ಆರೋಗ್ಯಕರ ಸ್ಪರ್ಧೆ: ಕೇಂದ್ರದ ವಿಮೆ ಬೆನ್ನಲ್ಲೇ ರಾಜ್ಯ ಸರ್ಕಾರ ಚುರುಕು
Team Udayavani, Feb 3, 2018, 8:13 AM IST
ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ ಹತ್ತು ಕೋಟಿ ಬಡ ಕುಟುಂಬಗಳಿಗೆ ಐದು ಲಕ್ಷ ರೂ. “ಆರೋಗ್ಯ ವಿಮೆ’ ಜಾರಿ ಬೆನ್ನಲ್ಲೇ ರಾಜ್ಯ ಸರ್ಕಾರ ಸಹ ಉದ್ದೇಶಿತ “ಯುನಿವರ್ಸಲ್ ಹೆಲ್ತ್ ಕಾರ್ಡ್’ ಯೋಜನೆ ತ್ವರಿತವಾಗಿ ಅನುಷ್ಠಾನಗೊಳಿಸಲು ತೀರ್ಮಾನಿಸಿದೆ.
ಈ ಮೂಲಕ ಕೇಂದ್ರ ಸರ್ಕಾರದ ಯೋಜನೆಗೆ ರಾಜ್ಯ ಸರ್ಕಾರ ಆರೋಗ್ಯಕರ ಸ್ಪರ್ಧೆಗೆ ಇಳಿದಿದೆ.
ಸಾಮಾನ್ಯ ವ್ಯಕ್ತಿಯಿಂದ ಹಿಡಿದು ಮುಖ್ಯಮಂತ್ರಿಯವರಿಗೆ ಏಕರೂಪದ ಆರೋಗ್ಯ ಸೇವೆ ಒದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ರಾಜ್ಯದ 1 ಕೋಟಿ 43 ಲಕ್ಷ ಕುಟುಂಬಗಳು ಒಳಪಡಲಿವೆ. “ಯುನಿವರ್ಸಲ್ ಹೆಲ್ತ್‌ಕಾರ್ಡ್’
ಯೋಜನೆ ಈ ಮಾಸಾಂತ್ಯಕ್ಕೆಲ್ಲ ಜಾರಿಗೆ ಬರಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್‌ಕುಮಾರ್ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆರೋಗ್ಯ ರಕ್ಷಣೆ ಕುರಿತಂತೆ ಇದುವರೆಗೂ ಇದ್ದ 11 ಯೋಜನೆಗಳನ್ನು ತೆಗೆದು ಹಾಕಿ ಏಕರೂಪದ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಯುನಿವರ್ಸಲ್ ಹೆಲ್ತ್ ಕಾರ್ಡ್ ಯೋಜನೆಗೆ 1,300
ಕೋಟಿ ರೂ. ವೆಚ್ಚವಾಗಲಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಯೋಜನೆ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ನಗರಾಭಿವೃದ್ಧಿ, ಪೌರಾಡಳಿತ ಮತ್ತು ಬಿಬಿಎಂಪಿ ಸಹಯೋಗದೊಂದಿಗೆ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ ಎಂದರು. ಸಾರ್ವಜನಿಕರು ಆಧಾರ ಸಂಖ್ಯೆ ನೀಡಿ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಯುನಿವರ್ಸಲ್ ಹೆಲ್ತ್ ಕಾರ್ಡ್ ಪಡೆಯಬಹುದು, ಹೆಲ್ತ್ ಕಾರ್ಡ್ ಪಡೆ ಯಲು ಯಾವುದೇ ರೀತಿಯ ಶುಲ್ಕ ಪಾವತಿಸುವಂತಿಲ್ಲ ಎಂದು ಹೇಳಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶೇ.100 ಸೇವೆಯನ್ನು ಸರ್ಕಾರವೇ ನೀಡುತ್ತಿದೆ. ದ್ವಿತೀಯ ಹಂತದಲ್ಲಿ ಶೇ.30ರಷ್ಟು ಖಾಸಗಿ ವಲಯವನ್ನು ಅವಲಂಬಿಸಿದ್ದು, ಗಂಭೀರ ಕಾಯಿಲೆಗಳಿಗೆ ಶೇ. 70 ರಷ್ಟು ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸುವ ಪರಿಸ್ಥಿತಿ ಇದೆ. ಅದನ್ನು ತಪ್ಪಿಸಲು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಯುನಿವರ್ಸಲ್ ಹೆಲ್ತ್ ಕಾರ್ಡ್ ಮೂಲಕ ಅಗತ್ಯ ಆರೋಗ್ಯ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾ ಗಿದೆ ಎಂದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಕೇಂದ್ರ ತೆರೆ ವ ಕಾರ್ಯ ಶೇ.60ರಷ್ಟು ಮುಗಿದಿದೆ. ಉಳಿದದ್ದು ಶೀಘ್ರವೇ ಪೂರ್ಣಗೊಳ್ಳಲಿದೆ ಎಂದರು. ತಾಲೂಕು ಆಸ್ಪತ್ರೆಗಳಲ್ಲಿ ಐಸಿಯು ಹಾಗೂ ಅಲ್ಟ್ರಾ ಸೌಂಡ್ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಮಾರ್ಚ್ 1 ರೊಳಗೆ ಎಲ್ಲ ಜಿಲ್ಲಾ ಸ್ಪತ್ರೆಗಳಲ್ಲಿಯೂ ಎಂಆರ್‌ಐ ಸಿಟಿ ಸ್ಕ್ಯಾನ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಹೇಳಿದರು.
