ಗೂಂಡಾ ಕಾಯ್ದೆ: ಬೊಮ್ಮಾಯಿ ಎಚ್ಚರಿಕೆ
Team Udayavani, Sep 7, 2020, 6:30 AM IST
ಮಾದಕ ವಸ್ತುಗಳ ದಂಧೆ ಪ್ರಕರಣಗಳಲ್ಲಿ ಪದೇ ಪದೇ ಅಪರಾಧ ಕೃತ್ಯ ಎಸಗುವವರ (ರಿಪೀಟೆಡ್ ಅಫೆಂಡರ್) ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಪೂರೈಕೆದಾರರಿಗೆ ಬಿಸಿ ಮುಟ್ಟಿಸಿದರೆ, ಪಾರ್ಟಿಗಳ ಆಯೋಜನೆ ನಗರದ ಹೊರಗೆ ಮತ್ತು ಬೇರೆ ಜಿಲ್ಲೆಗಳಿಗೆ ಸ್ಥಳಾಂತರಗೊಳ್ಳುತ್ತವೆ. ಆದ್ದರಿಂದ ಎಲ್ಲ ಜಿಲ್ಲೆಗಳ ಎಸ್ಪಿಗಳಿಗೆ ಕಠಿನ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಎಲ್ಲ ಜಿಲ್ಲೆಗಳ ಎಸ್ಪಿ, ಐಜಿ ಗಳ ಜತೆ ಚರ್ಚೆ ಮಾಡಿ ಕೆಲವು ಸೂಚನೆಗಳನ್ನು ನೀಡಲಾಗಿದೆ. ಗಡಿ ಜಿಲ್ಲೆಗಳಲ್ಲಿ ಮಾದಕ ವಸ್ತುಗಳ ಪೂರೈಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಪೆಡ್ಲರ್ ಬಂಧನ
ಆಫ್ರಿಕನ್ ಪ್ರಜೆ ಲೌಮ್ ಪೆಪರ್ ಸಾಂಬಾ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಆತ ಒಬ್ಬ ಪೆಡ್ಲರ್. ಆತ ಹಲವರಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡಿದ್ದಾನೆ. ಆತನಿಂದ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಜತೆಗೆ ಎಫ್ಐಆರ್ ಹಾಕಿರುವ ಆರೋಪಿಗಳ ವಿರುದ್ಧ ಕ್ರಮ ಖಂಡಿತ ಎಂದು ಗೃಹ ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.