Karnataka ಬರಗಾಲ ಘೋಷಣೆ; ಸೆ.4 ರಂದು ತೀರ್ಮಾನ: ಸಿಎಂ ಸಿದ್ದರಾಮಯ್ಯ

'ಅಖಂಡ ಕರ್ನಾಟಕ' ಉತ್ತರ,ದಕ್ಷಿಣ ಎಂಬ ತಾರತಮ್ಯ ಇಲ್ಲ

Team Udayavani, Sep 2, 2023, 5:14 PM IST

1-asdsad

ಬಾಗಲಕೋಟೆ : ಕೃಷ್ಣಾ ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷ್ಣೆಗೆ ಇಂದು ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿ, ಆಲಮಟ್ಟಿಯ ಸಂಗ್ರಹಣೆ ಮಟ್ಟ 519.6 ಮೀಟರ್ ಅಡಿ ಇದೆ. ಅದರ ಒಟ್ಟು ಸಂಗ್ರಹಣೆ 123.08 ಟಿ.ಎಂಸಿ. ಒಂದು ಟಿಎಂಸಿ ನೀರು ಎಂದರೆ 11 ಸಾವಿರ ಕ್ಯೂಸೆಕ್ಸ್ ನೀರು. ಇಡೀ ಕರ್ನಾಟಕದ ಜಲಾಶಯಗಳಲ್ಲಿ ಕೃಷ್ಣಾ ಮೇಲ್ದಂಡೆ ಪೂರ್ಣ ಭರ್ತಿಯಾಗಿದೆ. ನಾರಾಯಣಪುರ ಜಲಾಶಯ ತುಂಬಿದೆ. ಭರ್ತಿಯಾಗಿರುವುದರಿಂದ ನಾಲೆಗಳಿಗೆ, ಕುಡಿಯುವ ನೀರು, ವಿದ್ಯುಚ್ಛಕ್ತಿ ಉತ್ಪಾದನೆಗೆ ನೀರು ಹರಿಸಲಾಗುತ್ತಿದೆ. ಕುಡಿಯುವ ನೀರು ಬಿಟ್ಟಿರುವುದರಿಂದ ಒಂದು ಟಿಎಂಸಿ ನೀರು ಕಡಿಮೆ ಇದೆ. ನಾರಾಯಣಪುರದಲ್ಲಿಯೂ ಕೂಡ 492 ಮೀ. ನೀರು ಇದೆ. 105.46 ಟಿಎಂಸಿ ನೀರು ಲೈವ್ ಸ್ಟೋರೇಜೆ ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ 11 ಟಿಎಂಸಿ ನೀರಿನ ಸಂಗ್ರಹ ಕಡಿಮೆ ಇದೆ. ಕಳೆದ ವರ್ಷ ಒಳಹರಿವು ಹೆಚ್ಚಿತ್ತು.25450 ಕ್ಯೂಸೆಕ್ಸ್ ನೀರಿತ್ತು , ಆದರೆ ಈಗ 3730 ಕ್ಯೂಸೆಕ್ಸ್ ನೀರಿನ ಸಂಗ್ರಹ ಇದೆ ಎಂದರು.

ಬರಗಾಲ ಘೋಷಣೆ: ಸೆ.4 ರಂದು ತೀರ್ಮಾನ

ಒಟ್ಟಾರೆಯಾಗಿ ಈ ವರ್ಷ ಕೃಷ್ಣಾ ಮೇಲ್ದಂಡೆ ಪ್ರದೇಶದ ಅಚ್ಚುಕಟ್ಟಿನಲ್ಲಿ ಮಳೆ ಕಡಿಮೆಯಾಗಿದೆ. ಈ ವರ್ಷ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಮಳೆ ಕಡಿಮೆಯಾಗಿದೆ. ಶೇ. 56% ಕೊರತೆಯಾಗಿದೆ. ಆಗಸ್ಟ್ ನಲ್ಲಿಯೂ ಕೊರತೆ ಕಂಡು ಬಂದಿದ್ದು, ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ಈಗಾಗಲೇ ಮೂರು ಸಭೆಗಳನ್ನು ನಡೆಸಿದೆ. ಪುನ: ಸೆ.04 ರಂದು ಮತ್ತೊಂದು ಸಭೆ ನಡೆಯಲಿದೆ. 113 ತಾಲ್ಲೂಕುಗಳಲ್ಲಿ ಬರಗಾಲ ಇದೆ ಎಂದು ಜಂಟಿ ಸಮೀಕ್ಷೆ ನಡೆಸಿದ್ದಾರೆ. ಇದಲ್ಲದೆ 73 ತಾಲ್ಲೂಕುಗಳಲ್ಲಿ ಬರಗಾಲ ಉಂಟಾಗಿದೆ ಎಂದು ಹೇಳಿದ್ದಾರೆ. ಅದಕ್ಕೂ ಜಂಟಿ ಸಮೀಕ್ಷೆ ನಡೆಸಿ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗಿದೆ. ಸೆ.4 ರಂದು ಒಂದು ತೀರ್ಮಾನಕ್ಕೆ ಬರಲಾಗುವುದು ಎಂದರು.