ತಜ್ಞ ವೈದ್ಯರ ಕೊರತೆ: ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಇದೆ. ಸರ್ಕಾರ ಹೆಚ್ಚಿನ ಸಂಬಳ ನೀಡುತ್ತೇವೆ ಎಂದರೂ ತಜ್ಞ ವೈದ್ಯರು ಬರುತ್ತಿಲ್ಲ. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಕೋಟಾದಡಿ ಖಾಸಗಿ ಕಾಲೇಜುಗಳಲ್ಲಿ ಸೀಟು ಪಡೆದ ವಿದ್ಯಾರ್ಥಿಗಳಿಗೆ ಎರಡು ವರ್ಷ ಗ್ರಾಮೀಣ ಕಡ್ಡಾಯ ಸೇವೆ ಮಾಡುವ ಕುರಿತು ಕೋರ್ಟ್‌ಗೆ
ಪ್ರಮಾಣಪತ್ರ ಸಲ್ಲಿಸಲಾಗಿದೆ. ರಾಜ್ಯದಲ್ಲಿ 53 ವೈದ್ಯಕೀಯ ಕಾಲೇಜುಗಳಿವೆ. ಆದರೂ ವೈದ್ಯರ ಕೊರತೆ ಇದೆ ಎಂದಾದರೆ ಖಾಸಗಿ ಕಾಲೇಜುಗಳಿಗೆ ನೈತಿಕತೆ ಇಲ್ಲವೇ ಎಂದು ಪ್ರಶ್ನಿಸಿದರು. ಉಡುಪಿ ಹಾಗೂ ಕೋಲಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಖಾಸಗಿಯವರಿಗೆ ನೀಡದೇ, ಖಾಸಗಿಯವರ ಸಹಕಾರದಲ್ಲಿ ಸರ್ಕಾರವೇ ನಡೆಸುತ್ತಿದೆ ಎಂದು ಹೇಳಿದರು.
ಏನಿದು ಹೆಲ್ತ್‌ಕಾರ್ಡ್?
ಹೆಲ್ತ್‌ಕಾರ್ಡ್ ಎಲ್ಲ ಮಾದರಿಯ ರೋಗ ಗಳಿಗೂ ಚಿಕಿತ್ಸೆ ಪಡೆಯಲು ಅನ್ವಯವಾಗಲಿದೆ. ಪ್ರತಿಯೊಬ್ಬ ತಮ್ಮ ಆಧಾರ್ ಸಂಖ್ಯೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ ಸರ್ಕಾರಿ ಆಸ್ಪತ್ರೆಯಲ್ಲಿ ನೀಡಿದರೆ ಹೆಲ್ತ್ ಕಾರ್ಡ್ ಉಚಿತವಾಗಿ ನೀಡಲಾಗುತ್ತದೆ. ಈ ಕಾರ್ಡ್ ಬಳಕೆ ಮಾಡಲು ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅವಕಾಶವಿಲ್ಲ ಎಂದು ವೈದ್ಯರು ಬರೆದುಕೊಟ್ಟರೆ, ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ಸರ್ಕಾರವೇ ಚಿಕಿತ್ಸಾ ವೆಚ್ಚ ಭರಿಸುತ್ತದೆ. ಹೆಲ್ತ್ ಕಾರ್ಡ್ ಪಡೆಯಲು ಎಪಿಎಲ್ ಅಥವಾ ಬಿಪಿಎಲ್ ಕುಟುಂಬ ಎಂಬ ಷರತ್ತು ಇಲ್ಲ.
ಕೇಂದ್ರ ಸರ್ಕಾರ ಆರೋಗ್ಯ ಸೇವೆಗೆ 5 ಲಕ್ಷ ರೂ. ವಿಮೆಯೋಜನೆ ಘೋಷಣೆ ಮಾಡಿದೆ. ಆದರೆ, ಕೇವಲ 2 ಸಾವಿರ ಕೋಟಿ
ಮೀಸಲಿಟ್ಟಿದೆ. ಜನರಿಗೆ ಉಚಿತ ಆರೋಗ್ಯ , ಶಿಕ್ಷಣ ಕೊಡಿಸಲು ಆಗದಿದ್ದರೆ, ಅದೊಂದು ಜವಾಬ್ದಾರಿಯುತ ಸರ್ಕಾರವಾಗಲಾರದು
ರಮೇಶ್ ಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ
∙ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲರಿಗೂ ಸಿಗಲಿದೆ ಉಚಿತ ವೈದ್ಯಕೀಯ ಸೇವೆ
∙ ಅಲ್ಲಿ ಲಭ್ಯವಾಗದಿದ್ದರೆ ಖಾಸಗಿ ಆಸ್ಪತ್ರೆ ಗಳಲ್ಲೂ ಚಿಕಿತ್ಸೆ ಪಡೆಯುವ ಅವಕಾಶ
∙1.43 ಕೋಟಿ ಕುಟುಂಬಗಳಿಗೆ ಅನ್ವಯ
∙ಆಧಾರ್ ಕಾರ್ಡ್ ಕೊಟ್ಟರೆ ಮಾತ್ರ ಉಚಿತ ಹೆಲ್ತ್‌ಕಾರ್ಡ್ ಲಭ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.