![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jul 17, 2017, 1:35 PM IST
ಬೆಂಗಳೂರು: ಪರಪ್ಪನ ಅಗ್ರಹಾರದ ಅವ್ಯವಹಾರ ಬಯಲಿಗೆಳೆದಿದ್ದ ಕಾರಾಗೃಹ ಇಲಾಖೆ ಡಿಐಜಿ ರೂಪಾ ಹಾಗೂ ಕಾರಾಗೃಹ ಡಿಜಿಪಿ ಎಚ್.ಎನ್ ಸತ್ಯನಾರಾಯಣ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿ ಆದೇಶ ಹೊರಡಿಸುವ ಮೂಲಕ ಇಬ್ಬರು ಐಪಿಎಸ್ ಅಧಿಕಾರಿಗಳ ಜಟಾಪಟಿಗೆ ಬ್ರೇಕ್ ಹಾಕಿದೆ.
ಕಾರಾಗೃಹ ಇಲಾಖೆಯ ಡಿಜಿಪಿ ಎಚ್ ಎನ್ ಸತ್ಯನಾರಾಯಣ ಸೇರಿದಂತೆ ಐವರನ್ನು ರಾಜ್ಯಸರ್ಕಾರ ವರ್ಗಾವಣೆ ಮಾಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾಗೆ ವಿಶೇಷ ಆತಿಥ್ಯ ನೀಡಲಾಗಿದೆ ಎಂದು ರೂಪಾ ಅವರು ವರದಿ ನೀಡಿದ್ದರು. ಈ ವಿಚಾರದಲ್ಲಿ ಡಿಐಜಿ ರೂಪಾ ಮತ್ತು ಡಿಜಿಪಿ ಸತ್ಯನಾರಾಯಣ ನಡುವೆ ಸಮರ ನಡೆದಿತ್ತು.
ಜುಲೈ ಅಂತ್ಯಕ್ಕೆ ನಿವೃತ್ತಿಯಾಗಲಿರುವ ಸತ್ಯನಾರಾಯಣ ರಾವ್ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ. ಮಂಗಳೂರು ಕೋಮುಗಲಭೆ ಹತ್ತಿಕ್ಕುವಲ್ಲಿ ವಿಫಲರಾಗಿದ್ದ ಗುಪ್ತಚರ ಇಲಾಖೆಯ ಡಿಜಿಪಿ ಎಂಎನ್ ರೆಡ್ಡಿ ಅವರನ್ನು ಭ್ರಷ್ಟಾಚಾರ ನಿಗ್ರಹ ದಳಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ವರ್ಗಾವಣೆಗೊಂಡ ಅಧಿಕಾರಿಗಳು
ಎಂಎನ್ ರೆಡ್ಡಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ
ಡಿ ರೂಪಾ ಸಾರಿಗೆ ಸುರಕ್ಷತಾ ವಿಭಾಗ(ಟ್ರಾಫಿಕ್ ಕಮಿಷನರ್)
ಅಮೃತ್ ಪಾಲ್ ಗುಪ್ತಚರ ವಿಭಾಗ ಡಿಜಿಪಿ
ಎನ್ ಎಸ್ ಮೇಘರಿಕ್ – ಕಾರಾಗೃಹದ ಎಡಿಜಿಪಿ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.