ರಾಜ್ಯಕ್ಕೆ ನೆರವಿನ ಭರವಸೆ; ಮುಖ್ಯಮಂತ್ರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ
Team Udayavani, Oct 17, 2020, 6:39 AM IST
ಬೆಂಗಳೂರು/ಹೊಸದಿಲ್ಲಿ: ಭಾರೀ ಮಳೆಯಿಂದ ಸಂಕಷ್ಟಕ್ಕೀಡಾಗಿರುವ ಕರ್ನಾಟಕದ ಜನತೆಗೆ ಪ್ರಧಾನಿ ಮೋದಿ ನೆರವಿನ ಭರವಸೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ, ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಬಗ್ಗೆ ಸಿಎಂ ಬಿಎಸ್‌ವೈ ಜತೆಗೆ ಮಾತನಾಡಿ, ಹಾನಿಯ ವಿವರ ಪಡೆದಿದ್ದೇನೆ. ಸಂತ್ರಸ್ತರಾಗಿರುವ ನಮ್ಮ ಸಹೋದರ ಮತ್ತು ಸಹೋದರಿಯರ ಜತೆ ನಾವಿದ್ದೇವೆ ಎಂಬ ಭರವಸೆ ನೀಡುತ್ತಿದ್ದೇನೆ. ಕೇಂದ್ರದ ವತಿಯಿಂದ ನಡೆಯುತ್ತಿರುವ ರಕ್ಷಣ ಕಾರ್ಯ ಸಹಿತ ಕೇಂದ್ರದಿಂದ ಸಿಗುವ ಎಲ್ಲ ಸಹಾಯದ ಬಗ್ಗೆ ಅಭಯ ನೀಡುತ್ತಿದ್ದೇನೆ ಎಂದಿದ್ದಾರೆ.
ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಿನ ಸಿಎಂ ಉದ್ಧವ್ ಠಾಕ್ರೆ ಅವರ ಜತೆಗೂ ಪ್ರಧಾನಿ ದೂರವಾಣಿ ಸಂಭಾಷಣೆ ನಡೆಸಿದರು. ಸದ್ಯ ಮಹಾರಾಷ್ಟ್ರದಲ್ಲಿ ಮಳೆಯಿಂದಾಗಿಯೇ ಉತ್ತರ ಕರ್ನಾಟಕದ ಬಹುಭಾಗಗಳಲ್ಲಿ ಪ್ರವಾಹ ಉಂಟಾಗಿದೆ.
ಕೇಂದ್ರದಿಂದ ಸಹಾಯದ ಭರವಸೆ
ಅತ್ತ ಮೈಸೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಕೇಂದ್ರ ಸರಕಾರವು ನಮ್ಮ ಮನವಿಗೆ ಸ್ಪಂದಿಸಿ ನೆರೆ ಪರಿಹಾರ ನೀಡಲು ಒಪ್ಪಿಕೊಂಡಿದೆ. ರಾಜ್ಯಕ್ಕೆ ಹೆಚ್ಚಿನ ಪರಿಹಾರ ನೀಡುವ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ಅಗತ್ಯ ನೆರವು ನೀಡಲು ಒಪ್ಪಿಕೊಂಡಿದ್ದಾರೆ. ತತ್‌ಕ್ಷಣವೇ ಕೇಂದ್ರ ಅನುದಾನ ಬಿಡುಗಡೆ ಮಾಡಲಿದೆ. ರಾಜ್ಯ ಸರಕಾರದಲ್ಲಿ ಹಣದ ಕೊರತೆ ಇಲ್ಲ. ಎಲ್ಲ ಡಿಸಿಗಳ ಖಾತೆಗೆ ಅನುದಾನ ಬಿಡುಗಡೆ ಮಾಡಿದ್ದೇವೆ ಎಂದರು. ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಮನೆ ಕಳೆದುಕೊಂಡ ವರಿಗೆ ತತ್‌ಕ್ಷಣ 10 ಸಾ.ರೂ. ನೀಡುತ್ತೇವೆ ಮತ್ತು ಐದು ಲಕ್ಷ ರೂ.ಗಳನ್ನು ಮನೆ ನಿರ್ಮಾಣಕ್ಕೆ ಬಿಡುಗಡೆ ಮಾಡುತ್ತೇವೆ ಎಂದರು.
