ಶುಲ್ಕ ನಿಗದಿ ಸಮಿತಿ ವ್ಯಾಪ್ತಿಗೆ ಬರಲ್ಲ: ಸ್ಪಷ್ಟನೆ
Team Udayavani, Jul 25, 2018, 6:00 AM IST
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪೂರ್ಣ ಪ್ರಮಾಣ ಸರ್ಕಾರಿ ಕೋಟಾದ ಸೀಟು ಪಡೆದ ವಿದ್ಯಾರ್ಥಿಗಳಿಂದ ಕಾಲೇಜುಗಳು ಸಂಗ್ರಹಿಸುವ ಹೆಚ್ಚುವರಿ ಶುಲ್ಕ ನಿಯಂತ್ರಣವು “ಶುಲ್ಕ ನಿಗದಿ ಸಮಿತಿ’ಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸಮಿತಿ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ.
ಸರ್ಕಾರ ಮತ್ತು ಸಮಿತಿಯ ನಡುವಿನ ಒಪ್ಪಂದ ಪ್ರಕಾರ, ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೌನ್ಸೆಲಿಂಗ್ ಮೂಲಕ ಖಾಸಗಿ ಕಾಲೇಜಿನಲ್ಲಿ ಸೀಟು ಪಡೆದ ವಿದ್ಯಾರ್ಥಿಗಳ ಶುಲ್ಕ ನಿಗದಿ ಮಾತ್ರ ಸಮಿತಿಗೆ ಸಂಬಂಧಿಸಿದ್ದಾಗಿದೆ. ಅದರಂತೆ, ಪ್ರಸಕ್ತ ಸಾಲಿನಲ್ಲಿ ಖಾಸಗಿ ಕಾಲೇಜುಗಳ ವೈದ್ಯಕೀಯ ಸೀಟುಗಳಿಗೆ ಶೇ.8ರಷ್ಟು ಶುಲ್ಕ ಹೆಚ್ಚಿಸಲಾಗಿದೆ. ಇದಕ್ಕೆ ಆಡಳಿತ ಮಂಡಳಿಯವರೂ ಒಪ್ಪಿಗೆ ಸೂಚಿಸಿದ್ದಾರೆ. ಪೂರ್ಣ ಪ್ರಮಾಣದ ಸರ್ಕಾರಿ ಕೋಟಾದ ಸೀಟು ಪಡೆದ ವಿದ್ಯಾರ್ಥಿಗಳ ಶುಲ್ಕ ನಿಗದಿ ಸಮಿತಿಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸಮಿತಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು… ಸುನಿಲ್ ಆರೋಪ
ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ
Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ
Arjun Tendulkar: 5 ವಿಕೆಟ್ ಕೆಡವಿದ ಅರ್ಜುನ್ ತೆಂಡುಲ್ಕರ್ ಐಪಿಎಲ್ ಆಯ್ಕೆಗೆ ಸಜ್ಜು
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.