Valmiki Corporation Scam: ಮಾಜಿ ಸಚಿವ ನಾಗೇಂದ್ರ, ಶಾಸಕ ದದ್ದಲ್ ವಿಚಾರಣೆ
ತನಿಖಾ ಸಂಸ್ಥೆಯ ಪ್ರಶ್ನೆಗಳ ಸುರಿಮಳೆಗೆ ಸುಸ್ತು ; ಇಂದು ಮತ್ತೆ ಬುಲಾವ್
Team Udayavani, Jul 10, 2024, 6:55 AM IST
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ಸಂಬಂಧ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಮಂಗಳವಾರ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಎದುರು ಹಾಜರಾಗಿ ವಿಚಾರಣೆ ಎದುರಿಸಿದರು. ಬುಧವಾರವೂ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಇವರಿಬ್ಬರಿಗೆ ಸೂಚಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಕಚೇರಿಯಲ್ಲಿರುವ ಎಸ್‌ಐಟಿ ಕಚೇರಿಗೆ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮಾಜಿ ಸಚಿವ ನಾಗೇಂದ್ರ ಹಾಜರಾದರು. ಬಳಿಕ ಸತತವಾಗಿ ಸಂಜೆ 5 ಗಂಟೆಯವರೆಗೆ ಎಸ್‌ಐಟಿ ಅಧಿಕಾರಿಗಳು ಮಾಜಿ ಸಚಿವರ ವಿಚಾರಣೆ ನಡೆಸಿದ್ದಾರೆ. ನೂರಕ್ಕೂ ಹೆಚ್ಚಿನ ಪ್ರಶ್ನೆಗಳಿಗೆ ಅವರಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ಅಪರಾಹ್ನ 3 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗಿ ಹಲವು ತಾಸು ವಿಚಾರಣೆ ಎದುರಿಸಿ ಹೊರಬಂದರು.
ನಿಗಮದಲ್ಲಿ ನಡೆದ ಹಗರಣದ ಬಗ್ಗೆ ಅಧ್ಯಕ್ಷ ಬಸವನಗೌಡ ದದ್ದಲ್ ನಿಮ್ಮ ಗಮನಕ್ಕೆ ತರಲಿಲ್ಲವೇ? ಇಷ್ಟು ದೊಡ್ಡ ಮೊತ್ತದ ಹಣ ವರ್ಗಾವಣೆಯಾದರೂ ನಿಮಗೆ ಸಣ್ಣ ಸುಳಿವೂ ಸಿಗಲಿಲ್ಲವೇ ಅಥವಾ ನಿಮ್ಮ ಗಮನಕ್ಕೆ ಬಂದೇ ಹಗರಣ ನಡೆದಿದೆಯೇ? ನಿಮ್ಮ ಸೂಚನೆ ಮೇರೆಗೆ ಈ ಹಗರಣ ನಡೆಸಲಾಗಿದೆಯೇ ಎಂಬಿತ್ಯಾದಿ ಪ್ರಶ್ನೆಗಳನ್ನು ಅಧಿಕಾರಿಗಳು ನಾಗೇಂದ್ರ ಮುಂದಿಟ್ಟರು. ಆದರೆ ನಾಗೇಂದ್ರ ಅವರು ಈ ಹಗರಣದಲ್ಲಿ ತನ್ನ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.