ಧ್ವನಿವರ್ಧಕಗಳ ದುರ್ಬಳಕೆ ತಡೆಗೆ ವಿಶೇಷ ಅಭಿಯಾನ ನಡೆಸಿ: ಸರ್ಕಾರಕ್ಕೆ ಹೈಕೋರ್ಟ್ ಆದೇಶ
Team Udayavani, Jun 17, 2022, 8:27 PM IST
ಬೆಂಗಳೂರು: ಮಸೀದಿ, ದೇವಸ್ಥಾನ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳು ಹಾಗೂ ಪಬ್-ರೆಸ್ಟೋರೆಂಟ್ ಮತ್ತಿತರ ಧ್ವನಿವರ್ಧಕಗಳನ್ನು ಬಳಸುವ ಸ್ಥಳಗಳಲ್ಲಿ ಅದರ ದುರ್ಬಳಕೆಯನ್ನು ತಡೆಗಟ್ಟಲು ವಿಶೇಷ ಅಭಿಯಾನ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ರಾಜ್ಯದಲ್ಲಿ ಶಬ್ಧ ಮಾಲಿನ್ಯ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ಬೆಂಗಳೂರು ನಗರದಲ್ಲಿ ಮಸೀದಿಗಳು ಧ್ವನಿವರ್ಧಕ ಬಳಸಿ ಶಬ್ಧ ಮಾಲಿನ್ಯ ಉಂಟು ಮಾಡುತ್ತಿರುವುದನ್ನು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಈ ಆದೇಶ ನೀಡಿತು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ರಾಜ್ಯದಲ್ಲಿನ ಮಸೀದಿ, ದೇವಸ್ಥಾನ, ಗುರುದ್ವಾರ, ಚರ್ಚ್ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳು ಹಾಗೂ ಪಬ್-ರೆಸ್ಟೋರೆಂಟ್‌ಗಳಲ್ಲಿ ಧ್ವನಿವರ್ಧಕ ಹಾಗೂ ಶಬ್ದ ಹೊರಸೂಸುವ ಇತರೆ ಉಪಕರಣಗಳ ದುರ್ಬಳಕೆ ತಡೆಯಲು ವಿಶೇಷ ಅಭಿಯಾನ ಕೈಗೊಳ್ಳಬೇಕು.
ಪರವಾನಗಿಯಿಲ್ಲದೆ ಧ್ವನಿವರ್ಧಕ ಉಪಯೋಗಿಸುತ್ತಿರುವ ಅಥವಾ ನಿಗದಿತ ಡೆಸಿಬಲ್‌ನಲ್ಲಿ ಹೆಚ್ಚಿನ ಶಬ್ದ ಹೊರಸೂಸುತ್ತಿರುವ ಧ್ವನಿವರ್ಧಕಗಳನ್ನು ಪತ್ತೆ ಹಚ್ಚಬೇಕು. ಅದಕ್ಕಾಗಿ ಧಾರ್ಮಿಕ ಸ್ಥಳಗಳ ಸರ್ವೇ ನಡೆಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.
ಅಲ್ಲದೆ, ಅನಧಿಕೃತವಾಗಿ ಧ್ವನಿವರ್ಧಕ ಉಪಯೋಗಿಸುತ್ತಿದ್ದರೆ ಸಂಬಂಧಪಟ್ಟವರಿಗೆ ನೋಟಿಸ್ ನೀಡಿ ತೆರವುಗೊಳಿಸಬೇಕು. ನಿಗದಿತ ಮಿತಿಯ ಡೆಸಿಬಲ್‌ನಲ್ಲಿಯೇ ಧ್ವನಿವರ್ಧಕಗಳು ಶಬ್ದ ಹೊರಸೂಸುವಂತೆ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಕೈಗೊಂಡ ಕ್ರಮಗಳ ಕುರಿತು ಮೂರು ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.
ಶಾಶ್ವತ ಪರವಾನಗಿ ಇಲ್ಲ: ಸರ್ಕಾರ ಸ್ಪಷ್ಟನೆ
ವಿಚಾರಣೆ ವೇಳೆ ಸರ್ಕಾರಿ ವಕೀಲ ಎಚ್.ಆರ್. ಶೌರಿ ವಾದ ಮಂಡಿಸಿ, ಧ್ವನಿವರ್ಧಕಗಳ ಬಳಕೆಗೆ ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆ-2000ರ ಸೆಕ್ಷನ್ 5 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ-1963 ಇದರ ಸೆಕ್ಷನ್ 37ರಡಿ ಪರವಾನಿಗೆ ನೀಡಲಾಗುತ್ತದೆ. ರಾಜ್ಯದಲ್ಲಿ ಧ್ವನಿವರ್ಧಕ ಬಳಕೆ ಯಾವುದೇ ಶಾಶ್ವತ ಪರವಾನಗಿ ನೀಡುವುದಿಲ್ಲ. ಗರಿಷ್ಟ ಎಂದರೆ ಎರಡು ವರ್ಷದವರೆಗೆ ಪರವಾನಗಿ ನೀಡಲಾಗುತ್ತದೆ. ಆ ಅವಧಿ ಮುಗಿದ ಬಳಿಕ ನವೀಕರಣ ಮಾಡಬೇಕು. ಧ್ವನಿವರ್ಧಕ ಬಳಕೆಗೆ ಅನುಮತಿ ನೀಡಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ.
ಅನುಮತಿ ಮತ್ತು ನವೀಕರಣಕ್ಕಾಗಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸಮಿತಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂದು ವಿವರಿಸಿದರು.
ಜತೆಗೆ, ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಕೆಗೆ ಸಂಪೂರ್ಣ ನಿಷೇಧವಿದೆ. ಆದರೆ, ವಿಶೇಷ ಸಂದರ್ಭದಲ್ಲಿ ಅಂದರೆ ಸಾಂಸ್ಕೃತಿಕ, ಧಾರ್ಮಿಕ ಉತ್ಸವ, ಸಭೆ-ಸಮಾರಂಭ ಮತ್ತು ಹಬ್ಬ-ಹರಿದಿನಗಳಲ್ಲಿ ವರ್ಷದಲ್ಲಿ 15 ದಿನಗಳ ಮಟ್ಟಿಗೆ ಮಾತ್ರ ರಾತ್ರಿ 10ರಿಂದ ಮಧ್ಯರಾತ್ರಿ 12ರವರೆಗೆ ಧ್ವನಿವಧಕ ಬಳಕೆಗೆ ವಿಶೇಷ ಅನುಮತಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.