ರಾಜ್ಯ ಹೂಡಿಕೆದಾರರ ಆದ್ಯತೆಯ ತಾಣ: ಸಿಎಂ
Team Udayavani, Oct 23, 2020, 11:57 PM IST
ಬೆಂಗಳೂರು: ರಾಜ್ಯವು ಹೂಡಿಕೆದಾರರ ಆದ್ಯತೆಯ ತಾಣ ವಾಗಿದ್ದು, ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ತೈಮಾಸಿಕದಲ್ಲಿ ದೇಶದಲ್ಲೇ ಅತಿ ಹೆಚ್ಚು ವಿದೇಶಿ ನೇರ ಬಂಡವಾಳವನ್ನು ಆಕರ್ಷಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಶುಕ್ರವಾರ ಯಡಿಯೂರಪ್ಪ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ಕರ್ನಾಟಕ ಹೂಡಿಕೆದಾರರಿಗೆ ನೆಚ್ಚಿನ ಮತ್ತು ಆದ್ಯತೆಯ ತಾಣವಾಗಿ ಮುಂದುವರಿದಿದ್ದು, 2020ರ ಎಪ್ರಿಲ್- ಜೂನ್ ತ್ತೈಮಾಸಿಕದಲ್ಲಿ ದೇಶದಲ್ಲೇ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ (ಎಫ್ಡಿಐ) ಆಕರ್ಷಿಸಿದೆ. ಕೊರೊನಾ ಸವಾಲುಗಳ ನಡುವೆಯೂ ಈ ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋ. ರೂ. ಹೂಡಿಕೆಯಾಗಿದೆ ಎಂದಿದ್ದಾರೆ.
ಭಾರತದ ಮೊದಲ ವಲಯ- ನಿರ್ದಿಷ್ಟ 3,540 ಕೋ. ರೂ. ಹೂಡಿಕೆ ಯಾಗಿ ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ಸರಕುಗಳ ಕ್ಲಸ್ಟರ್ ಹುಬ್ಬಳ್ಳಿಯಲ್ಲಿ ತಲೆಯೆತ್ತಲಿದೆ. ಆತ್ಮನಿರ್ಭರ ಭಾರತ ಪರಿಕಲ್ಪನೆಗೆ ಅನುಗುಣವಾಗಿ ಇಲ್ಲಿ ವಿಶ್ವದರ್ಜೆಯ ಸೌಲಭ್ಯ ಲಭ್ಯವಾಗ ಲಿದ್ದು, 20,000 ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ತಿಳಿಸಿದ್ದಾರೆ.
ಅಭಿವೃದ್ಧಿಗೆ ಪೂರಕವಾಗಿರುವ ಸಂಶೋಧನೆ ಮತ್ತು ನಾವೀನ್ಯಗಳನ್ನು ರಾಜ್ಯ ಪ್ರೋತ್ಸಾಹಿಸುತ್ತಲೇ ಬಂದಿದೆ. ಉಪಗ್ರಹ ತಂತ್ರಜ್ಞಾನ, ಸಾವಯವ ಕೃಷಿ, ಆಗೆ¾ಂಟೆಡ್ ರಿಯಾಲಿಟಿ ಇತ್ಯಾದಿ ವಿಭಿನ್ನ ಕಾರ್ಯಕ್ಷೇತ್ರಗಳಲ್ಲಿ ಕರ್ನಾಟಕದ 15 ನವೋದ್ಯಮಗಳು ರಾಷ್ಟ್ರೀಯ ನವೋದ್ಯಮ ಪ್ರಶಸ್ತಿ ಗೆದ್ದಿರುವುದು ಹೆಮ್ಮೆಯ ಸಂಗತಿ ಎಂದು ಸಂತಸ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.