Eshwara Khandre ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ
ನೀತಿ ಸಂಹಿತೆ ಕಾರಣ ರಾಜ್ಯ ಸರಕಾರ ಭಾಗಿಯಾಗಿರಲಿಲ್ಲ
Team Udayavani, May 27, 2024, 9:19 PM IST
ಬೆಂಗಳೂರು: ಹುಲಿ ಯೋಜನೆಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ 2023ರ ಎಪ್ರಿಲ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ಮೋದಿ ಅವರ ಆತಿಥ್ಯದ ಬಿಲ್ ಬಾಕಿ 80 ಲಕ್ಷ ರೂ.ಗಳನ್ನು ರಾಜ್ಯ ಸರಕಾರವೇ ಭರಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಪ್ರಧಾನಿ, ರಾಷ್ಟ್ರಪತಿ ಮೊದಲಾದ ಗಣ್ಯರು ಆಗಮಿಸಿದಾಗ ಆತಿಥ್ಯ ನೀಡುವುದು ರಾಜ್ಯ ಸರಕಾರದ ಸಂಪ್ರದಾಯ. ಆದರೆ ಕಳೆದ ವರ್ಷ ಎಪ್ರಿಲ್‌ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿತ್ತು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಾಜ್ಯ ಸರಕಾರ ಈ ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ಬಾಕಿಯಿರುವ ಮೈಸೂರಿನ ಹೊಟೇಲ್ ಬಿಲ್ ಬಾಕಿ ಅನ್ನು ರಾಜ್ಯ ಸರಕಾರವೇ ಪಾವತಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.