ಬಿಜೆಪಿ ಅಭಿವೃದ್ಧಿ ವಿರೋಧಿ, ಸ್ಟೀಲ್ ಬ್ರಿಡ್ಜ್ ರದ್ದು; ಅಧಿಕೃತ ಘೋಷಣೆ
Team Udayavani, Mar 2, 2017, 4:11 PM IST
ಬೆಂಗಳೂರು:ಬಹುಕೋಟಿ ವೆಚ್ಚದ ವಿವಾದಿತ ಸ್ಟೀಲ್ ಫ್ಲೈಓವರ್ ಯೋಜನೆಯನ್ನು ಕೈಬಿಡಲು ಮುಖ್ಯಮಂತ್ರಿ ಸಿದ್ದರಾಮಯ್ಯ(ಡೈರಿ ಎಫೆಕ್ಟ್;ಕೊನೆಗೂ ಸ್ಟೀಲ್ ಫ್ಲೈಓವರ್ ಗೆ ಎಳ್ಳುನೀರು?) ಅವರು ಒಪ್ಪಿಗೆ ಸೂಚಿಸಿರುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಅಧಿಕೃತವಾಗಿ ಘೋಷಿಸಿದ್ದಾರೆ.
ಕಾಂಗ್ರೆಸ್ ಎಂಎಲ್ ಸಿ ಗೋವಿಂದರಾಜು ಅವರ ನಿವಾಸದಲ್ಲಿ ದೊರಕಿದೆ ಎನ್ನಲಾದ ಡೈರಿಯಲ್ಲಿ ಸ್ಟೀಲ್ ಫ್ಲೈಓವರ್ ಸಂಬಂಧ ಸಿಎಂ ಕುಟುಂಬಕ್ಕೆ 65 ಕೋಟಿ ರೂಪಾಯಿ ಕಪ್ಪಕಾಣಿಕೆ ಸಂದಾಯವಾಗಿದೆ ಎಂಬ ವಿಷಯ ಬಹಿರಂಗವಾಗಿತ್ತು. ಇದರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಪ್ರತಿತಂತ್ರ ಹೂಡಿರುವ ಸಿಎಂ ಅವರು ಸ್ಟೀಲ್ ಫ್ಲೈ ಓವರ್ ಯೋಜನೆ ರದ್ದುಪಡಿಸುವ ನಿರ್ಧಾರವನ್ನು ಕೈಗೊಂಡಿದ್ದು, ಇನ್ನಷ್ಟೇ ಅಧಿಕೃತವಾಗಿ ಘೋಷಣೆಯಾಬೇಕಿದೆ ಎಂದು ಈ ಮೊದಲು ವರದಿಯಾಗಿತ್ತು.
ಮುಖ್ಯಮಂತ್ರಿ ಜೊತೆ ಚರ್ಚಿಸಿ ಈ ಯೋಜನೆಯನ್ನು ರದ್ದುಪಡಿಸಿದ್ದೇವೆ. ಅತ್ಯಂತ ನೋವಿನಿಂದ ಈ ವಿಚಾರ ಪ್ರಸ್ತಾಪಿಸುತ್ತಿದ್ದೇನೆ. ಯೋಜನೆಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆದಿಲ್ಲ ಎಂದು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ರಾಜ್ಯದ ಅಭಿವೃದ್ಧಿಗೆ ವಿರುದ್ಧವಾಗಿ ಪಟ್ಟಭದ್ರ ಹಿತಾಸಕ್ತಿಗಳು ಆರೋಪಿಸುತ್ತಿವೆ. ರಾಜ್ಯದ ಹಿತಕ್ಕೆ ವಿರುದ್ಧವಾಗಿ ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್ ನಡೆದುಕೊಳ್ಳುತ್ತಿರುವುದಾಗಿ ದೂರಿದರು. ರಾಜೀವ್ ಚಂದ್ರಶೇಖರ್ ಅವರು ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆ ಎಂದರು.
ಬಿಜೆಪಿ ಅಭಿವೃದ್ಧಿ ವಿರೋಧಿಯಾಗಿದೆ, ಕೆಲವು ಎನ್ ಜಿಒಗಳೂ ಕೂಡಾ ಬೆಂಗಳೂರು ಅಭಿವೃದ್ದಿ ಸಹಿಸುತ್ತಿಲ್ಲ. ಯೋಜನೆಗೆ ಈವರೆಗೆ ಆದ ವೆಚ್ಚದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ಶಾಸಕರ ವಿರೋಧ:
ಇಂದು ಬೆಳಗ್ಗೆ ವಿಧಾನಸೌಧದಲ್ಲಿ ಬೆಂಗಳೂರು ಶಾಸಕರ ಜೊತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಅವರು ಸಭೆ ನಡೆಸಿದ್ದರು. ಈ ಸಂದರ್ಭದಲ್ಲಿ ಬೆಂಗಳೂರು ಶಾಸಕರು ಸ್ಟೀಲ್ ಬ್ರಿಡ್ಜ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆಗ ಜಾರ್ಜ್ ಅವರು ಸಭೆಯಿಂದ ಎದ್ದು ಹೋಗಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಮೊಬೈಲ್ ನಲ್ಲಿ ಸಂಭಾಷಣೆ ನಡೆಸಿದ್ದರು. ಆ ವೇಳೆ, ಬೆಂಗಳೂರು ಶಾಸಕರಿಗೆ ಬೇಡ ಅಂದ್ರೆ, ನಮಗೂ ಬೇಡ, ಯೋಜನೆ ರದ್ದುಪಡಿಸುವ ಬಗ್ಗೆ ಸೂಚನೆ ನೀಡಿದ್ದರು.
ಜನರ ಹೋರಾಟಕ್ಕೆ ಜಯ:ಬಿಎಸ್ ವೈ
ಕೊನೆಗೂ ರಾಜ್ಯ ಸರ್ಕಾರ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಕೈಬಿಟ್ಟಿರುವುದು ರಾಜ್ಯದ ಜನರ ಹೋರಾಟಕ್ಕೆ ಸಂದ ಜಯವಾಗಿದೆ. ನಾನು ಈ ಹೋರಾಟ ಇಲ್ಲಿಗೆ ನಿಲ್ಲಿಸುವುದಿಲ್ಲ. ಇದು ಸಂಸದ ರಾಜೀವ್ ಚಂದ್ರಶೇಖರ್, ಜನರು ಹಾಗೂ ಮಾಧ್ಯಮಗಳಿಗೆ ಸಂದ ಜಯ, ನನಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.