ವೇಶ್ಯಾವಾಟಿಕೆ ಮೇಲೆ ದಾಳಿ: ಗ್ರಾಹಕರು ಸಿಕ್ಕಿ ಬಿದ್ದರೆ ಕಾನೂನು ಕ್ರಮ ಇಲ್ಲ; ಕೋರ್ಟ್‌

Team Udayavani, Apr 15, 2022, 7:40 AM IST

ವೇಶ್ಯಾವಾಟಿಕೆ ಮೇಲೆ ದಾಳಿ: ಗ್ರಾಹಕರು ಸಿಕ್ಕಿ ಬಿದ್ದರೆ ಕಾನೂನು ಕ್ರಮ ಇಲ್ಲ; ಕೋರ್ಟ್‌

ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದಾಗ ಅಲ್ಲಿ  ಗ್ರಾಹಕರು ಸಿಕ್ಕಿಬಿದ್ದರೆ ಅವರ  ವಿರುದ್ಧ ಕಾನೂನು ಕ್ರಮ ಜರುಗಿಸಲಾಗದು ಎಂದು ಹೈಕೋರ್ಟ್‌ ಹೇಳಿದೆ.

ಈ ವಿಚಾರವಾಗಿ ಬೆಂಗಳೂರು ನಿವಾಸಿ ಎಸ್‌. ಬಾಬು ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ರೀತಿ ಹೇಳಿದೆ.

ಅದೇ ರೀತಿ ಅರ್ಜಿದಾರರ ವಿರುದ್ಧ ಮಾನವ ಕಳ್ಳಸಾಗಾಣೆ ತಡೆ ಕಾಯ್ದೆ-1956ರ ಸೆಕ್ಷನ್‌ 3,4,5,6 ಮತ್ತು ಸೆಕ್ಷನ್‌ 370 ಅಡಿಯಲ್ಲಿ ಬಾಕಿ ಉಳಿದಿರುವ ಪ್ರಕ್ರಿಯೆಗಳನ್ನೂ ನ್ಯಾಯಪೀಠ ಇದೇ ವೇಳೆ ರದ್ದುಪಡಿಸಿತು.

ಪೊಲೀಸರು ಶೋಧ ನಡೆಸಿದಾಗ ಅರ್ಜಿದಾರರು ವೇಶ್ಯಾವಾಟಿಕೆಯಲ್ಲಿ ಗ್ರಾಹಕರು ಎಂಬುದು ವಿವಾದವಾಗಿಲ್ಲ. ವೇಶ್ಯಾಗೃಹದಲ್ಲಿರುವ ಗ್ರಾಹಕನನ್ನು ಕ್ರಿಮಿನಲ್‌ ಮೊಕದ್ದಮೆಗಳಿಗೆ ಎಳೆಯಲಾಗುವುದಿಲ್ಲ ಎಂಬುದು ಈ ನ್ಯಾಯಾಲಯವು ಹಲವಾರು ಪ್ರಕರಣಗಳಲ್ಲಿ ಸ್ಪಷ್ಟ ನಿಲುವು ತೆಗೆದುಕೊಂಡಿದೆ ಎಂದು ಹೇಳಿರುವ ನ್ಯಾಯಪೀಠ, ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದಾಗ ಅಲ್ಲಿ  ಗ್ರಾಹಕರು ಸಿಕ್ಕಿಬಿದ್ದರೆ ಅವರ  ವಿರುದ್ಧ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ ಅನ್ನುವುದನ್ನು ಪುನರುತ್ಛರಿಸಿದೆ.

ಪ್ರಾಸಿಕ್ಯೂಷನ್‌ ಪ್ರಕಾರ, 2021ರ ಸೆ.23ರಂದು ಖಚಿತ ಮಾಹಿತಿ ಆಧರಿಸಿ ಮಾನವ ಕಳ್ಳ ಸಾಗಾಣೆ ತಡೆ ಕಾಯ್ದೆ ಮತ್ತು ಐಪಿಸಿ ಕಲಂ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಕಿಯೆ ಆರಂಭಿಸಿದರು. ಪೊಲೀಸರು ದಾಳಿ ನಡೆಸಿದಾಗ ಆ ಮನೆಯ ಆವರಣದಲ್ಲಿ ಅರ್ಜಿದಾರರೂ ಸಹ ಇದ್ದರು.

ಕಾಯ್ದೆಯ ಸೆಕ್ಷನ್‌ 3ರ ಪ್ರಕಾರ ವೇಶ್ಯಾಗೃಹವನ್ನು ಇಟ್ಟುಕೊಳ್ಳುವುದಕ್ಕೆ ಅಥವಾ ಆವರಣವನ್ನು ವೇಶ್ಯಾಗೃಹವಾಗಿ ಬಳಸಲು ಅನುಮತಿಸುವುದಕ್ಕೆ ಶಿಕ್ಷೆ ವಿಧಿಸುತ್ತದೆ. ಸೆಕ್ಷನ್‌ 4ರಂತೆ ವೇಶ್ಯಾವಾಟಿಕೆಯಿಂದ ಹಣ ಗಳಿಕೆ ಮಾಡಿ ಜೀವನ ಸಾಗಿಸುವವರಿಗೆ ಶಿಕ್ಷೆ ನೀಡುತ್ತದೆ. ಸೆಕ್ಷನ್‌ 5ರ ಪ್ರಕಾರ ವೇಶ್ಯಾವಾಟಿಕೆಗಾಗಿ ವ್ಯಕ್ತಿ ಸಾಗಣೆ, ಪ್ರಚೋದಿಸುವುದು ಅಥವಾ ಕರೆದೊಯ್ಯುವುದಕ್ಕೆ ಶಿಕ್ಷೆ ವಿಧಿಸುವುದಕ್ಕೆ ಸಂಬಂಧಿಸಿದ್ದಾಗಿದೆ ಮತ್ತು ಸೆಕ್ಷನ್‌ 6ರಂತೆ ವೇಶ್ಯಾವಾಟಿಕೆ ನಡೆಸುತ್ತಿರುವ ಸ್ಥಳದಲ್ಲಿ ವ್ಯಕ್ತಿಯನ್ನು ಬಂಧಿಸುವುದಾಗಿದೆ. ಆದರೆ ಈ ಯಾವ ಚಟುವಟಿಕೆಗಳನ್ನು ಅರ್ಜಿದಾರರು ನಡೆಸಿದ್ದಾರೆಂಬುದನ್ನು ದೂರಿನಲ್ಲಿ ಆರೋಪಿಸಿಲ್ಲ. ಹಾಗಾಗಿ ಪ್ರಕರಣ ಕಾನೂನಿನಡಿ ನಿಲ್ಲುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಟಾಪ್ ನ್ಯೂಸ್

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.