ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವ ರಾಜ್ಯ: ಸಿಎಂ ಬೊಮ್ಮಾಯಿ


Team Udayavani, Oct 6, 2022, 3:37 PM IST

ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ಕೃಷಿ ಕ್ಷೇತ್ರದ ಡಿಜಿಟಲೀಕರಣದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಈವರೆಗೆ ರೈತರು, ಸರ್ವೆ ನಂಬರ್ ಹಾಗೂ ಆಧಾರ್ ಗಳನ್ನು ಜೋಡಿಸಲಾಗಿದ್ದು, 78 ಲಕ್ಷ ರೈತರನ್ನು ಈ ವ್ಯಾಪ್ತಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೇಂದ್ರ ಗೃಹ ಸಚಿವಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಇಂದು ನೈಸರ್ಗಿಕ ‌ಕೃಷಿ ಮತ್ತು ಡಿಜಿಟಲ್ ಕೃಷಿ ಕುರಿತು ನಡೆದ ವಿಡಿಯೋ ಸಂವಾದದಲ್ಲಿ ಗೃಹ ಕಚೇರಿ ಕೃಷ್ಣಾದಿಂದ ಪಾಲ್ಗೊಂಡು ಮಾತನಾಡಿದರು.

ಕೇಂದ್ರ ಕೃಷಿ ಪ್ರಧಾನ ಕಾರ್ಯದರ್ಶಿಗಳು ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂದಿರುವ ಬಗ್ಗೆ ಪ್ರಸ್ತಾಪಿಸಿದ್ದನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, ಭೂಮಿ ತಂತ್ರಜ್ಞಾನದಡಿ ಈ ಹಿಂದೆಯೇ ಡಿಜಿಟಲೀಕರಣವಾಗಿದೆ. 62 ಲಕ್ಷ ಭೂಮಿಯುಳ್ಳ ಹಾಗೂ 16 ಲಕ್ಷ ಭೂ ರಹಿತರನ್ನೂ ತಂತ್ರಾಂಶದಲ್ಲಿ ಸೇರಿಸಲಾಗಿದೆ. ಫ್ರೂಟ್ಸ್ ಯೋಜನೆಯನ್ನು ಎಲ್ಲಾ ರಾಜ್ಯ ಗಳೂ ಅಳವಡಿಸಿಕೊಳ್ಳುತ್ತಿವೆ ಎಂದರು.

ಈ ತಂತ್ರಾಂಶವನ್ನು ನಿರಂತರವಾಗಿ ಸುಧಾರಣೆ ಮಾಡಲಾಗುತ್ತಿದೆ. ಇದರ ಉಪಯೋಗ ಪಡೆದು ರೈತರನ್ನು ಜೋಡಿಸಲಾಗಿದೆ. ಕೇಂದ್ರ ಸರ್ಕಾರದ ಸ್ವಮಿತ್ವ ಯೋಜನೆಯನ್ನು ಕರ್ನಾಟಕದಲ್ಲಿ ಅಭಿಯಾನದ ರೀತಿಯಲ್ಲಿ ಕೈಗೊಂಡಿದೆ ಎಂದರು.

ಕ್ರಾಂತಿಕಾರಿ ನ್ಯಾನೋ ಯೂರಿಯಾ: ಕೃಷಿ ಕ್ಷೇತ್ರದಲ್ಲಿ ನ್ಯಾನೋ ಯೂರಿಯಾ ಕ್ರಾಂತಿಯನ್ನು ಉಂಟುಮಾಡಿದ್ದು, ಮೊದಲ ನ್ಯಾನೋ ಯೂರಿಯಾ ಘಟಕ ಬೆಂಗಳೂರಿನಲ್ಲಿದೆ.  ಅಧ್ಯಯನ ಮಾಡಿ, ರೈತರಿಗೂ ಪರಿಚಯಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ಹಾಗೂ ಬೆಂಬಲವಿದೆ ಎಂದು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.

