಜಿ ಸಚಿವರೊಬ್ಬರು ಹೇಳುತ್ತಾರೆ.

ಸಭೆಯಲ್ಲಿ ಆರಿಸೋಣ
ಆದರೆ ಕಾಂಗ್ರೆಸ್‌ನಲ್ಲಿ ಸದ್ಯ ಕರ್ನಾಟಕದ ಮಟ್ಟಿಗೆ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಅಭ್ಯರ್ಥಿ ಯನ್ನು ಘೋಷಿಸುವುದು ಕಷ್ಟ. ಇದರಿಂದ ಇತರ ಸಮುದಾಯಗಳು ಪಕ್ಷದಿಂದ ದೂರವಾಗಬಹುದು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದ ರಾಮಯ್ಯ ಸಹಿತ ಹಲವು ಅರ್ಹ ಆಕಾಂಕ್ಷಿಗಳಿದ್ದಾರೆ. ಚುನಾವಣೆ ಬಳಿಕವೇ ಶಾಸಕಾಂಗ ಪಕ್ಷದ ಸಭೆ ಯಲ್ಲಿ ಮುಖ್ಯಮಂತ್ರಿಯನ್ನು ಆರಿಸು ವುದೊಳಿತು ಎಂಬುದು ಹಿರಿಯ ನಾಯಕರ ಅಭಿಪ್ರಾಯವಾಗಿದೆ.

ನಾಯಕರಿಂದ ಸಿದ್ಧಗೊಳ್ಳುತ್ತಿದೆ ಪತ್ರ
ಮುಂದಿನ ಚುನಾವಣೆಗೆ ಮಲ್ಲಿ ಕಾರ್ಜುನ ಖರ್ಗೆ, ಸಿದ್ದ ರಾಮಯ್ಯ, ಡಿ.ಕೆ.ಶಿವಕುಮಾರ್‌, ಎಂ.ಬಿ. ಪಾಟೀಲ್‌, ಬಿ.ಕೆ. ಹರಿಪ್ರಸಾದ್‌, ಡಾ| ಜಿ. ಪರಮೇಶ್ವರ್‌, ಕೆ.ಎಚ್‌. ಮುನಿಯಪ್ಪ, ಸತೀಶ್‌ ಜಾರಕಿ ಹೊಳಿ, ರಾಮಲಿಂಗಾ ರೆಡ್ಡಿ ಜತೆಗೆ ಅಲ್ಪಸಂಖ್ಯಾಕ ಮತ ಸೆಳೆಯುವ ನಿಟ್ಟಿನಲ್ಲಿ ಜಮೀರ್‌ ಅಹಮದ್‌, ಸಲೀಂ ಅಹಮದ್‌, ನಸೀರ್‌ ಆಹಮದ್‌, ಯು.ಟಿ. ಖಾದರ್‌, ಕೆ.ಜೆ. ಜಾರ್ಜ್‌ ಅವರನ್ನೊಳ ಗೊಂಡ ತಂಡ ರಚಿಸಿ ಸಾಮೂಹಿಕ ನಾಯ ಕತ್ವದಡಿ ಚುನಾವಣೆಗೆ ಸಜ್ಜು ಗೊಳಿಸಬೇಕು ಎಂದು ಹೈಕಮಾಂಡ್‌ ಮೇಲೆ ಒತ್ತಡ ಹೇರಲು ನಾಯಕರ ಗುಂಪು ಪತ್ರ ಸಿದ್ಧಪಡಿಸುತ್ತಿದೆ ಎನ್ನಲಾಗಿದೆ.

- ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.