![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 17, 2023, 8:24 PM IST
ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಲು ಸಿಬಿಐಗೆ ರಾಜ್ಯ ಸರಕಾರ ನೀಡಿದ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಾದವನ್ನು ಪೂರ್ಣಗೊಳಿಸಿದ ನಂತರ ಕರ್ನಾಟಕ ಹೈಕೋರ್ಟ್ ಸೋಮವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ.
ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿತು. ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ 1988ರ ಸೆಕ್ಷನ್ 13(2) ಮತ್ತು 13(1)(ಇ) ಅಡಿಯಲ್ಲಿ ಆರೋಪ ಹೊರಿಸಲಾಗಿದ್ದು, ಮತ್ತೊಂದು ಅರ್ಜಿಯಲ್ಲಿ ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಶಿವಕುಮಾರ್ ಕೋರಿದ್ದಾರೆ.
ಆದಾಯ ತೆರಿಗೆ ಇಲಾಖೆಯು 2017 ರಲ್ಲಿ ಶಿವಕುಮಾರ್ ಅವರ ಕಚೇರಿಗಳು ಮತ್ತು ನಿವಾಸಗಳಲ್ಲಿ ಶೋಧ ಮತ್ತು ಜಪ್ತಿ ಕಾರ್ಯಾಚರಣೆಯನ್ನು ನಡೆಸಿತ್ತು, ಅದರ ಆಧಾರದ ಮೇಲೆ ಜಾರಿ ನಿರ್ದೇಶನಾಲಯವು ಅವರ ವಿರುದ್ಧ ತನ್ನದೇ ಆದ ತನಿಖೆಯನ್ನು ಪ್ರಾರಂಭಿಸಿತ್ತು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.