ಇದನ್ನೂ ಓದಿ:ಥಾಯ್ಲೆಂಡ್ ಡೇಕೇರ್ ಸೆಂಟರ್‌ನಲ್ಲಿ ಭೀಕರ ಗುಂಡಿನ ದಾಳಿ : ಕನಿಷ್ಠ 31 ಬಲಿ

ಡಿಜಿಟಲ್ ತಂತ್ರಜ್ಞಾನದ ಮೂಲಕ ರೈತರೇ ತಮ್ಮ ಭೂಮಿಯ ಸಮೀಕ್ಷೆ ಮಾಡುತ್ತಿದ್ದಾರೆ. ಈವರೆಗೆ 212 ಕೋಟಿ ಭೂ ಪ್ರದೇಶವನ್ನು ಡಿಜಿಟಲೀಕರಣಗೊಳಿಸಲಾಗಿದೆ. ಬೆಳೆ ಸಮೀಕ್ಷೆಯನ್ನು ರೈತರೇ ಮಾಡುತ್ತಿದ್ದಾರೆ. 212 ಕೋಟಿ ಪೈಕಿ 16,584 ಬೆಳೆಗಳನ್ನು ರೈತರೇ ಸಮೀಕ್ಷೆ ಮಾಡಿದ್ದಾರೆ.1.61ಕೋಟಿ ಪ್ರದೇಶವನ್ನು ಇಲಾಖೆ ಮಾಡಿದೆ. ಯಾವುದೇ ವ್ಯಾಜ್ಯಕ್ಕೆ ಎಡೆ ಮಾಡಿಕೊಡದಿರಲು ಶೇ 100 ರಷ್ಟು ರೈತರೇ ಸಮೀಕ್ಷೆ ಮಾಡಲು ಕ್ರಮ ವಹಿಸಲಾಗುತ್ತಿದೆ. ರೈತರು ಅತ್ಯಂತ ಪ್ರಾಮಾಣಿಕವಾಗಿ ಇದನ್ನು ನಡೆಸಿದ್ದಾರೆ ಎಂದು ತಿಳಿಸಿದರು.

ನೈಸರ್ಗಿಕ ಕೃಷಿ ದೀರ್ಘಕಾಲಿಕ ಯೋಜನೆ: ನೈಸರ್ಗಿಕ ಕೃಷಿ ದೀರ್ಘಕಾಲಿಕ ಯೋಜನೆಯಾಗಿದ್ದು ಈ ಕುರಿತು ಸಂಶೋಧನೆ ಹಾಗೂ ಪ್ರಮಾಣೀಕರಣ ಅತ್ಯಂತ ಪ್ರಮುಖ ಅಂಶಗಳು ಸಿಎಂ ಬೊಮ್ಮಾಯಿ ತಿಳಿಸಿದರು.

