ಕೆಎಸ್‌ಆರ್‌ಟಿಸಿ ಸಿಬಂದಿ ಕೊರತೆ; ನಿವೃತ್ತ ಚಾಲಕರ ಮೊರೆ
Team Udayavani, May 18, 2022, 7:05 AM IST
ಬೆಂಗಳೂರು: ಕೋವಿಡ್ ಅನಂತರ ಜನಜೀವನ ಸಹಜಸ್ಥಿತಿಗೆ ಮರಳಿದ್ದು, ಬಸ್ ಸೇವೆಗಳು ಕೂಡ ಹೆಚ್ಚಿದೆ. ಜನರದಟ್ಟಣೆಗೆ ಅನುಗುಣವಾಗಿ ಬಸ್‌ಗಳ ಕಾರ್ಯಾಚರಣೆಗೆ ಈಗ ಕೆಎಸ್‌ಆರ್‌ಟಿಸಿಯಲ್ಲಿ ಚಾಲನ ಸಿಬಂದಿ ಕೊರತೆ ಉಂಟಾಗಿದೆ!
ಬೇಡಿಕೆ ಹೆಚ್ಚಿರುವ ನಡುವೆಯೇ ಆರ್ಥಿಕ ಸಂಕಷ್ಟ ಉಂಟಾದ ಹಿನ್ನೆಲೆಯಲ್ಲಿ ಚಾಲ್ತಿಯಲ್ಲಿದ್ದ ಚಾಲನ ಸಿಬಂದಿ ನೇಮಕಾತಿ ಪ್ರಕ್ರಿಯೆ ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಆದ್ದರಿಂದ ನಿವೃತ್ತ ಚಾಲಕರ ಮೊರೆಹೋಗಿರುವ ಕೆಎಸ್‌ಆರ್‌ಟಿಸಿ, ಕಳೆದ ಮೂರು ವರ್ಷಗಳಲ್ಲಿ ನಾಲ್ಕೂ ಸಾರಿಗೆ ನಿಗಮಗಳಲ್ಲಿ ನಿವೃತ್ತಿ ಹೊಂದಿದ 63 ವರ್ಷ ಮೀರಿರದ ಚಾಲಕರನ್ನು ಮೂರು ತಿಂಗಳ ಮಟ್ಟಿಗೆ ತಾತ್ಕಾಲಿಕ ಆಧಾರದ ಮೇಲೆ ಚಾಲಕರನ್ನಾಗಿ ನೇಮಿಸಿಕೊಳ್ಳಲು ಉದ್ದೇಶಿಸಿದೆ.
ಮಂಗಳೂರಿನಲ್ಲೂ ವರದಿ ಮಾಡಿಕೊಳ್ಳಬಹುದು
ಈ ಸಂಬಂಧ ಕೆಲವು ಷರತ್ತಿಗೊಳಪಟ್ಟು ನಿಗಮದ ಹಲವು ವಿಭಾಗ ಗಳಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿದೆ. ಆಸಕ್ತ ಚಾಲಕರು ಸೂಕ್ತ ದಾಖಲೆಗಳೊಂದಿಗೆ ಪುತ್ತೂರು, ರಾಮನಗರ, ಚಾಮರಾಜನಗರ, ಮಂಗಳೂರು ವಿಭಾಗಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲುವಂತೆ ತಿಳಿಸಿದೆ. ದೈಹಿಕವಾಗಿ ಚಾಲನ ವೃತ್ತಿ ನಿರ್ವಹಣೆಗೆ ಸಮರ್ಥರಿದ್ದು, ವೈದ್ಯಕೀಯ ಪ್ರಮಾಣಪತ್ರ ಹಾಜರುಪಡಿಸಬೇಕು. ಪ್ರತೀ ದಿನದ 8 ಗಂಟೆಗಳ ಚಾಲನ ಅವಧಿಗೆ ಗೌರವಧನ ಪಾವತಿಸಲಾಗುವುದು. ಎಂಟು ಗಂಟೆ ಅನಂತರದಲ್ಲಿನ ಪ್ರತೀ ಗಂಟೆಗೆ ಹೆಚ್ಚುವರಿ ಭತ್ತೆ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.