85.49 ಕೋ.ರೂ. ಬಿಡುಗಡೆ
ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ತುರ್ತು ಪರಿಹಾರಕ್ಕಾಗಿ 85.49 ಕೋ.ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಡಿಸಿಗಳು ಮತ್ತು ಜಿಪಂ ಸಿಇಒಗಳೊಂದಿಗೆ ಶುಕ್ರವಾರ ಸಿಎಂ ವೀಡಿಯೋ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಪ್ರವಾಹಪೀಡಿತ ಜಿಲ್ಲೆಗಳಲ್ಲಿ ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸನ್ನದ್ಧರಾಗುವಂತೆ ಸಿಎಂ ಸೂಚಿಸಿದ್ದಾರೆ.
ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಂಡು, ಸಂತ್ರಸ್ತರಿಗೆ ಉತ್ತಮ ಆಹಾರ ಪೂರೈಕೆಯಾಗಬೇಕು, ಕೋವಿಡ್ ಪರಿಸ್ಥಿತಿಯಲ್ಲಿ ಕಾಳಜಿ ಕೇಂದ್ರಗಳಲ್ಲಿ ಎಸ್‌ಒಪಿ ಪಾಲನೆ ಮಾಡಿ ಎಂದರು.
ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ ಮತ್ತು ಬಳ್ಳಾರಿ ಜಿಲ್ಲೆಗಳಿಂದ 14 ದೋಣಿಗಳನ್ನು ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ನೆರೆ ಸಂತ್ರಸ್ತರ ರಕ್ಷಣೆಗಾಗಿ ರಕ್ಷಣ ಹೆಲಿಕಾಪ್ಟರ್‌ಗಳನ್ನು ಕಳುಹಿಸಲಾಗಿದೆ ಎಂದ ಸಿಎಂ, ಸಂಘ ಸಂಸ್ಥೆಗಳು, ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಿ. ಜನರ ನೋವಿಗೆ ತತ್‌ಕ್ಷಣ ಸ್ಪಂದಿಸಿ ಎಂದು ಅಧಿಕಾರಿಗಳಿಗೆ ಕರೆ ನೀಡಿದರು. ಪ್ರವಾಹದಿಂದ ಬೆಳೆ ಹಾನಿಯಾದ 51,810 ಸಂತ್ರಸ್ತ ರೈತರ ಬ್ಯಾಂಕ್ ಖಾತೆಗೆ 36.57 ಕೋ.ರೂ.ಗಳ ಇನ್ಪುಟ್ ಸಬ್ಸಿಡಿಯನ್ನು ನೇರವಾಗಿ ಆನ್‌ಲೈನ್ ಮೂಲಕ ಜಮೆ ಮಾಡಿದರು.
ಜಿಲ್ಲಾಧಿಕಾರಿಗಳ ಖಾತೆಗೆ ಹಣ
ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳ ಖಾತೆಗೆ ಹಣಕಾಸು ಇಲಾಖೆಯಿಂದ ತಲಾ ಐದು ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ತೀವ್ರ ಹಾನಿಯಾಗಿರುವ ಕಲಬುರಗಿ ಜಿಲ್ಲೆಗೆ 20 ಕೋಟಿ ರೂ., ಯಾದಗಿರಿ ಜಿಲ್ಲೆಗೆ 15 ಕೋಟಿ ರೂ. ಬಿಡುಗಡೆ ಮಾಡಿದ್ದು, ಉಡುಪಿ, ದಕ್ಷಿಣ ಕನ್ನಡ ಸಹಿತ ಉಳಿದ ಜಿಲ್ಲೆಗಳಿಗೆ ತಲಾ ಐದು
ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ.
ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಿಂದೆಂದೂ ಕಂಡರಿಯದ ಮಳೆಯಿಂದಾಗಿರುವ ಅತಿವೃಷ್ಟಿ ಹಾನಿಯನ್ನು ರಾಷ್ಟ್ರೀಯ ವಿಪತ್ತು ಎಂಬುದಾಗಿ ಘೋಷಿಸುವಂತೆ ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಶುಕ್ರವಾರ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹದಿಂದ ಆಗಿರುವ ಹಾನಿಯನ್ನು ಅವರು ವೀಕ್ಷಿಸಿದರು. ಈ ಭಾಗದಲ್ಲಿ ಹಿಂದೆಂದೂ ಆಗದಿರುವಷ್ಟು ವ್ಯಾಪಕ ಮಳೆಯಾಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.