High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

ಮದ್ರಾಸ್‌ ಹೈಕೋರ್ಟ್‌ ತೀರ್ಪು ಆಧರಿಸಿ ಕೇಸ್‌ ರದ್ದು: ನ್ಯಾಯಪೀಠ

Team Udayavani, Sep 20, 2024, 12:01 AM IST

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ತಮಿಳುನಾಡಿನ ಸಂಬಂಧ ಕಲ್ಪಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಪ್ರಕರಣ ಸಂಬಂಧ ಕಾಟನ್‌ಪೇಟೆ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್‌ ಹಾಗೂ ಆ ಸಂಬಂಧ 5ನೇ ಎಸಿಎಂಎಂ ನ್ಯಾಯಾಲಯದ ಮುಂದಿರುವ ಪ್ರಕರಣ ರದ್ದು ಕೋರಿ ಶೋಭಾ ಕರಂದ್ಲಾಜೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಕೆಲವು ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಇದೇ ಘಟನೆಯ ಬಗ್ಗೆ ಇಂತಹುದೇ ಹೇಳಿಕೆ ನೀಡಿದ್ದ ಪ್ರಕರಣವನ್ನು ಮದ್ರಾಸ್‌ ಹೈಕೋರ್ಟ್‌ 2024ರ ಸೆ. 5ರಂದು ರದ್ದುಗೊಳಿಸಿದೆ. ಅದೇ ಆಧಾರದ ಮೇಲೆ ಈ ಪ್ರಕರಣವನ್ನೂ ಸಹ ರದ್ದುಗೊಳಿಸಲಾಗುವುದು. ಏಕೆಂದರೆ ಈ ಪ್ರಕರಣವೂ ಸಹ ಅದೇ ಘಟನೆಗೆ ಸಂಬಂಧಿಸಿದ್ದಾಗಿದೆ.

ಹಾಗಾಗಿ ಪ್ರಕರಣ ಮುಕ್ತಾಯಗೊಳಿಸಲಾಗುತ್ತಿದೆ ಎಂದು ಶೋಭಾ ಕರಂದ್ಲಾಜೆ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್‌ 123(3),123(3)ಎ ಮತ್ತು 125ರಡಿ ದಾಖಲಿಸಿದ್ದ ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿತು.

ಏನಿದು ಪ್ರಕರಣ?
ನಗರದಲ್ಲಿ ನಡೆದ ಪ್ರತಿಭಟನೆಯೊಂದರಲ್ಲಿ ಶೋಭಾ ಕರಂದ್ಲಾಜೆ ಭಾಷಣ ಮಾಡುತ್ತಾ¤, “ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ಬಾಂಬ್‌ ಸ್ಫೋಟ ಮಾಡ್ತಾರಾ’ ಎಂಬ ಹೇಳಿಕೆ ನೀಡಿದ್ದರು. ಅದನ್ನು ಖಂಡಿಸಿದ್ದ ತಮಿಳುನಾಡು ಸಿಎಂ ಸ್ಟಾಲಿನ್‌, ಕೇಂದ್ರ ಚುನಾವಣ ಆಯೋಗಕ್ಕೆ ದೂರು ನೀಡಿದ್ದರು. ವಿರೋಧ ವ್ಯಕ್ತವಾಗುತ್ತಿದ್ದಂತೆ ಶೋಭಾ ಕರಂದ್ಲಾಜೆ ಕ್ಷಮೆಯಾಚಿಸಿದ್ದರು.

ಈ ಮಧ್ಯೆ, ಪ್ರಕರಣ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣ ಆಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಸೂಚಿಸಿತ್ತು. ಅದರಂತೆ, ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಿಸಲಾಗಿತ್ತು. ಅದನ್ನು ರದ್ದುಪಡಿಸುವಂತೆ ಶೋಭಾ ಕರಂದ್ಲಾಜೆ ಹೈಕೋರ್ಟ್‌ ಮೊರೆ ಹೋಗಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.