ಸಿದ್ದು ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಿಕ್ಕಿದ್ದೆಷ್ಟು?
Team Udayavani, Mar 15, 2017, 6:12 PM IST
ಬೆಂಗಳೂರು : ವಿಧಾನಸಭೆಯಲ್ಲಿಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಹಜ್‌ಗಾಗಿ ಕೆಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಎಲ್ಲ ಕಚೇರಿಗಳನ್ನು ಹಾಗೂ ಒಂದು ಸಭಾಂಗಣವನ್ನು ಒಳಗೊಂಡ ಮೌಲಾನಾ ಅಬುಲ್ ಕಲಂ ಆಜಾದ್ ಭವನ, ಉರ್ದು ಕನ್‌ವೆನ್‌ಶನ್ ಹಾಲ್, ಮತ್ತು ಸಾಂಸ್ಕೃತಿಕ ಕೇಂದ್ರ ನಿರ್ಮಾಣಕ್ಕಾಗಿ 20 ಕೋಟಿ ರೂ. ಅನುದಾನವನ್ನು ಬಜೆಟ್‌ನಲ್ಲಿ ಒದಗಿಸಲಾಗಿದೆ.
ವಕ್ಫ್ ಸಂಸ್ಥೆಗಳ ನಿರ್ವಹಣೆ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲು ಬೆಂಗಳೂರಿನಲ್ಲಿ ತರಬೆತಿ ಕೇಂದ್ರ ಆರಂಭಿಸಲು ನಿರ್ಧರಿಸಲಾಗಿದೆ.
ಶಾಲೆಗಳಿಂದ ಹೊರಗುಳಿವ ಅಲ್ಪಸಂಖ್ಯಾತರ ಮಕ್ಕಳನ್ನು ಮರಳಿ ಶಾಲೆಗೆ ತರಲು ಮುಂದಿನ ಎರಡು ವರ್ಷಗಳಲ್ಲಿ ಈಗಾಗಲೇ ಮುಚ್ಚಿ ಹೋಗಿರುವ ಸರಕಾರಿ ಉರ್ದು ಶಾಲೆಗಳ ಜಾಗದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ.
ಬೆಂಗಳೂರು ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿ ದುಡಿಯುವ ಅಲ್ಪಸಂಖ್ಯಾಕ ಮಹಿಳೆಯರಿಗಾಗಿ ತಲಾ 2 ಕೋಟಿ ರೂ. ವೆಚ್ಚದಲ್ಲಿ 10 ಉದ್ಯೋಗಸ್ಥ ಮಹಿಳಾ ವಸತಿ ನಿಲಯ ಪ್ರಾರಂಭಿಸಲಾಗುವುದು.
ಶಾದಿ ಮಹಲ್ ಯೋಜನೆಯಡಿ ಜಿಲ್ಲಾ ಕೇಂದ್ರದಲ್ಲಿ 2 ಕೋಟಿ ರೂ. ಮತ್ತು ಇತರ ಪ್ರದೇಶಗಳಲ್ಲಿ 1 ಕೋಟಿ ರೂ.ಗಳ ಅನುದಾನದಲ್ಲಿ ಇಲಾಖಾ ವತಿಯಿಂದಲೇ ಶಾದಿಮಹಲ್/ಸಮುದಾಯ ಭವನ ಕಟ್ಟಡ ನಿರ್ಮಿಸಿ ವಕ್ಫ್ ಮತ್ತು ಅರೆ ಸರಕಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲಾಗುವುದು.
ಐಐಎಂ, ಐಐಟಿ, ಐಐಎಸ್‌ಸಿ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವರ್ಗಗಳ ಸಮುದಾಯದ ವಿದ್ಯಾರ್ಥಿಗಲಿಗೆ ಒಂದು ಬಾರಿ ತಲಾ ಎರಡು ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು.
ಪೇಷ್ ಇಮಾಮ್ ಅವರ ಗೌರವಧನವನ್ನು 4,000 ರೂ.ಗಳಿಗೆ ಮತ್ತು ಮೌಜನ್ ಅವರ ಗೌರವಧನವನ್ನು 3,000 ರೂ.ಗೆ ಏರಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಹಸು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.