Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

ಕೆಲವು ಸಚಿವರಿಗೆ ಈಗಾಗಲೇ ಸಂದೇಶ

Team Udayavani, Nov 27, 2024, 7:05 AM IST

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

ಬೆಂಗಳೂರು: ಉಪ ಸಮರದ ಗೆಲುವಿನ ಬೆನ್ನಲ್ಲೇ ಕಾಂಗ್ರೆಸ್‌ ಸರಕಾರದ ಸಚಿವ ಸಂಪುಟದ ಕೆಲವು ಸದಸ್ಯರಿಗೆ ಸ್ಥಾನ ಬಿಟ್ಟುಕೊಡುವ ಸಂಬಂಧ ಸಂದೇಶ ರವಾನೆಯಾಗಿದೆ. ಇದರೊಂದಿಗೆ ಸಂಪುಟ ವಿಸ್ತರಣೆ ಮತ್ತಷ್ಟು ಸನ್ನಿಹಿತವಾದಂತಾಗಿದೆ.

ಸ್ವತಃ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ಅವರೇ ಪರೋಕ್ಷವಾಗಿ ಈ ಸುಳಿವು ನೀಡಿದ್ದಾರೆ.

ಗ್ರಾಮ ಪಂಚಾಯತ್‌ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ರಾಜೀನಾಮೆ ಪಡೆಯುವುದೇ ದೊಡ್ಡ ಕಸರತ್ತಾಗಿತ್ತು. ಅಧಿಕಾರ ತ್ಯಾಗ ಮಾಡುವಾಗ ಅಂತಹ ಸ್ಥಿತಿ ಸೃಷ್ಟಿಯಾಗುತ್ತದೆ. ಈಗ ಅಧಿಕಾರಾವಧಿ ಎರಡೂವರೆ ವರ್ಷ ಎಂದು ನಿಗದಿಪಡಿಸಲಾಗಿದೆ. ಅದೇ ರೀತಿ ನಮ್ಮ ಕೆಲವು ಸಚಿವರಿಗೂ ಈಗಾಗಲೇ ಸಂದೇಶ ರವಾನಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸಂವಿಧಾನ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಾಂಧೀಜಿ ದೇಶಕ್ಕಾಗಿ ಪ್ರಾಣತ್ಯಾಗದ ಜತೆಗೆ ಅಧಿಕಾರವನ್ನೂ ತ್ಯಾಗ ಮಾಡಿದರು. ಅವರು ಈ ದೇಶದ ಪ್ರಧಾನಿ ಆಗಬಹುದಿತ್ತು.

ಅದೇ ರೀತಿ ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ದೇಶದ ಏಕತೆ ಮತ್ತು ಸಮಗ್ರತೆಗಾಗಿ ಪ್ರಾಣತ್ಯಾಗ ಮಾಡಿದರು. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಕೂಡ ಪ್ರಧಾನಿ ಆಗಬಹುದಿತ್ತು. ಅವರೂ ತ್ಯಾಗ ಮಾಡಿದರು. ಆದರೆ ಕೆಲವರಿಂದ ಪಂಚಾಯತ್‌ ಸದಸ್ಯತ್ವ ಅಥವಾ ಅಧ್ಯಕ್ಷಗಿರಿಗೆ ರಾಜೀನಾಮೆ ಕೊಡಿಸಬೇಕಾದರೆ ಬಹಳ ಸರ್ಕಸ್‌ ಮಾಡಬೇಕಾಗುತ್ತದೆ ಎಂದರು.

ನಮ್ಮ ಕೆಲವು ಸಚಿವರಿಗೂ ಈಗಾಗಲೇ ಸಂದೇಶ ರವಾನಿಸಲಾಗಿದೆ. ಆದರೆ ಈ ಕುರಿತು ಈಗ ವಿಸ್ತೃತ ಚರ್ಚೆ ಮಾಡಲು ನಾನು ಹೋಗುವುದಿಲ್ಲ ಎಂದು ಸೂಚ್ಯವಾಗಿ ತಿಳಿಸಿದರು.

ತತ್‌ಕ್ಷಣ ಬಿಡಲು ಹೇಳಿಲ್ಲ
ಅನಂತರ ಈ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟ ಪುನಾರಚನೆ ಬಗ್ಗೆ ನನಗೆ ಗೊತ್ತಿಲ್ಲ. ಗೊತ್ತಾದಾಗ ಮಾತನಾಡುತ್ತೇನೆ. ಈ ವಿಷಯವನ್ನು ಮುಖ್ಯಮಂತ್ರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಲ್ಲಿ ಕೇಳಿ. ಆದರೆ ತತ್‌ಕ್ಷಣ ಸಚಿವ ಸ್ಥಾನ ಬಿಡಲು ಹೇಳಿಲ್ಲ. ಇನ್ನೂ ಸಾಕಷ್ಟು ಸಮಯಾವಕಾಶ ಇದೆ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

ವಿಶ್ವ ಟೆಸ್ಟ್‌  ಚಾಂಪಿಯನ್‌ಶಿಪ್‌: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

World Test Championship: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

1-sun

Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-viju

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ವಿಶ್ವ ಟೆಸ್ಟ್‌  ಚಾಂಪಿಯನ್‌ಶಿಪ್‌: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

World Test Championship: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.