ಪೋಕ್ಸೋ : ಸಂತ್ರಸ್ತೆಗೆ 18 ವರ್ಷ ದಾಟಿದ್ದರೆ ಪಾಟೀ ಸವಾಲಿಗೆ ಒಳಪಡಿಸಬಹುದು: ಹೈಕೋರ್ಟ್
Team Udayavani, Jun 12, 2022, 12:47 AM IST
ಬೆಂಗಳೂರು: ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಸಂತ್ರಸ್ತೆಯ ವಯಸ್ಸು 18 ವರ್ಷ ತುಂಬಿದ್ದರೆ ಅವರನ್ನು ಮತ್ತೆ ಪಾಟೀ ಸವಾಲಿಗೆ ಒಳಪಡಿಸಲು ಯಾವುದೇ ಅಡ್ಡಿಯಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಅಪ್ರಾಪ್ತ ವಯಸ್ಕ ಸಂತ್ರಸ್ತರನ್ನು ಪದೇಪದೆ ಪಾಟೀ ಸವಾಲಿಗೆ ಒಳಪಡಿಸಬಾರದು ಎಂಬ ನಿಯಮವಿದೆಯಾದರೂ, ಸಂತ್ರಸ್ತರಿಗೆ 18 ವರ್ಷ ತುಂಬಿದ್ದರೆ ಈ ನಿಯಮ ಅನ್ವಯಿಸದು ಎಂದು ಹೈಕೋರ್ಟ್ ಹೇಳಿದೆ.
ಪೋಕ್ಸೋ ಪ್ರಕರಣವೊಂದರ ಸಂತ್ರಸ್ತೆಯನ್ನು ಸಿಆರ್‌ಪಿಸಿ ಸೆಕ್ಷನ್ 311 ಪ್ರಕಾರ ಮರು ವಿಚಾರಣೆಗೆ ಕರೆಸಿಕೊಳ್ಳಬೇಕು ಎಂದು ಆರೋಪಿ ಮಹಮ್ಮದ್ ಅಲಿ ಅಕºರ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣ ನ್ಯಾಯಾಲಯ ವಜಾಗೊಳಿಸಿತ್ತು.
ಇದನ್ನು ಪ್ರಶ್ನಿಸಿ ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದ. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ವಿಚಾರಣ ನ್ಯಾಯಾ ಲಯ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.