![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 21, 2022, 9:24 PM IST
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2023ರ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಮಾ.10ರಿಂದ 29ರ ವರೆಗೆ ಪರೀಕ್ಷೆಗಳು ನಡೆಯಲಿದ್ದು, ಎಲ್ಲ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ. ತಾತ್ಕಾಲಿಕ ವೇಳಾಪಟ್ಟಿಯನ್ನು ರಾಜ್ಯದ ಎಲ್ಲ ಕಾಲೇಜುಗಳ ಸೂಚನಾ ಫಲಕದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಕಾಲೇಜು ಪ್ರಾಂಶುಪಾಲರಿಗೆ ಸೂಚಿಸಿದ್ದಾರೆ.
ಜಿಲ್ಲಾ ಉಪ ನಿರ್ದೇಶಕರು ತಮ್ಮ ವ್ಯಾಪ್ತಿರುವ ಪ್ರಾಂಶುಪಾಲರಿಗೆ ಪ್ರಕಟಿಸುವಂತೆ ಸೂಚಿಸಬೇಕು. ವಿದ್ಯಾರ್ಥಿಗಳು ಹಾಗೂ ಪೋಷಕರು ವೇಳಾಪಟ್ಟಿಗೆ ಸಂಬಂಧಿಸಿದಂತೆ ನ.21ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ. ಆಕ್ಷೇಪಣೆಗಳನ್ನು [email protected] ಗೆ ಸಲ್ಲಿಸುವಂತೆ ಪಿಯು ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾತ್ಕಾಲಿಕ ವೇಳಾಪಟ್ಟಿ:
ಮಾ.10 ಕನ್ನಡ, ಅರೇಬಿಕ್
ಮಾ.11 ಗಣಿತ, ಶಿಕ್ಷಣ
ಮಾ.13 ಅರ್ಥಶಾಸ್ತ್ರ
ಮಾ.14 ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮಾ.15 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾ.16 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.17 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್
ಮಾ.18 ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾ.20 ಇತಿಹಾಸ, ಭೌತಶಾಸ್ತ್ರ
ಮಾ.21 ಹಿಂದಿ
ಮಾ.23 ಇಂಗ್ಲಿಷ್
ಮಾ.25 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ.27 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂ ಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾ.29 ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.