ಮತ್ತೆ 124 ಸೋಂಕು ಪ್ರಕರಣ ಪತ್ತೆ
Team Udayavani, May 19, 2022, 10:30 PM IST
ಬೆಂಗಳೂರು: ರಾಜ್ಯದಲ್ಲಿ ಗುರುವಾರ 124 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ. 0.64 ದಾಖಲಾಗಿದೆ.
19,141 ಮಂದಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, 1,726 ಸಕ್ರಿಯ ಪ್ರಕರಣಗಳು ದಾಖಲಾಗಿವೆ. 159 ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್‌ಗೆ ಸಂಬಂಧಿಸಿದಂತೆ ಯಾವುದೇ ಸಾವುಗಳು ದಾಖಲಾಗಿಲ್ಲ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಒಟ್ಟಾರೆ 124 ಪ್ರಕರಣಗಳಲ್ಲಿ ಬೆಂಗಳೂರು ನಗರದಲ್ಲೇ 116 ಮಂದಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ. ದಕ್ಷಿಣ ಕನ್ನಡ 4, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆದೆ. ಈವರೆಗೆ ಒಟ್ಟು 39.50 ಲಕ್ಷ ಮಂದಿಗೆ ಸೋಂಕು ತಗುಲಿದ್ದು, 39.08 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. 40,064 ಮಂದಿ ಮರಣವನ್ನಪ್ಪಿದ್ದಾರೆ.
ಗುರುವಾರ 50,889 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. 5,869 ಮಂದಿ ಮೊದಲ ಡೋಸ್, 36,089 ಮಂದಿ ಎರಡನೇ ಡೋಸ್ ಮತ್ತು 10,134 ಮಂದಿ ಮೂರನೇ ಡೋಸ್ ಸ್ವೀಕರಿಸಿದ್ದಾರೆ. ಈವರೆಗೆ ಒಟ್ಟು 10.75 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಇಲಾಖೆಯ ಕೋವಿಡ್ ಬುಲೆಟಿನ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.