ಉದ್ಯೋಗ ಇಲ್ಲದಿದ್ದರೆ ಹುಡುಕಿ ಜೀವನಾಂಶ ನೀಡಿ! ಹೈಕೋರ್ಟ್ ಆದೇಶ
Team Udayavani, Feb 13, 2023, 7:35 AM IST
ಬೆಂಗಳೂರು: ದುಡಿಯುವ ಸಾಮರ್ಥ್ಯ ಹೊಂದಿರುವ ಪತಿಯು ವಿಚ್ಛೇದಿತ ಪತ್ನಿಯಿಂದ ಜೀವನಾಂಶ ಪಡೆಯುವಂತಿಲ್ಲ ಎಂದು ಇತ್ತೀಚೆಗೆ ಆದೇಶಿಸಿದ್ದ ಹೈಕೋರ್ಟ್, ಈಗ ಪತ್ನಿ-ಮಗುವಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ. ಪತಿಗೆ ಉದ್ಯೋಗ ಇಲ್ಲದಿದ್ದರೆ ಹುಡುಕಿಕೊಂಡು ಜೀವನಾಂಶ ನೀಡಬೇಕು ಎಂದು ಮತ್ತೂಂದು ಪ್ರಕರಣದಲ್ಲಿ ಆದೇಶಿಸಿದೆ.
ಪತ್ನಿ ಹಾಗೂ ಮಗುವಿಗೆ ಜೀವನಾಂಶ ನೀಡು ವಂತೆ ಮೈಸೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪತಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಪತ್ನಿಗೆ ಮಾಸಿಕ 10 ಸಾವಿರ ರೂ. ಜೀವನಾಂಶ ನೀಡಲು ಸಾಧ್ಯವಿಲ್ಲ ಎಂಬ ಪತಿಯ ವಾದ ಹುರುಳಿಲ್ಲದ್ದು ಎಂದು ಹೇಳಿರುವ ಹೈಕೋರ್ಟ್, ಒಬ್ಬ ಸಮರ್ಥ ಪುರುಷ ಹೆಂಡತಿ ಮತ್ತು ಮಗುವನ್ನು ನೋಡಿಕೊಳ್ಳಬೇಕು. ಅದಕ್ಕಾಗಿ ಯಾವುದೇ ಕೆಲಸ ಅಥವಾ ಅವಕಾಶವಿಲ್ಲದಿದ್ದರೂ ಅಂತಹ ಕೆಲಸ ಅಥವಾ ಅವಕಾಶವನ್ನು ಹುಡುಕಿ ತನ್ನ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ತನ್ನ ಆದೇಶದಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.