Karnataka govt ಆ. 1ರಿಂದ 7ನೇ ವೇತನ ಆಯೋಗ ಶಿಫಾರಸು ಜಾರಿ

ಸರಕಾರಿ ನೌಕರರಿಗೆ ಸಿಹಿಸುದ್ದಿ; ಶೇ. 27.5ರಷ್ಟು ವೇತನ ಪರಿಷ್ಕರಣೆ

Team Udayavani, Jul 16, 2024, 7:05 AM IST

Karnataka govt ಆ. 1ರಿಂದ 7ನೇ ವೇತನ ಆಯೋಗ ಶಿಫಾರಸು ಜಾರಿ

ಬೆಂಗಳೂರು: ರಾಜ್ಯ ಸರಕಾರಿ ನೌಕರರು ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಏಳನೇ ರಾಜ್ಯ ವೇತನ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಮಹತ್ವದ ನಿರ್ಧಾರಕ್ಕೆ ಕೊನೆಗೂ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೋಮವಾರ ರಾತ್ರಿ ಈ ನಿರ್ಣಯಕ್ಕೆ ಅಂಗೀಕಾರ ನೀಡಲಾಗಿದ್ದು, ಆ.1ರಿಂದ ಅನ್ವಯವಾಗುವಂತೆ ವೇತನ ಆಯೋಗದ ಶಿಫಾರಸು ಜಾರಿಗೊಳ್ಳಲಿದೆ. ಶೇ. 27.5ರಷ್ಟು ವೇತನ ಪರಿಷ್ಕರಣೆಗೆ ಆಯೋಗ ಸೂಚಿಸಿತ್ತು. ಅದನ್ನು ಸಚಿವ ಸಂಪುಟ ಒಪ್ಪಿಕೊಂಡಿದೆ.

ವೇತನ ಆಯೋಗದ ಶಿಫಾರಸು ಜಾರಿ ವಿಚಾರದಲ್ಲಿ ಸರಕಾರ ಹಾಗೂ ರಾಜ್ಯ ಸರಕಾರಿ ನೌಕರರ ಸಂಘದ ನಡುವೆ ಹಗ್ಗಜಗ್ಗಾಟ ನಡೆದಿತ್ತು. ಈ ಮಧ್ಯೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವಿಷಯ ಬದಿಗೆ ಸರಿದಿತ್ತು. ಚುನಾವಣೆ ಬಳಿಕ ಸರಕಾರಿ ನೌಕರರು ಒತ್ತಡ ಹೆಚ್ಚಿಸಿದ್ದರು. ತೀವ್ರ ಹೋರಾಟದ ಎಚ್ಚರಿಕೆಯನ್ನೂ ನೀಡಿದ್ದರು.

ಸಂಪುಟ ಸಭೆಯ ಬಳಿಕವೂ ಸಭೆ
ಸಂಪುಟ ಸಭೆಯ ಬಳಿಕವೂ ಸಿಎಂ ಸಿದ್ದರಾಮಯ್ಯ ಸಚಿವರ ಜತೆಗೆ ಸುದೀರ್ಘ‌ ಸಭೆ ನಡೆಸಿದ್ದಾರೆ. ರಾತ್ರಿ 9.30ರ ಸುಮಾರಿಗೆ ಸಂಪುಟ ಸಭೆಯಿಂದ ಹೊರಬಂದ ಬಳಿಕ ಸಿದ್ದರಾಮಯ್ಯ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮಿತಿ ಕೊಠಡಿಯಲ್ಲಿ ಪ್ರಮುಖ ಸಚಿವರ ಜತೆಗೆ ಅಧಿವೇಶನದಲ್ಲಿ ವಿಪಕ್ಷದವರನ್ನು ಕಟ್ಟಿ ಹಾಕುವ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದರು.

ಸಭೆಯ ಪ್ರಮುಖ ತೀರ್ಮಾನಗಳು
-ರಾಜ್ಯದ ಸರಕಾರದ ಮುಖ್ಯ ಕಾರ್ಯದರ್ಶಿ ನೇಮಕ ಅಧಿಕಾರ ಮುಖ್ಯಮಂತ್ರಿಗಳಿಗೆ.
-ಕರ್ನಾಟಕ (ತಿದ್ದುಪಡಿ) ಉಪಖನಿಜ ನಿಯಮಗಳು, ಅನುಮೋದನೆ ನೀಡುವ ಮಸೂದೆ ಮಂಡನೆ.
-ಕಲ್ಲು ಗಣಿ ಗುತ್ತಿಗೆ ಪ್ರದೇಶಗಳಲ್ಲಿ ಹೆಚ್ಚುವರಿಯಾಗಿ ಖನಿಜವನ್ನು ತೆಗೆದು ರಾಜಧನವನ್ನು ಪಾವತಿಸದೆ ಸಾಗಾಣಿಕೆ ಮಾಡಿರುವುದಕ್ಕೆ ದಂಡ ವಿಧಿಸುವುದು.
-ಗುತ್ತಿಗೆ ಪ್ರದೇಶವನ್ನು ಒತ್ತುವರಿ ಸಂಬಂಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ವಿಧಿಸಿರುವ (ಒಂದು ಬಾರಿಗೆ) ಮೂಲಕ ಅನುಷ್ಠಾನಗೊಳಿಸುವ ಕುರಿತು ರಚಿಸ ಲಾಗಿದ್ದ ಸಂಪುಟ ಉಪಸಮಿತಿ ಮಾಡಿರುವ ಶಿಫಾರಸು.
-ಕರ್ನಾಟಕ ಲೋಕಾಯುಕ್ತ ಸಂಸ್ಥೆಯ 2022-23ನೇ ಸಾಲಿನ 37ನೇ ಸಂಚಿತ ವಾರ್ಷಿಕ ವರದಿ ಬಗ್ಗೆ ಚರ್ಚೆ.
-ಕರ್ನಾಟಕ ಸರಕು ಮತ್ತು ಸೇವೆಗಳು (ತಿದ್ದುಪಡಿ) ಮಸೂದೆಗೆ ಅನುಮೋದನೆ ನೀಡುವುದು.
-ರಾಜ್ಯದ 10 ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್‌ ಮ್ಯಾಮೊಗ್ರಾಫಿ ಯಂತ್ರಗಳ ಅಳವಡಿಕೆ.
-ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್‌, ಜೆಇಇ, ಸಿಇಟಿ ತರಬೇತಿಯನ್ನು 12.50 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
-ಕರ್ನಾಟಕ ನೀರಾವರಿ (ತಿದ್ದುಪಡಿ) ಮಸೂದೆ, 2024ಕ್ಕೆ ಅನುಮೋದನೆ ನೀಡುವುದು.

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.