ಕರ್ನಾಟಕ ನೈಸರ್ಗಿಕ ಕೃಷಿಯಲ್ಲಿ ಸಕ್ರಿಯ: ಪ್ರಧಾನಿ ನರೇಂದ್ರ ಮೋದಿಯವರ ರೈತರ ಆದಾಯ ದ್ವಿಗುಣಗೊಳಿಸುವ ಆಶಯದಂತೆ ಕರ್ನಾಟಕ ರಾಜ್ಯ ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳೊಂದಿಗೆ ನೈಸರ್ಗಿಕ ಕೃಷಿ ಯನ್ನು ಸಕ್ರಿಯವಾಗಿ ಕೈಗೊಂಡಿದೆ. ರಾಜ್ಯದಲ್ಲಿ 5 ಕೃಷಿ ಹಾಗೂ ತೋಟಗಾರಿಕಾ ವಿಶ್ವ ವಿದ್ಯಾಲಯಗಳಿದ್ದು, ವಿಶ್ವವಿದ್ಯಾಲಯಗಳ ನಿರಂತರ ಮೇಲ್ವಿಚಾರಣೆಯಲ್ಲಿ ನೈಸರ್ಗಿಕ ಕೃಷಿ ಯನ್ನು ತಲಾ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಕೈಗೊಳ್ಳಲಾಗಿದೆ ಬೆಳೆಗಳ ಗುಣಮಟ್ಟದಿಂದ ಹಿಡಿದು, ಉತ್ಪನ್ನ, ಪರೀಕ್ಷೆಗಳನ್ನು ಕೃಷಿ ಪ್ರಯೋಗಾಲಯದಲ್ಲಿ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ನೈಸರ್ಗಿಕ ಕೃಷಿಗೆ ಪರಿವರ್ತನೆ: ರಾಜ್ಯದಲ್ಲಿ 2.4 ಲಕ್ಷ ಎಕರೆ ಭೂ ಪ್ರದೇಶದಲ್ಲಿ ಕೈಗೊಂಡಿರುವ  ಸಾವಯವ ಕೃಷಿ ಭೂಮಿಯನ್ನು ನೈಸರ್ಗಿಕ ಕೃಷಿಗೆ ಕ್ರಮೇಣ ಪರಿವರ್ತಿಸಲಾಗುತ್ತಿದೆ. ಮುಂದಿನ ಮಾರ್ಚ್ ಒಳಗೆ ಹೊಸದಾಗಿ 1 ಲಕ್ಷ ಎಕರೆ ಪ್ರದೇಶವನ್ನು ನೈಸರ್ಗಿಕ ಕೃಷಿಗೆ ಪರಿವರ್ತನೆ ಮಾಡಲು ಗುರಿ ನಿಗದಿ ಪಡಿಸಲಾಗಿದೆ ಎಂದರು.

ನೈಸರ್ಗಿಕ ಕೃಷಿಗೆ 41, 434 ಕೃಷಿಕರನ್ನು ಆಯ್ಕೆ ಮಾಡಲಾಗಿದ್ದು, 1100 ತರಬೇತಿ ಕಾರ್ಯಕ್ರಮಗಳು, 200 ಕ್ಷೇತ್ರ ಭೇಟಿಗಳನ್ನು ಕೈಗೊಂಡಿದೆ ಹಾಗೂ   ಕಾರ್ಯಾಗಾರಗಳನ್ನು ಕೈಗೊಳ್ಳಲಾಗಿದೆ. ಒಟ್ಟಾರೆ ಯೋಜನೆಯನ್ನು ಮಿಷನ್ ಮಾದರಿಯಲ್ಲಿ ಕಾರ್ಯಗತ ಮಾಡಲಾಗುತ್ತಿದೆ ಎಂದರು.

ಮಣ್ಣಿನ ಫಲವತ್ತತೆ: ನೈಸರ್ಗಿಕ ಕೃಷಿಯಲ್ಲಿ ವೈಜ್ಞಾನಿಕ ಅಂಶಗಳನ್ನು ಕೂಡ ಗಮನದಲ್ಲಿಟ್ಟುಕೊಂಡು ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಲು ಒತ್ತು ನೀಡಲಾಗಿದೆ. ಮಣ್ಣಿನಲ್ಲಿ ಸಾರಾಜನಕ ಹಾಗೂ ಕಾರ್ಬನ್ ಪ್ರಮಾಣ ಸೇರಿದಂತೆ ನೈಸರ್ಗಿಕ ಗೊಬ್ಬರ ಬಳಕೆಗೂ ಮಹತ್ವ ನೀಡಲಾಗಿದೆ. ಪೈಟೋಸೈನಾಸಿಸಿಸ್ ಪರಿಣಾಮದ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ ಎಂದರಲ್ಲದೆ ಈ ಕುರಿತಂತೆ ಅಧ್ಯಯನಗಳು ಉತ್ತಮ ಇಳುವರಿ ಹಾಗೂ ಉತ್ಪಾದನೆಗೆ ಎಡೆ ಮಾಡಿಕೊಡುತ್ತದೆ ಎಂದು ತಿಳಿಸಿದರು.  ರೈತರು ಕೂಡ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.