ಎನ್ ಡಿ ಆರ್ ಎಫ್ ಮಾರ್ಗಸೂಚಿಗಳ ಪರಿಷ್ಕರಣೆಗೆ ಮನವಿ

ಬರ ಘೋಷಣೆಯ ನಂತರ ಕೇಂದ್ರಸರ್ಕಾರಕ್ಕೆ ಬರಪೀಡಿತ ತಾಲ್ಲೂಕುಗಳಿಗೆ ನೆರವು ಕೋರಿ ಮನವಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಸಮಿತಿಯು ಸಮೀಕ್ಷೆ ನಡೆಸಿದ ನಂತರ , ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಹಣ ಬಿಡುಗಡೆ ಮಾಡುತ್ತದೆ. ರಾಜ್ಯಸರ್ಕಾರ ಈ ಅನುದಾನದಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತದೆ . ಅದಲ್ಲದೇ ರಾಜ್ಯ ಸರ್ಕಾರವೂ ಪರಿಹಾರ ಕಾರ್ಯಗಳಿಗೆ ಹಣ ವಿನಿಯೋಗಿಸಲಿದೆ. 2020 ರಿಂದ ಇಲ್ಲಿಯವರೆಗೆ ಪರಿಷ್ಕರಣೆ ಆಗಿಲ್ಲ. ಎನ್ ಡಿ ಆರ್ ಎಫ್ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಹಾಗೂ ರಾಜ್ಯಗಳಿಗೆ ಹೆಚ್ಚು ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

ಅಖಂಡ ಕರ್ನಾಟಕ

ಕೃಷ್ಣಾ ಕಾವೇರಿ ಜೀವನದಿಗಳು. ಕಾವೇರಿ, ಕೃಷ್ಣಾ ನದಿ ಪಾತ್ರದಲ್ಲಿರುವವರೆಲ್ಲರೂ ನಮ್ಮ ರೈತರೇ. ತಾರತಮ್ಮ ಮಾಡುವ ಪ್ರಶ್ನೆಯೇ ಇಲ್ಲ.ಅಖಂಡ ಕರ್ನಾಟಕದಲ್ಲಿ ದಕ್ಷಿಣ, ಉತ್ತರ ಎಂಬ ಪ್ರಶ್ನೇ ಇಲ್ಲ ಎಂದರು.

ದೆಹಲಿಗೆ ಶೀಘ್ರ ಸರ್ವ ಪಕ್ಷ ನಿಯೋಗ

ಕಾವೇರಿ ನೀರಿಗೆ ಸಂಬಂಧಿಸಿದಂತೆ ಸರ್ವ ಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಸಂಪನ್ಮೂಲ ಸಚಿವರ ಸಮಯವನ್ನು ಕೋರಿದ್ದೇವೆ. ಈಗಾಗಲೇ ನಮ್ಮ ಜಲಸಂಪನ್ಮೂಲ ಸಚಿವರು ನಮ್ಮ ರಾಜ್ಯದ ಪರವಾಗಿ ವಾದ ಮಂಡಿಸುವ ವಕೀಲರನ್ನು ಭೇಟಿ ಮಾಡಿ ಅವರಿಗೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಬುಧವಾರ ಪ್ರಕರಣ ವಿಚಾರಣೆಗೆ ಬರಲಿದ್ದು ನಮ್ಮ ವಾದ ಏನಿರಬೇಕು ಎಂದು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಧಿಸೂಚನೆಗೆ ಆಗ್ರಹ

