Karnataka ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ
Team Udayavani, Jun 15, 2023, 8:23 PM IST
ಬೆಂಗಳೂರು: ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಎಲ್ಲ ಶಾಲಾ-ಕಾಲೇಜುಗಳು ಸಂವಿಧಾನದ ಪೀಠಿಕೆಯನ್ನು ಪ್ರತಿದಿನ ಓದುವುದನ್ನು ಕಡ್ಡಾಯಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಸರಕಾರ ನಿರ್ಧರಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪೀಠಿಕೆಯ ಭಾವಚಿತ್ರವನ್ನು ಹಾಕುವುದನ್ನು ಕಡ್ಡಾಯಗೊಳಿಸಿದೆ.
ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಎಂದು ಸಚಿವ ಹೆಚ್.ಸಿ. ಮಹದೇವಪ್ಪ”ಸ್ವಾತಂತ್ರ್ಯ ಹೋರಾಟ, ಸಂವಿಧಾನದ ಹಿಂದಿನ ಕಲ್ಪನೆಯನ್ನು ಗಮನದಲ್ಲಿಟ್ಟುಕೊಂಡು, ಜನರು, ವಿಶೇಷವಾಗಿ ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಯುವಕರು, ಸರ್ಕಾರಿ, ಅನುದಾನಿತ ಅಥವಾ ಖಾಸಗಿಯಾಗಿರಲಿ ಸಂವಿಧಾನದ ಪೀಠಿಕೆಯನ್ನು ಕಡ್ಡಾಯವಾಗಿ ಓದಬೇಕು” ಎಂದು ಹೇಳಿದ್ದಾರೆ.
ಯುವಜನರನ್ನು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ಮತ್ತು ಎಲ್ಲಾ ಸಮುದಾಯಗಳಲ್ಲಿ ಸಹೋದರತ್ವವನ್ನು ಉತ್ತೇಜಿಸಲು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.