ಅಮಿತಾ ಪ್ರಸಾದ್, ವಿಜಯಭಾಸ್ಕರ್, ರಮಣರೆಡ್ಡಿ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ನಕಲಿ ಖಾತೆಗಳಿಗೆ ಹಣ ವರ್ಗ
Team Udayavani, May 30, 2022, 10:15 PM IST
ಬೆಂಗಳೂರು: ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯ ಅನುದಾನವನ್ನು ನಕಲಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ ಉಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸೇರಿದಂತೆ ಮೂವರು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ ಎಸಿಬಿ ವಿಶೇಷ ನ್ಯಾಯಾಲಯದ ಅದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವ ಎಸಿಬಿ ಕೋರ್ಟ್ ಆದೇಶ ರದ್ದುಪಡಿಸುವಂತೆ ಕೋರಿ ಈ ಹಿಂದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಿರುವ ನಿವೃತ್ತ ಐಎಎಸ್ ಅಧಿಕಾರಿಗಳಾದ ಅಮಿತಾ ಪ್ರಸಾದ್, ಟಿ.ಎಂ. ವಿಜಯ್ ಭಾಸ್ಕರ್, ಕೈಗಾರಿಕಾ ಇಲಾಖೆ ಹಾಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಎಸಿಬಿ ತನಿಖೆ ಮತ್ತು ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಿತು.
ಅಲ್ಲದೆ, ಪ್ರಕರಣದಲ್ಲಿ ಪ್ರತಿವಾದಿಗಳಾಗಿರುವ ಹಲಸೂರು ಗೇಟ್ ಪೊಲೀಸರು, ಎಸಿಬಿ ಮತ್ತು ಖಾಸಗಿ ದೂರುದಾರ ಎಸ್. ನಾರಾಯಣಸ್ವಾಮಿ ಅವರಿಗೆ ನ್ಯಾಯಪೀಠ ತುರ್ತು ನೋಟಿಸ್ ಜಾರಿಗೊಳಿಸಿತು.
ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ ಹಾಗೂ ರಾಜ್ಯ ಜಲ ಮತ್ತು ನೈರ್ಮಲ್ಯ ಮಿಷನ್ ಯೋಜನೆಯಡಿ ಮಂಜೂರಾಗಿದ್ದ ಹಣವನ್ನು 2011ರಿಂದ 2015ರ ನಡುವೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಿರುವ ಅಮಿತಾ ಪ್ರಸಾದ್, ಟಿ.ಎಂ.ವಿಜಯಭಾಸ್ಕರ್, ಡಾ.ಇ.ವಿ.ರಮಣರೆಡ್ಡಿ ಅವರು ದುರುಪಯೋಗ ಪಡಿಸಿಕೊಂಡಿದ್ದಾರೆ. ನೂರಾರು ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ಆದೇಶಿಸಿ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಎಸ್.ನಾರಾಯಣ ಸ್ವಾಮಿ ಎಸಿಬಿ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಿದ್ದರು.
ಅಮಿತಾ ಪ್ರಸಾದ್ ಅವರು 104 ಬ್ಯಾಂಕ್ ಖಾತೆ ತೆರೆಯಲು ಅಕ್ರಮವಾಗಿ ಆದೇಶಿಸಿದ್ದರು. ಡಾ.ಇ.ವಿ. ರಮಣ ರೆಡ್ಡಿ ಅವರು ನಕಲಿ ಖಾತೆಗಳಿಗೆ ಖಜಾನೆಯಿಂದ 272 ಕೋಟಿ ಹಣ ವರ್ಗಾಯಿಸಲು ಆದೇಶಿಸಿದ್ದರು. ಟಿ.ಎಂ. ವಿಜಯ ಭಾಸ್ಕರ್ ಅವರು, ಹೆಚ್ಚುವರಿ ವಿನಿಯೋಗ ಪ್ರಮಾಣ ಪತ್ರಗಳಿಗೆ ಸಹಿ ಹಾಕಿ ಕೇಂದ್ರ ಸರ್ಕಾರವನ್ನು ಹಾದಿತಪ್ಪಿಸಿದ್ದಾರೆ ಎಂದು ಖಾಸಗಿ ದೂರಿನಲ್ಲಿ ಆರೋಪಿಸಿದ್ದರು.
ಅರ್ಜಿದಾರರ ವಿರುದ್ಧ ತನಿಖೆ ನಡೆಸಿ ನಾಲ್ಕು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಎಸಿಬಿ ತನಿಖಾಧಿಕಾರಿಗಳಿಗೆ ನಿರ್ದೇಶಿಸಿ ಎಸಿಬಿ ವಿಶೇಷ ಕೋರ್ಟ್ 2022ರ ಏ.18ರಂದು ಆದೇಶಿಸಿತ್ತು.
ಈ ಆದೇಶ ರದ್ದುಪಡಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿದಾರರ ಪರ ವಕೀಲ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿ, ಅರ್ಜಿದಾರರ ವಿರುದ್ಧ ಯಾವುದೇ ಆರೋಪ ಇಲ್ಲದಿದ್ದರೂ ಖಾಸಗಿ ದೂರು ಸಲ್ಲಿಸಲಾಗಿದೆ. ದೂರು ದಾಖಲಿಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ.
ಇದೇ ಪ್ರಕರಣ ಸಂಬಂಧ ಹಲಸೂರು ಠಾಣಾ ಪೊಲೀಸರು ಎರಡು ಬಾರಿ ತನಿಖೆ ನಡೆಸಿದ್ದಾರೆ. ಆರ್‌ಡಿಪಿಆರ್ ಕಾರ್ಯದರ್ಶಿ ಡಾ.ಬೋರೇಗೌಡ, ಗ್ರಾಮೀಣ ನೀರು ಸರಬರಾಜು ವಿಭಾಗದ ಉಪ ಕಾರ್ಯದರ್ಶಿ ರಾಮಕೃಷ್ಣ, ರಾಷ್ಟ್ರೀಕೃತ ಬ್ಯಾಂಕ್‌ವೊಂದರ ವ್ಯವಸ್ಥಾಪಕ ಸೀಲಂ ಗಿರಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಆ ಪ್ರಕರಣ ವಿಚಾರಣಾ ಹಂತದಲ್ಲಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಟಿಟಿ ರೋಡ್‌ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.