ಕೇಂದ್ರ ಸಚಿವರು ಭೇಟಿಗೆ ಅವಕಾಶ ನೀಡಿದ್ದಲ್ಲಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು. ಮಹಾದಾಯಿ ಯೋಜನೆಗೆ ಅಧಿಸೂಚನೆ ಹೊರಡಿಸಲಾಗಿದ್ದರೂ, ಅರಣ್ಯ ಹಾಗೂ ಪರಿಸರ ತೀರುವಳಿ ದೊರೆತಿರುವುದಿಲ್ಲ.ಈ ಯೋಜನೆಗೆ ತೀರುವಳಿ ಹಾಗೂ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು. ಇಂದು ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಿಲ್ಲದ ಕಾರಣ ಹಾಗೂ ಕುಡಿಯುವ ನೀರಿನ ಕೊರತೆಯಿಂದಾಗಿ ಸಂಕಷ್ಟದ ಸಮಯವನ್ನು ಎದುರಿಸುವಂತಾಗಿದೆ. ಜಲನೀತಿಯ ಪ್ರಕಾರ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಾಗುತ್ತದೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯ 3 ನೇ ಹಂತ ಪೂರ್ಣಗೊಳ್ಳಲು 1 ಲಕ್ಷ ಕೋಟಿ ರೂ. ಅಗತ್ಯ

ಕೃಷ್ಣಾ ಮೇಲ್ದಂಡೆ ಯೋಜನೆಯ 3 ನೇ ಹಂತ ಪೂರ್ಣಗೊಳ್ಳಲು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯಗಳು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲು ಸುಮಾರು 1 ಲಕ್ಷ ಕೋಟಿ ರೂ.ಗಳ ಅಗತ್ಯವಿದೆ. 2023 ರ ಅಂದಾಜಿನ ಪ್ರಕಾರ 83700 ಕೋಟಿ ರೂ. ಇದ್ದು, ಯೋಜನೆ ಪೂರ್ಣಗೊಳ್ಳುವವರೆಗೆ 1 ಲಕ್ಷ ಕೋಟಿ ವೆಚ್ಚವಾಗುವ ಸಾಧ್ಯತೆ ಇದೆ. ರಾಜ್ಯಸರ್ಕಾರ ಯೋಜನೆಯ ಕಾಮಗಾರಿ ಕೈಗೆತ್ತಿಕೊಳ್ಳಲು ಸಿದ್ಧವಿದ್ದು, ಕೇಂದ್ರಸರ್ಕಾರ ತ್ವರಿತಗತಿಯಲ್ಲಿ ಅಧಿಸೂಚನೆ ಹೊರಡಿಸಬೇಕಾಗಿದೆ. ಆದಾಗ್ಯೂ ಯೋಜನೆಯ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯಗಳು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚಿನ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇಸ್ರೋ ವಿಜ್ಞಾನಿಗಳಿಗೆ ಸನ್ಮಾನ
ಇಸ್ರೋ ಸಂಸ್ಥೆಯು ಆದಿತ್ಯ -ಎಲ್1 ಉಪಗ್ರಹವನ್ನು ಯಶಸ್ಸಿಯಾಗಿ ಉಡಾವಣೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಸ್ರೋ ವಿಜ್ಞಾನಿಗಳಿಗೆ ಶುಭ ಕೋರಲಾಗಿದೆ. ಚಂದ್ರಯಾನ -3 ರ ಯಶಸ್ಸಿಗೆ ದ್ಯೋತಕವಾಗಿ ಇಸ್ರೋ ವಿಜ್ಞಾನಿಗಳಿಗೆ ಸರ್ಕಾರದ ವತಿಯಿಂದ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗುವುದು ಎಂದರು.

ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ .ಎಂ.ಬಿ ಪಾಟೀಲ್ , ಸಚಿವರಾದ ಕೃಷ್ಣಬೈರೇಗೌಡ, ಶಾಸಕರಾದ ಎಚ್.ವೈ. ಮೇಟಿ, ಯಶವಂತ ರಾಯಗೌಡ ಪಾಟೀಲ, ಅಶೋಕ ಮನಗೂಳಿ, ವಿಠಲ ಕಟಕದೋಂಡ, ಸಂಸದ ರಮೇಶ್ ಜಿಗಜಿಣಗಿ, ಪಿ.ಸಿ ಗದ್ದಿಗೌಡ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.