Karnataka; ಒಳ ಮೀಸಲಿಗೆ ಹೋರಾಟ: ಇಂದು ಬಿಜೆಪಿ ಸಭೆ
ಸರಕಾರಕ್ಕೆ ಇಕ್ಕಟ್ಟು...ಒತ್ತಡ ಹೇರಲು ವಿಪಕ್ಷ ಸಜ್ಜು
Team Udayavani, Oct 8, 2024, 6:00 AM IST
ಬೆಂಗಳೂರು: ಇತ್ತ ಹಿಂದುಳಿದ ವರ್ಗಗಳ ಆಯೋಗದ ವರದಿ ಮಂಡನೆಗೆ ಸರಕಾರ ತಯಾರಿ ಮಾಡಿಕೊಂಡಿದ್ದರೆ ಅತ್ತ ಒಳ ಮೀಸಲಾತಿ ವಿಚಾರದಲ್ಲಿ ಸರಕಾರದ ಮೇಲೆ ಒತ್ತಡ ಹೇರಲು ವಿಪಕ್ಷ ಬಿಜೆಪಿ ಸಜ್ಜಾಗುತ್ತಿದೆ.
ಜಾತಿ ಗಣತಿ ವರದಿ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸದಸ್ಯರಲ್ಲಿ ಒಡಕು ಇರುವಂತೆಯೇ ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲೂ ಒಗ್ಗಟ್ಟಿಲ್ಲ. ಇದನ್ನೇ ಬಳಸಿಕೊಂಡು ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ತಂತ್ರ ಹೆಣೆಯಲಾರಂಭಿಸಿದೆ.
ವಿಪಕ್ಷವಾಗಿ ಬಿಜೆಪಿಯು ಪದೇ ಪದೆ ಮುಡಾ ಹಗರಣವೊಂದರಲ್ಲೇ ಹೋರಾಡುವ ಮೂಲಕ ಸಿಎಂ ಸಿದ್ದರಾಮಯ್ಯರನ್ನು ವೈಯಕ್ತಿಕವಾಗಿ ಗುರಿ ಮಾಡುತ್ತಿದೆ ಎನ್ನುವ ಆರೋಪಗಳಿವೆ. ಇದರಿಂದ ತಪ್ಪಿಸಿಕೊಳ್ಳಲು ಬಿಜೆಪಿ ಕೈಗೆ ಸಿಎಂ ಸಿದ್ದರಾಮಯ್ಯ ಅವರೇ ಇನ್ನೊಂದು ಅಸ್ತ್ರವನ್ನು ಕೊಟ್ಟಂತಾಗಿದೆ.
ಜತೆಗೆ ಒಳಮೀಸಲಾತಿ ವಿಷಯ ಪ್ರಸ್ತಾವಿಸುವ ಮೂಲಕ ತಳಸಮುದಾಯದ ಜತೆಗೆ ಬಿಜೆಪಿ ಇದೆ ಎಂಬ ಸಂದೇಶವನ್ನೂ ಕೊಟ್ಟಂತಾಗಲಿದೆ ಎಂಬ ಲೆಕ್ಕಾಚಾರಗಳು ಬಿಜೆಪಿಯಲ್ಲಿ ನಡೆದಿವೆ.
ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಸಭೆ ಆಯೋಜನೆಯಾಗಿದ್ದು, ಸಂಸದ ಬಸವರಾಜ ಬೊಮ್ಮಾಯಿ, ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸಹಿತ ಹಲವರು ಭಾಗಿಯಾಗಲಿದ್ದಾರೆ. ಒಳ ಮೀಸಲಾತಿ ವಿಷಯದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಮುಂದಿಟ್ಟುಕೊಂಡು ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸುವ ಸಭೆ ಇದಾಗಿದೆ. ರಾಜ್ಯ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಅನುಸರಿಸಬೇಕಾದ ಕಾನೂನಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ.
ಸರಕಾರಕ್ಕೆ ಇಕ್ಕಟ್ಟು
ಈ ಹಿಂದೆ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಎಸ್‌ಸಿ ಮೀಸಲು ಪ್ರಮಾಣವನ್ನು ಶೇ. 15ರಿಂದ 17ಕ್ಕೆ ಹಾಗೂ ಎಸ್‌ಟಿ ಮೀಸಲು ಪ್ರಮಾಣವನ್ನು ಶೇ. 4ರಿಂದ 7ಕ್ಕೆ ಹೆಚ್ಚಿಸಿ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಆಗ ವಿಪಕ್ಷವಾಗಿದ್ದ ಕಾಂಗ್ರೆಸ್ ಇದನ್ನು ವಿರೋಧಿಸಿತ್ತು. ಬಳಿಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಚುನಾವಣ ಪ್ರಣಾಳಿಕೆಯಲ್ಲೂ ಒಳ ಮೀಸಲಾತಿ ನೀಡುವುದಾಗಿ ಘೋಷಿಸಿತ್ತಲ್ಲದೆ ಚಿತ್ರದುರ್ಗ ಸಮಾವೇಶದಲ್ಲಿ ಈ ಬಗ್ಗೆ ಭರವಸೆ ನೀಡಿತ್ತು. ಹೀಗಾಗಿ ಪರಿಶಿಷ್ಟರಲ್ಲಿ ಒಳ ಮೀಸಲಾತಿ ಕೊಡುವುದು ಕಾಂಗ್ರೆಸ್ ಸರಕಾರಕ್ಕೆ ಅನಿವಾರ್ಯ. ಆದರೆ ಕಾಂಗ್ರೆಸ್‌ನಲ್ಲಿರುವ ದಲಿತ ಬಲಗೈ ಗುಂಪಿಗೆ ಸೇರಿದ ನಾಯಕರು ಒಳ ಮೀಸಲಾತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಸರಕಾರ ಈಗ ಯಾವ ಕಡೆ ವಾಲಿದರೂ ಇಕ್ಕಟ್ಟಿಗೆ ಸಿಲುಕಲಿದೆ. ಇಂಥ ಪರಿಸ್ಥಿತಿಯಲ್ಲಿ ಬಿಜೆಪಿ ಹೊಸ ರಾಜಕೀಯ ದಾಳ ಉರುಳಿಸಲು ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.